Thursday, August 11, 2022

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀರಾಮರೆಡ್ಡಿ ಇಂದು ಹೃದಯಘಾತದಿಂದ ನಿಧನ

ಚಿಕ್ಕಬಳ್ಳಾಪುರ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹೋರಾಟಗಾರರೂ ಆದ ಜಿ.ವಿ ಶ್ರೀರಾಮರೆಡ್ಡಿ ಹೃದಯಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.


ಮುಂಜಾನೆ 4 ಗಂಟೆ ಸುಮಾರಿಗೆ ಇದ್ದಕಿದ್ದಂತೆ ರಾಂರೆಡ್ಡಿಯವರಿಗೆ ತೀವ್ರವಾದ ಹೃದಯಾಘಾತವಾಗಿದ್ದು ,ತಕ್ಷಣ ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ, ಚಿಕಿತ್ಸೆ ಫಲಿಸದೆ ಬೆಳಗ್ಗೆ 7.27ರ ವೇಳೆಗೆ ಶ್ರೀರಾಮರೆಡ್ಡಿ ಮೃತಪಟ್ಟಿರುವುದಾಗಿ ತಾಲೂಕು ವೈದ್ಯಾಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ.

ರಾಮರೆಡ್ಡಿ ಸಿಪಿಐಎಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.
ಇವರ ನಿಧನಕ್ಕೆ ಬೆಂಬಲಿಗರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಇಂದೇ ಅವರ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ಕ್ರಿಯೆ ನೆರವೇರಲಿದೆ.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...