ಮಂಗಳೂರು/ ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಷರತ್ತು ಬದ್ದ ಜಾಮೀನು ಸಿಕ್ಕಿದೆ. ಇದು ದರ್ಶನ್ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸಹಜವಾಗಿಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿಗೂ ಇದು ಸಂಭ್ರಮದ ವಿಚಾರ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಖುಷಿ ಹಂಚಿಕೊಂಡಿದ್ದಾರೆ.
ಪೋಸ್ಟ್ ಏನು?
ದರ್ಶನ್ ಈಗಾಗಲೇ ಬೆನ್ನುನೋ*ವಿನ ಶಸ್ತ್ರ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಆದರೆ, ಈಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮಿ ದೇವಸ್ಥಾನಗಳಿಗೆ ಅಲೆಯುತ್ತಿದ್ದರು. ದೇವರಲ್ಲಿ ಪ್ರಾರ್ಥಿಸಿದ್ದರು. ಇದೀಗ ಆ ಪ್ರಾರ್ಥನೆ ಫಲಿಸಿದೆ ಎಂಬ ಅರ್ಥದಲ್ಲಿ ದೇವಾಲಯದಲ್ಲಿ ದೇವರ ಪ್ರಸಾದ ಹೂವನ್ನು ಹಿಡಿದು ಸ್ಟೋರಿ ಹಾಕಿದ್ದಾರೆ.
ಇನ್ನು, ದರ್ಶನ್ ಪುತ್ರ ವಿನೀಶ್ ದರ್ಶನ್ ಜೊತೆಗಿನ ಹಳೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಜೂ.11ರಂದು ನಟ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿತ್ತು. ಈಗಾಗಲೇ ಅವರಲ್ಲಿ 4 ಮಂದಿಗೆ ಜಾಮೀನು ಸಿಕ್ಕಿದೆ. ಇಂದು(ಡಿ.13) ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್, ಆರ್. ನಾಗರಾಜು, ಎಂ. ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ರಾವ್‌ಗೆ ಜಾಮೀನು ಮಂಜೂರಾಗಿದೆ.
ಮಂಗಳುರು/ ತೆಲಂಗಾಣ : ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳು ಅ*ಪಘಾತದಿಂದ ಜೀ*ವ ಕಳೆದುಕೊಂಡ ಘಟನೆ ತೆಲಂಗಾಣದ ಸಂಧ್ಯಾ ಟಾಕೀಸ್ ಬಳಿ ನಡೆದಿದೆ.
ಅ*ಪಘಾತದ ವೇಳೆ ತಾಯಿ ಹಾಗೂ ಮಗ ವಾಹನದಲ್ಲಿದ್ದರು. ತಾಯಿ ಮೃ*ತಪಟ್ಟಿದ್ದು, ಮಗ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃ*ತ ಮಹಿಳಯ ಕುಟುಂಬವನ್ನು ಭೇಟಿ ಮಾಡಿದ ತೆಲಂಗಾಣ ಸಿನಿಮಾಟೊಗ್ರಫಿ ಸಚಿವ ವೆಂಕಟ ರೆಡ್ಡಿ ಅವರಿಗೆ 25 ಲಕ್ಷ ಹಣ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೆಂಕಟ ರೆಡ್ಡಿ ‘ಪುಷ್ಪ 2’ ಸಿನಿಮಾ, ಅಲ್ಲು ಅರ್ಜುನ್ ಅನ್ನು ಟೀಕೆ ಮಾಡಿದ್ದಾರೆ. ತೆಲಂಗಾಣ ವಿಧಾನಸಭೆಯಲ್ಲಿಯೂ ಈ ಬಗ್ಗೆ ಮಾತನಾಡಿರುವ ಸಚಿವ ವೆಂಕಟ ರೆಡ್ಡಿ, ಚಿತ್ರರಂಗಕ್ಕೆ ನೀಡುತ್ತಿರುವ ಎಲ್ಲ ಸವಲತ್ತುಗಳನ್ನು ನಿಲ್ಲಿಸುತ್ತಿರುವದಾಗಿ ಘೋಷಣೆ ಮಾಡಿದ್ದಾರೆ.
ಈ ಘಟನೆ, ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ಭಾರಿ ಹೊಡೆತ ಕೊಟ್ಟಿದೆ. ಬಾಲಿವುಡ್ ನಂತರ ತೆಲುಗು ಚಿತ್ರರಂಗವೇ ಭಾರತದ ಅತ್ಯಂತ ದೊಡ್ಡ ಚಿತ್ರರಂಗ. ಬಾಕ್ಸ್ ಕಲೆಕ್ಷನ್ ಲೆಕ್ಕಹಾಕಿ ನೋಡಿದರೆ ಇಡೀ ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡುವ ಚಿತ್ರರಂಗ ಟಾಲಿವುಡ್. ಆದರೆ ಈಗ ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ಭಾರಿ ದೊಡ್ಡ ಹೊಡೆತ ನೀಡಿದೆ. ಹಾಗಾಗಿ ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರು, ಸ್ಟಾರ್ ನಟರು ಚಿಂತಾಮಗ್ನರಾಗಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸಿನಿಮಾ ಟಿಕೆಟ್ ದರಗಳು ಕಡಿಮೆ ಇವೆ. ಆದರೆ ಯಾವುದೇ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವ ಸಮಯದಲ್ಲಿ ನಿರ್ಮಾಪಕರು, ಸರ್ಕಾರದ ಬಳಿ ಮನವಿ ಮಾಡಿಕೊಂಡು ಟಿಕೆಟ್ ಬೆಲೆ ಹೆಚ್ಚಳ ಹಾಗೂ ಹೆಚ್ಚುವರಿ ಶೋ ಹಾಕಿಕೊಳ್ಳಲು ಅನುಮತಿ ಪಡೆದುಕೊಳ್ಳುತ್ತಾರೆ.
“ಇಷ್ಟು ದಿನ ತೆಲುಗು ಸಿನಿಮಾಗಳಿಗೆ ನೀಡಲಾಗುತ್ತಿದ್ದ ವಿಶೇಷ ಸವಲತ್ತುಗಳು, ಬೆನಿಫಿಟ್ ಶೋಗಳನ್ನು ರದ್ದು ಮಾಡಲಾಗುತ್ತಿದೆ. ಮಾತ್ರವಲ್ಲದೆ ತೆಲುಗು ಸಿನಿಮಾಗಳಿಗೆ ನೀಡಲಾಗುತ್ತಿದ್ದ ಟಿಕೆಟ್ ದರ ಹೆಚ್ಚಳ ಸವಲತ್ತನ್ನು ಸಹ ಹಿಂಪಡೆಯಲಾಗಿದೆ” ಎಂದು ಸಚಿವ ವೆಂಕಟ ರೆಡ್ಡಿ ತೆಲಂಗಾಣ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸ್ವಂತ ಖಾತೆಯಿಂದ 25 ಲಕ್ಷ ರೂಪಾಯಿ ಹಣವನ್ನು ಮೃ*ತ ಮಹಿಳೆಯ ಕುಟುಂಬಕ್ಕೆ ನೀಡುತ್ತಿರುವಾಗಿ ಹಾಗೂ ಐಸಿಯುನಲ್ಲಿರುವ ಬಾಲಕ ಶ್ರೀತೇಜ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳುವುದಾಗಿ ಹೇಳಿದ್ದಾರೆ.
ತೆಲಂಗಾಣ ಸರ್ಕಾರದ ಈ ನಿರ್ಣಯ ತೆಲುಗು ಚಿತ್ರರಂಗಕ್ಕೆ ಭಾರಿ ದೊಡ್ಡ ಪೆಟ್ಟು ನೀಡಲಿದೆ. ಟಿಕೆಟ್ ದರ ಹೆಚ್ಚಳ ಮತ್ತು ಹೆಚ್ಚುವರಿ ಶೋಗಳು ಇಲ್ಲದಿದ್ದರೆ ತೆಲುಗು ಸಿನಿಮಾಗಳು ಭಾರಿ ನಷ್ಟವನ್ನು ಎದುರಿಸಬೇಕಾಗುತ್ತದೆ. ತೆಲಂಗಾಣ ಸರ್ಕಾರದ ಈ ನಿರ್ಧಾರದಿಂದಾಗಿ ಬಿಗ್ ಬಜೆಟ್ ಸಿನಿಮಾಗಳು ಚಿಂತೆಗೆ ದೂಡಲ್ಪಟ್ಟಿವೆ. ಇದೀಗ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾದ ಮೇಲೆ ಭಾರಿ ಪರಿಣಾಮ ಬೀರಲಿದೆ. ಸಂಕ್ರಾಂತಿಗೆ ಸಹ ಕೆಲವು ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗಲಿದ್ದು, ಅವುಗಳಿಗೂ ಸಹ ಸಮಸ್ಯೆ ಆಗಲಿದೆ.
ಮಂಗಳೂರು/ಬೆಂಗಳೂರು: ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪವಿ ಪೂವಪ್ಪ ಅವರು ‘ಬಿಗ್ ಬಾಸ್ ಸೀಸನ್ 10’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಸದ್ಯ ಇವರ ಬ್ರೇಕಪ್ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ.
ನಾನು ಏಕೆ ಬ್ರೇಕಪ್ ಮಾಡಿಕೊಂಡೆ ಅನ್ನುವ ವಿಚಾರವನ್ನು ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನಲ್ ವೊಂದಕ್ಕೆ ನೀಡಿರುವ ಸಂದರ್ಶನವಿಗ ಸಖತ್ ವೈರಲ್ ಆಗುತ್ತಿದೆ. ಬಿಗ್ ಬಾಸ್ ಸಮಯದಲ್ಲಿ ತಮ್ಮ ಪ್ರೀತಿ ಬಗ್ಗೆ ಮಾತನಾಡಿದ್ದ ಪವಿ,’ನನ್ನ ಬಾಯ್ ಫ್ರೆಂಡ್ ಐರ್ ಲ್ಯಾಂಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ನಾವಿಬ್ಬರು ಮದುವೆಯಾಗುತ್ತಿದ್ದೇವೆ’ ಅಂತಾ ಹೇಳಿದ್ದರು.
ಹೌದು, ಡಿಜೆ ಮ್ಯಾಡಿ ಎಂಬುವವರ ಜೊತೆ ಪವಿ ಪೂವಪ್ಪ ಕಳೆದ ಐದು ವರ್ಷಗಳಿಂದ ರಿಲೇಷನ್ ಶಿಪ್ ನಲ್ಲಿದ್ದರು. ಈ ಜೋಡಿ ಶೀಘ್ರವೇ ಮದುವೆ ಆಗಲಿದೆ ಅಂತಾ ಅನೇಕರು ಅಂದುಕೊಂಡಿದ್ದರಂತೆ. ಆದರೆ ಇದು ಹುಸಿಯಾಗಿದ್ದು, ‘ನಮ್ಮಿಬ್ಬರ ನಡುವೆ ಬ್ರೇಕಪ್ ಆಗಿದೆ’ ಅಂತಾ ಸ್ವತಃ ಪವಿ ಅವರೇ ಯೂಟ್ಯೂಬ್ ಚಾನೆಲ್ ನ ಸಂದರ್ಶನದಲ್ಲಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪವಿ,”ನಾವು ಐದು ವರ್ಷಗಳಿಂದ ಜೊತೆಗಿದ್ದೇವೆ. ನಮ್ಮಿಬ್ಬರ ನಡುವೆ ಒಳ್ಳೆಯ ಹೊಂದಾಣಿಕೆ ಇತ್ತು. ಆದರೆ ಬರುಬರುತ್ತಾ ನನ್ನ ನಾಯಿ ಬಗ್ಗೆ ಅವರಿಗೆ ಸಮಸ್ಯೆ ಶುರುವಾಯಿತು. ಮದುವೆಯಾದ ಮೇಲೆ ಮನೆಯಲ್ಲಿ ನಾಯಿಯನ್ನು ಬಿಡುವುದಿಲ್ಲ ಅಂತಾ ಹೇಳಿದರು. ಇದರಿಂದಲೇ ನಮ್ಮಿಬ್ಬರ ನಡುವೆ ಸಮಸ್ಯೆ ಶುರುವಾಯ್ತು. ಸಣ್ಣಪುಟ್ಟ ವಿಚಾರಗಳಿಗೆ ಕಾರಣ ಕೊಡಲು ಶುರು ಮಾಡಿದರು. ಹೀಗಾಗಿ ನಾನು ಬ್ರೇಕಪ್ ತೀರ್ಮಾನಕ್ಕೆ ಬಂದೆ. ಇದರಿಂದ ನಾನೇ ಹಿಂದೆ ಸರಿದರೆ ಒಳ್ಳೆದು ಅನಿಸಿತು” ಅಂತಾ ಅವರು ಹೇಳಿಕೊಂಡಿದ್ದಾರೆ.
ಐದು ವರ್ಷಗಳ ಕಾಲ ರಿಲೇಷನ್ ಶಿಪ್ ನಲ್ಲಿದ್ದ ಜೋಡಿ ಇದೀಗ ಬ್ರೇಕಪ್ ಮಾಡಿಕೊಂಡಿರುವುದು ಸಾಕಷ್ಟು ಚರ್ಚೆಯಲ್ಲಿದೆ.
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.
ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಹಾರೈಸಿದ್ದಾರೆ. ಧೈರ್ಯ ತುಂಬವ ಕಾರ್ಯ ಮಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರಂತೆ ಇದ್ದಾರೆ.
ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ.
ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ಮಧು ಬಂಗಾರಪ್ಪ ಅವರು ಶಿವಣ್ಣ ಅವರ ಆಪ್ತ ಸಂಬಂಧಿ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಹ.
ನಟ ವಿನೋದ್ ರಾಜ್ ಕುಮಾರ್ ಅವರು ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಟ್ಟಿಗೆ ಕೆಲ ಸಮಯ ಕಳೆದಿದ್ದಾರೆ. ಹಳೆಯ ಗೆಳೆಯರಾದ ಇಬ್ಬರೂ ತುಸು ಸಮಯ ಹರಟೆ ಹೊಡೆದಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣನಿಗೆ ನೀಡಿದ್ದಾರೆ.
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. ಇಂದು ರಾತ್ರಿ 8:30ಗೆ ಶಿವಣ್ಣ ತೆರಳಲಿದ್ದು, ಅವರೊಟ್ಟಿಗೆ ಪತ್ನಿ ಗೀತಾ ಮತ್ತು ಮಗಳು ನಿವೇದಿತಾ ಸಹ ತೆರಳುವ ಸಾಧ್ಯತೆ ಇದೆ.