Wednesday, October 20, 2021

ನೆಲ್ಯಾಡಿ: ತೂಗುಸೇತುವೆಯಲ್ಲಿ ಬ್ಯಾಗ್‌ ಜೊತೆ ಚಪ್ಪಲ್‌ ಪತ್ತೆ-ನದಿಗೆ ಹಾರಿರುವ ಶಂಕೆ

ನೆಲ್ಯಾಡಿ: ಇಲ್ಲಿನ ಉದನೆಯ ತೂಗುಸೇತುವೆಯಲ್ಲಿ ಪುರುಷರ ಒಂದು ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದ್ದು, ವ್ಯಕ್ತಿಯೋರ್ವ ನದಿಗೆ ಹಾರಿರುವ ಶಂಕೆ ವ್ಯಕ್ತಗೊಂಡಿದೆ.


ಬೆಳಿಗ್ಗೆ ಇದನ್ನು ಗಮನಿಸಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬ್ಯಾಗ್‌ನಲ್ಲಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದ್ದು ಅದರಲ್ಲಿ ರಮಣ, ತಂದೆ ಹೆಸರು: ಸುಬ್ರಹ್ಮಣ್ಯಂ, ಊರು: ಪುಟ್ಟಪರ್ತಿ ಎಂದಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ಬರೆದಿದ್ದ ಡೆತ್‌ನೋಟ್ ಸಹ ಪತ್ತೆಯಾಗಿದೆ.


ಅಲ್ಲದೇ ಸೆ.15ರಂದು ಧರ್ಮಸ್ಥಳದಿಂದ ಉದನೆಗೆ ಬಸ್ಸಿನಲ್ಲಿ ಪ್ರಯಾಣಿಸಿರುವ ಬಸ್ ಟಿಕೆಟ್ ಸಹ ಪತ್ತೆಯಾಗಿದೆ.

ನೆಲ್ಯಾಡಿ ಹೊರಠಾಣೆ ಎಎಸ್‌ಐ ಸೀತಾರಾಮ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಬ್ಯಾಗ್ ಪರಿಶೀಲನೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...