Connect with us

    DAKSHINA KANNADA

    ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ಏವಿಯೇಷನ್ ಕೋರ್ಸ್‌ ಆರಂಭ

    Published

    on

    ಮೂಡುಬಿದಿರೆ: ಏವಿಯೇಷನ್ ಕ್ಷೇತ್ರವು ವಿಪುಲ ಅವಕಾಶಗಳಿಗೆ ತೆರೆದುಕೊಳ್ಳುತ್ತಿರುವ ಉದ್ಯಮವಾಗಿ ಬೆಳೆಯುತ್ತಿದ್ದು ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಮುಂಬೈ ಏರೊಡೈನಾಮಿಕ್ಸ್ ಏವಿಯೇಷನ್ ಅಕಾಡೆಮಿ ಸ್ಥಾಪಕ ದೇವಿಪ್ರಸಾದ್ ಶೆಟ್ಟಿ ಹೇಳಿದರು.


    ಆಳ್ವಾಸ್ ಕಾಲೇಜಿನಲ್ಲಿ ಏವಿಯೇಷನ್ ಕೋರ್ಸ್‍ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹೊಸ ವಿಮಾನಯಾನ ನೀತಿಯಿಂದಾಗಿ ದೇಶದಲ್ಲಿ ಏವಿಯೇಷನ್ ಕಲಿತ ವಿದ್ಯಾರ್ಥಿಗಳಿಗೆ ಬೇಡಿಕೆ ಹೆಚ್ಚಾಗಲಿದೆ.

    ಹೀಗಾಗಿ ಕಡಿಮೆ ವೆಚ್ಚದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಆಳ್ವಾಸ್ ಕಾಲೇಜಿನಲ್ಲಿ ಏರೋಡೈನಾಮಿಕ್ಸ್ ಸಂಸ್ಥೆ ಈ ಕೋರ್ಸ್‌ ಆರಂಭಿಸಿದೆ ಎಂದು ಅವರು ವಿವರಿಸಿದರು.
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪನಾ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಏವಿಯೇಷನ್ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲಗಳ ಜೊತೆ ಶಿಷ್ಟಾಚಾರಗಳನ್ನೂ ಕಲಿಯಬೇಕು ಎಂದರು.
    ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಕುರಿಯನ್ ಅಧ್ಯಕ್ಷತೆ ವಹಿಸಿದ್ದರು.

    ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಲುಫ್ತಾನ್ಸಾ ಏರ್‌ಲೈನ್ಸ್‌ನ ಸಿಬ್ಬಂದಿ ಗೌತಮಿ ಭಂಡಾರಿ, ಸಹರಾ ಏರ್‌ವೇಸ್‍ನ ರೋಷನ್ ಡಿ’ಸೋಜಾ ಹಾಗೂ ಆಳ್ವಾಸ್ ಏವಿಯೇಷನ್ ಸಂಯೋಜಕಿ ರಾಜಶ್ರೀ ರಾವ್ ಇದ್ದರು. ರಾಜಶ್ರೀ ಸ್ವಾಗತಿಸಿ ನವ್ಯ ಭಟ್ ವಂದಿಸಿದರು. ವಿಕ್ರಮ್ ನಿರೂಪಿಸಿದರು.

    ಸಂಸ್ಥೆಯಲ್ಲಿ 6 ತಿಂಗಳ ಅವಧಿಯ ಕ್ಯಾಬಿನ್ ಸಿಬ್ಬಂದಿ ಅಥವಾ ಏರ್‌ಹಾಸ್ಟೆಸ್‌, 4 ತಿಂಗಳ ಅವಧಿಯ ಪ್ರೊಫೆಷನಲ್‌ ಕಸ್ಟಮರ್ ಸರ್ವಿಸ್ ಮ್ಯಾನೇಜ್‌ಮೆಂಟ್‌ ಟ್ರೇನಿಂಗ್ ಕೋರ್ಸ್‍ ಲಭ್ಯವಿದೆ.

    ತರಬೇತಿ ವಾರಾಂತ್ಯದಲ್ಲಿ ನಡೆಯುವುದರಿಂದ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಕೂಡ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    DAKSHINA KANNADA

    ಗಾಳಿಗೆ ಹಾರಿದ ಶಾಲೆಯ ಹೆಂಚು..! ರಜಾ ದಿನವಾದ ಕಾರಣ ತಪ್ಪಿದ ಅನಾಹುತ..!

    Published

    on

    ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ ದಿನವಾದ ಕಾರಣ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.


    ಭಾನುವಾರ ಜೋರಾದ ಗಾಳಿಯ ಜೊತೆ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮದ್ಯಾಹ್ನದ ವೇಳೆಗೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಜೋರಾದ ಗಾಳಿ ಬೀಸಿದೆ. ಇದರ ಪರಿಣಾಮವಾಗಿ ಬಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿದೆ. ಒಂದಷ್ಟು ಹೆಂಚುಗಳು ಶಾಲೆಯ ಹೊರಾಂಗಣದಲ್ಲಿ ಬಿದ್ದಿದ್ದರೆ, ಇನ್ನೂ ಕೆಲವು ಹೆಂಚುಗಳು ಶಾಲೆಯ ಕೊಠಡಿಯ ಒಳಗೆ ಬಿದ್ದಿದೆ. ಶಾಲೆಗೆ ಬಹುತೇಕ ಎಲ್ಲಾ ಕೊಠಡಿಯ ಹೆಂಚುಗಳು ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಭಾನುವಾರವಾದ ಕಾರಣ ಶಾಲೆಯಲ್ಲಿ ಮಕ್ಕಳು ಇರದ ಕಾರಣ ಯಾವುದೇ ಅನಾಹುತ ನಡೆದಿಲ್ಲ.


    ಬೀಸಿದ ಗಾಳಿಗೆ ಶಾಲೆಯ ಹೆಂಚಿನ ಜೊತೆಗೆ ಗ್ರಾಮದ ಕೃಷಿಕರ ಅಡಿಕೆ ತೋಟಕ್ಕೂ ಹಾನಿಯಾಗಿದೆ. ಹಲವು ಅಡಿಕೆ ಮರಗಳು ತುಂಡಾಗಿ ಬಿದ್ದಿದ್ದು, ಕೆಲವೆಡೆ ವಿದ್ಯುತ್ ತಂತಿಯ ಮೇಲೆ ಬಿದ್ದ ಕಾರಣ ವಿದ್ಯುತ್ ಕಂಬಕ್ಕೂ ಕೂಡಾ ಹಾನಿ ಸಂಭವಿಸಿದೆ.
    ಜುಲೈ 15 ಮತ್ತು 16 ರಂದು ಕೂಡಾ ಜೋರಾದ ಗಾಳಿಯ ಜೊತೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    Continue Reading

    DAKSHINA KANNADA

    ನಾಳೆ, ನಾಡಿದ್ದು ದ.ಕ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

    Published

    on

    ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಇಂದು, ನಾಳೆ ಮತ್ತು ನಾಡಿದ್ದು(ಜು.15,16,17) ಈ ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಿದೆ.

    ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳ

    ಜುಲೈ 17 ರಿಂದ 19 ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ದಿನವಿಡೀ ಉತ್ತಮ ಮಳೆ ಬಂದಿದೆ. ಮಳೆಯ ಜತೆಗೆ ಬಲವಾದ ಗಾಳಿಯೂ ಬೀಸುತ್ತಿದೆ. ಸಮುದ್ರದಲ್ಲಿ ಅಬ್ಬರದ ಅಲೆಗಳು ಕಂಡು ಬರುತ್ತಿವೆ. ಗಾಳಿಯ ರಭಸಕ್ಕೆ ಅಲ್ಲಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ, ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಬೆಳಗ್ಗೆ ಬೀಸಿದ ಬಲವಾದ ಗಾಳಿಗೆ ಉಳ್ಳಾಲ ತಾಲೂಕಿನ ಕೋಟೆಕಾರು ಬಳಿ ಬೀರಿ- ಪ್ರವಾಸಿ ಬಂಗ್ಲೆ ಕ್ರಾಸ್‌ ಸರ್ವೀಸ್‌ ರಸ್ತೆಯಲ್ಲಿ ಭಾರೀ ಗಾತ್ರದ ಮೇ ಫ್ಲವರ್‌ ಮರವೊಂದು ಉರುಳಿ ಬಿದ್ದ ಘಟನೆ ಸಂಭವಿಸಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆ ಬದಿ ನಿಲ್ಲಿಸಿದ್ದ ಎರಡು ಲಾರಿಗಳ ಮಧ್ಯೆಮರ ಬಿದ್ದ ಕಾರಣ ಅಪಾಯ ತಪ್ಪಿದೆ. ಅಲ್ಲದೆ ಇಂದು ಭಾನುವಾರ ಆಗಿದ್ದ ಕಾರಣ ಈ ರಸ್ತೆಯಲ್ಲಿ ವಾಹನ ಮತ್ತು ಜನ ಸಂಚಾರ ಕಡಿಮೆ ಇತ್ತು.

    Continue Reading

    DAKSHINA KANNADA

    ಎಂಎಸ್‌ಇಝೆಡ್‌ ನಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅವಘಡ

    Published

    on

    ಮಂಗಳೂರು : ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅನಾಹುತ ಸಂಭವಿಸಿದೆ. ಹೊತ್ತಿ ಉರಿದ ಘಟಕದಲ್ಲಿ ಭಾರಿ ಪ್ರಮಾಣದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಆಕಾಶದೆತ್ತರಕ್ಕೆ ಏರಿದೆ. ಘಟನೆ ಸ್ಥಳೀಯ ಜನರ ಗಮನಕ್ಕೆ ಬಂದ ತಕ್ಷಣ ಸಮೀಪದ ಗ್ರಾಮದ ಜನರು ಆತಂಕಗೊಂಡಿದ್ದಾರೆ.


    ಎಂಎಸ್‌ಇಝೆಡ್‌ ವ್ಯಾಪ್ತಿಯಲ್ಲಿ ಅನೇಕ ಕೆಮಿಕಲ್ ಫ್ಯಾಕ್ಟರಿ, ಪೆಟ್ರೋಲಿಯಂ ಉತ್ಪನ್ನಗಳ ಫ್ಯಾಕ್ಟರಿ ಇರುವುದು ಈ ಆತಂಕಕ್ಕೆ ಕಾರಣವಾಗಿದೆ. ಫ್ಯಾಕ್ಟರಿಯಲ್ಲಿ ಬೆಂ*ಕಿ ಅವಘ*ಡ ಸಂಭವಿಸಿದ ತಕ್ಷಣ ಅಲರ್ಟ್ ಆದ ಅ*ಗ್ನಿಶಾಮಕ ತಂಡ ಬೆಂ*ಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದೆ.

    ಇದನ್ನೂ ಓದಿ :  ಜಗತ್ತಿನ ದೊಡ್ಡಣ್ಣನಲ್ಲಿ ಹ*ತ್ಯೆಯಾದ ಅಧ್ಯಕ್ಷರುಗಳು ಇವರು..!

    ಎಂಎಸ್ಇಝೆಡ್‌, ಎಂಆರ್‌ಪಿಎಲ್ ಹಾಗೂ ಜಿಎಂಪಿಎಲ್‌ನ ಅ*ಗ್ನಿ ಶಾಮಕ ವಾಹನಗಳು ಫ್ಯಾಕ್ಟರಿಯಲ್ಲಿನ ಬೆಂ*ಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಎಸ್‌ಇಝೆಡ್‌ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅ*ಗ್ನಿ ಅವಘಡಗಳು ನಡಿತಾ ಇದ್ರೂ ಇದೊಂದು ಭಾರಿ ಅ*ಗ್ನಿ ಅವಘ*ಡವಾಗಿದೆ. ಆದ್ರೆ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳು ಸಂಭವಿಸಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

    Continue Reading

    LATEST NEWS

    Trending