Connect with us

DAKSHINA KANNADA

ಮಹಾಮಾರಿ ಕೊರೊನಾ ಹಿನ್ನೆಲೆ  ಇಂದಿನಿಂದ ಕೇರಳ-ದ.ಕ. ಗಡಿ ಸಂಚಾರಕ್ಕೆ ನಿರ್ಬಂಧ ಡಾ|ಕೆ.ವಿ.ರಾಜೇಂದ್ರ..!

Published

on

ಮಹಾಮಾರಿ ಕೊರೊನಾ ಹಿನ್ನೆಲೆ  ಇಂದಿನಿಂದ ಕೇರಳ-ದ.ಕ. ಗಡಿ ಸಂಚಾರಕ್ಕೆ ನಿರ್ಬಂಧ ಡಾ|ಕೆ.ವಿ.ರಾಜೇಂದ್ರ..!

ಮಂಗಳೂರು:  ದ.ಕ. ಜಿಲ್ಲೆಗೆ ಕೇರಳದ ಪ್ರಯಾಣಿಕರ ಆಗಮನವನ್ನು ಇಂದಿನಿಂದ ನಿರ್ಬಂಧಿಸಲಾಗುತ್ತಿದೆ. ನೆರೆಯ ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಳಿತ ಈ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.

ಮಂಗಳೂರು ತಾಲೂಕಿನ ತಲಪಾಡಿ, ಬಂಟ್ವಾಳದ ಸಾರಡ್ಕ, ಪುತ್ತೂರಿನ ನೆಟ್ಟಣಿಗೆ ಮುಡ್ನೂರು, ಮೇಣಾಲ ಮತ್ತು ಸುಳ್ಯ ತಾಲೂಕಿನ ಜಾಲ್ಸೂರು ಮೂಲಕ ಮಾತ್ರ  ಇಂದಿನಿಂದ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದ ಎಲ್ಲ ಗಡಿ ಸಂಚಾರವನ್ನು ಮುಂದಿನ ಆದೇಶದ ತನಕ ನಿರ್ಬಂಧಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರೂ 72 ಗಂಟೆಯೊಳಗೆ ನಡೆಸಲಾದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯ. ಇದನ್ನು ಪರಿಶೀಲಿಸಿಯೇ ಜಿಲ್ಲೆ ಪ್ರವೇಶಿಸಲು ಅನುಮತಿಸಲಾಗುತ್ತದೆ.

ಕ್ಯಾಟ್ ಪರೀಕ್ಷಾ ವರದಿಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ದೈನಂದಿನ ಪ್ರಯಾಣಿಕರ ಮಾಹಿತಿಯನ್ನು ಪ್ರತ್ಯೇಕವಾಗಿ ಪಡೆಯಬೇಕು.

ಪ್ರತಿದಿನ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ತಮ್ಮ ಗುರುತಿನ ಚೀಟಿಯನ್ನು ಹಾಗೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಚೆಕ್‌ಪೋಸ್ಟ್‌ನಲ್ಲಿ ಸಲ್ಲಿಸಬೇಕು.

 

ತಲಪಾಡಿ ಗಡಿಭಾಗದಲ್ಲಿ ಕೋವಿಡ್ ಚೆಕ್ ಪೋಸ್ಟ್ ಪುನರಾರಂಭಗೊಂಡಿದ್ದು ತಹಸೀಲ್ದಾರ್, ಡಿಹೆಚ್ ಓ ,ಮತ್ತು  ಪೊಲೀಸರಿಂದ ಕೇರಳದಿಂದ ಬರುವವರ ವಿಚಾರಣೆ ನಡೆಸಲಾಗುತ್ತಿದೆ. ಕೋವಿಡ್ ನೆಗೆಟಿವ್ ರಿಪೋಟ್೯ ಇದ್ದಲ್ಲಿ ಮಾತ್ರ ಇಂದಿನಿಂದ ಕರ್ನಾಟಕಕ್ಕೆ ಪ್ರವೇಶ ಸಾಧ್ಯ

ಎಲ್ಲ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳು ಕೋವಿಡ್ ನೋಡೆಲ್  ಅಧಿಕಾರಿಯನ್ನು ಕಡ್ಡಾಯವಾಗಿ ನೇಮಕ ಮಾಡಬೇಕು.ಆ್ಯಂಬುಲೆನ್ಸ್‌ಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕಾಲೇಜಿನ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ತುರ್ತು ಸಂದರ್ಭ ಹೊರತುಪಡಿಸಿ ಯಾರಿಗೂ ಪ್ರವೇಶವಿಲ್ಲ. ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಅಗತ್ಯ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending