ಉಡುಪಿ ಉದ್ಯಾವರದಲ್ಲಿ ಆಟೋಗೆ ಗುದ್ದಿದ ಕಾರು : ಆಟೋ ಪುಡಿಪುಡಿ- ಚಾಲಕ ಗಂಭೀರ..!
ಉಡುಪಿ : ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂಬದಿಯಿಂದ ಕಾರು ಡಿಕ್ಕಿಹೊಡೆದು ಚಾಲಕ ಗಂಭೀರ ಗಾಯಗೊಂಡ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರ ಜಂಕ್ಷನ್ ನಲ್ಲಿ ಸಂಭವಿಸಿದೆ.
ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಉಡುಪಿಯಿಂದ ಉದ್ಯಾವರ ಕಡೆ ಹೋಗುತ್ತಿದ್ದ ರಿಕ್ಷಾಕ್ಕೆ ಡಿಕ್ಕಿಯಾಗಿದೆ.
ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.
ರಿಕ್ಷಾ ಚಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.