Connect with us

DAKSHINA KANNADA

ಹಿರಿಯ ವೈದ್ಯ  ಡಾ. ಬಿ ಎಂ ಹೆಗ್ಡೆಗೆ ಒಲಿಯಿತು ದೇಶದ ಎರಡನೇ ಅತ್ಯುನ್ನತ ಗೌರವ..!

Published

on

 

ಹಿರಿಯ ವೈದ್ಯ  ಡಾ. ಬಿ ಎಂ ಹೆಗ್ಡೆಗೆ ಒಲಿಯಿತು ದೇಶದ ಎರಡನೇ ಅತ್ಯುನ್ನತ ಗೌರವ..!

B.M Hegde, Senior physician awarded the Nation’s second highest national award..!

ಮಂಗಳೂರು: ನಾಡಿನ ಹೆಸರಾಂತ ವೈದ್ಯ ಬೆಳ್ಳೆ ಮೋನಪ್ಪ ಹೆಗ್ಡೆ , ಡಾ.ಬಿ.ಎಂ. ಹೆಗ್ಡೆ ಅವರು ದೇಶದ ಎರಡನೇ ರಾಷ್ಟ್ರೀಯ ಅತ್ಯುನ್ನತ ಪ್ರಶಸ್ತಿಯಾದ ಪದ್ಮ ವಿಭೂಷಣಕ್ಕೆ ಆಯ್ಕೆಯಾಗಿದ್ದಾರೆ.

ಹೃದ್ರೋಗ ತಜ್ಞರು, ವೈದ್ಯರಾಗಿ, ಅಧ್ಯಾಪಕರಾಗಿ, ಪರೀಕ್ಷಕರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಲೇಖಕರಾಗಿ, ಶಿಕ್ಷಣ ತಜ್ಞರಾಗಿ, ಉಪಕುಲಪತಿಗಳಾಗಿ, ವೈದ್ಯಕೀಯ ಕ್ಷೇತ್ರದಲ್ಲಿ ಅಗಾಧ ಸೇವೆ ಸಲ್ಲಿಸಿದ್ದಕ್ಕೆ ಹಲವು ಪ್ರಶಸ್ತಿಗಳು ಹೆಗ್ಡೆ ಅವರನ್ನು ಹುಡುಕಿಕೊಂಡು ಬಂದಿವೆ.2010ರಲ್ಲಿ ರಾಷ್ಟ್ರೀಯ ಅತ್ಯುನ್ನತ ಪ್ರಶಸ್ತಿಯಾದ ಪದ್ಮ ಭೂಷಣ ಲಭಿಸಿತ್ತು. ಈ ಬಾರಿ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿರುವುದು ಅವರ ಸೇವೆಗೆ ಸಂದ ಫಲವಾಗಿದೆ.

ಡಾ ಬಿ.ಎಂ. ಹೆಗ್ಡೆ 1938ರ ಆಗಸ್ಟ್ 18ರಂದು ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದರು. ಉಡುಪಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದರು.

ಹಿರಿಯಡ್ಕದ ಬೋರ್ಡ್ ಹೈಸ್ಕೂಲ್‌ನಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ, ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣವನ್ನು ಪೂರೈಸಿ, ಮದ್ರಾಸ್ ವಿಶ್ವವಿದ್ಯಾನಿಲಯದಿಂದ ವೈದ್ಯ ಪದವಿಯನ್ನು 1960ರಲ್ಲಿ ಪಡೆದರು.

ಪ್ರೊ. ಬೆರ್ನಾರ್ಡ್ ನಂತಹ ನೋಬೆಲ್ ಪಾರಿತೋಷಕ ಪುರಸ್ಕೃತ ವೈದ್ಯರ ಜೊತೆ ಕೆಲಸ ಮಾಡಿದ ಹೆಗ್ಡೆಯವರು ಲಂಡನ್ನಿನ ಕಾಲೇಜುಗಳ ಎಂಆರ್‌ಸಿಪಿ ಪರಿವೀಕ್ಷಕರಾಗಿ ಆಯ್ಕೆಯಾದ ಪ್ರಥಮ ಭಾರತೀಯರಾಗಿದ್ದಾರೆ.

ಸ್ನಾತಕ, ಸ್ನಾತಕೋತ್ತರ ಹಾಗೂ ಪಿಎಚ್‌ಡಿ ಪರಿವೀಕ್ಷಕರಾಗಿ ದಕ್ಷಿಣ ಅಮೆರಿಕ ಒಂದನ್ನು ಬಿಟ್ಟು ಜಗತ್ತಿನ ಉಳಿದ ಎಲ್ಲ ಖಂಡಗಳ ಪ್ರಮುಖ ವಿ.ವಿ.ಗಳಿಗೆ ತೆರಳಿದ ಸಾಧನೆ ಬಿ.ಎಂ. ಹೆಗ್ಡೆ ಅವರ ಹೆಸರಲ್ಲಿದೆ.

1982ರಿಂದ ಲಂಡನ್ ವಿವಿಯ ಶಾಶ್ವತ ಸಂದರ್ಶನ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಗಣ್ಯರು, ಕಸ್ತೂರ್ಬಾ ವೈದ್ಯಕೀಯ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಪ್ರಾಚಾರ್ಯರಾಗಿ, ಡೀನ್ ಆಗಿ ಕೊನೆಗೆ ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆಯ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿ ಈಗ ಮಂಗಳೂರಿನಲ್ಲಿ ಸಂತೃಪ್ತಿಯ ನಿವೃತ್ತ ಜೀವನವನ್ನು ನಡೆಸುತ್ತಿದ್ದಾರೆ.

1997ರಲ್ಲಿ ಕರ್ನಾಟಕ ರಾಜ್ಯೋತ್ಸವರ ಪ್ರಶಸ್ತಿ ಲಭಿಸಿದೆ. ವೈದ್ಯ ಲೋಕದ ಅತ್ಯುನ್ನತ ‘ಡಾ.ಬಿ.ಸಿ.ರಾಯ್’ ಪ್ರಶಸ್ತಿಯನ್ನು 1999ರಲ್ಲಿ ಪಡೆದಿದ್ದರು.

ಗಣರಾಜ್ಯದ ದಿನದಂದು  ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿರುವ ಡಾ। ಬಿ.ಎಂ ಹೆಗ್ಡೆಯವರ ಮನೆಯಲ್ಲಿ ದೇಶದ ಅತ್ಯುನ್ನತ ಪದ್ಮವಿಭೂಷಣ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ನೇತೃತ್ವದಲ್ಲಿ ಪ್ರಧಾನಿಸಲಾಯಿತು.

ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದಕ್ಕೆ ಡಾ ಬಿ ಎಂ ಹೆಗ್ಡೆ ಅವರು ಮಾಧ್ಯಮಗಳ ಮುಂದೆ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ..

ಡಾ. ಬಿ.ಎಂ ಹೆಗ್ಡೆಯವರಿಗೆ ಅಭಿನಂದಿಸಿದ ಸಂಸದ ಕಟೀಲ್- ಶಾಸಕ ವೇದವ್ಯಾಸ್.. 

ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾದ ಡಾ. ಬಿ.ಎಂ ಹೆಗ್ಡೆ ಅವರನ್ನು ಸಂಸದರೂ ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಶರತ್ ಕುಮಾರ್, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ, ಮನೋಹರ್ ಶೆಟ್ಟಿ ಕದ್ರಿ, ಸಂಧ್ಯಾ ಮೋಹನ್ ಆಚಾರ್, ಬಿಜೆಪಿ ಮುಖಂಡರಾದ ಸುದರ್ಶನ್ ಮೂಡಬಿದಿರೆ, ವಿಜಯ್ ಕುಮಾರ್ ಶೆಟ್ಟಿ,ನಿತಿನ್ ಕುಮಾರ್, ಸಂತೋಷ್ ರೈ ಬೋಳಿಯಾರು, ರಾಧಾಕೃಷ್ಣ, ರಾಮಚಂದ್ರ ಬೈಕಂಪಾಡಿ ಮುಂತಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BELTHANGADY

ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Continue Reading

DAKSHINA KANNADA

Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!

Published

on

ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ  ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Continue Reading

LATEST NEWS

Trending