ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ:ಎಲ್ & ಟಿ -ಟಾಟಾ ಸಂಸ್ಥೆಗೆ ನಿರ್ಮಾಣದ ಜವಾಬ್ದಾರಿ
ಅಯೋಧ್ಯೆ: ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮ ದೇವರ ಭವ್ಯ ಮಂದಿರದ ನಿರ್ಮಾಣ ಕಾರ್ಯವನ್ನು l&t ಮತ್ತು ಟಾಟಾ ಸಂಸ್ಥೆಗೆ ಒಪ್ಪಿಸಿರುವುದಾಗಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉತ್ತರ ಭಾರತದ ಪ್ರವಾಸದಲ್ಲಿರುವ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಸಂತ ಸಮಾವೇಶದಲ್ಲಿ ಭಾಗಿಯಾದ ವಿಶ್ವಪ್ರಸನ್ನ ತೀರ್ಥರು, ರಾಮಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ಮಂದಿರ ನಿರ್ಮಾಣ ಕಾರ್ಯದ ಜವಾಬ್ದಾರಿ ಎಲ್ ಅಂಡ್ ಟಿ ಕಂಪನಿಗೆ ವಹಿಸಲಾಗಿದೆ.
ಕಾಮಗಾರಿಯ ಮೇಲುಸ್ತುವಾರಿಯನ್ನು ಟಾಟಾ ಕಂಪನಿ ಗೆ ನೀಡಲಾಗಿದೆ. ಈ ಎರಡು ಜವಾಬ್ದಾರಿಯನ್ನು ಎರಡು ಕಂಪನಿಗಳು ಒಪ್ಪಿಕೊಂಡಿದೆ. ರಾಮಮಂದಿರದ ಕಾರ್ಯದರ್ಶಿ ಚಂಪತ್ ರಾಯ್ ಟ್ರಸ್ಟ್ ಕಡೆಯಿಂದ ನಿರ್ಮಾಣ ಕಾರ್ಯದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ಹೇಳಿದರು.