ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಮಧ್ಯೆ ರಾಜಕೀಯ ಮೇಲಾಟಗಳು ನಡೆಯುತ್ತಿವೆ. ಇದರ ಮಧ್ಯೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹೇಳಿಕೆ ಸದ್ದು ಮಾಡಿದೆ.
ಬಿಜೆಪಿ ವಿಕೆಟ್‌ಗಳು ಪತನಗೊಳ್ಳುತ್ತಿವೆ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ. ಒಂದು ವೇಳೆ ಗೊತ್ತಿದ್ದರೂ ಕ್ಯಾಚ್ ಕೈಚೆಲ್ಲುತ್ತಿದ್ದಾರೆ ಎಂದು ಸಿಎಂ ಯೋಗಿ ವಿರುದ್ಧ ಲೇವಡಿ ಮಾಡಿದ್ದಾರೆ.
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮಿತ್ರ ಪಕ್ಷಗಳ ಭಿನ್ನ ಮಾನದಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ ’80 ವರ್ಸಸ್ 20 ಸ್ಪರ್ಧೆ’ (ಹಿಂದೂ ವರ್ಸಸ್ ಮುಸ್ಲಿಂ) ಹೇಳಿಕೆಗೆ ತಿರುಗೇಟು ನೀಡಿರುವ ಅಖಿಲೇಶ್, ಆದಿತ್ಯನಾಥ್ ಗಣಿತ ಶಿಕ್ಷಕರಾಗಬೇಕು ಎಂದು ಹೇಳಿದರು.
ಬಾಬಾ ಸಿಎಂ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ದೆಹಲಿಯಿಂದ ಯಾರೇ ಬಂದರೂ ಅವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದಿಲ್ಲ ಎಂದು ಹೇಳಿದರು.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಮತ್ತು ಇನ್ನೂ ಐವರು ಬಿಜೆಪಿ ಶಾಸಕರು ಸಮಾಜವಾದಿ ಪಕ್ಷ ಸೇರಿದ್ದಾರೆ.