Connect with us

bengaluru

ಬೈಂದೂರಿನ ಹುಡುಗರ ಬೇಕರಿಗೆ ನುಗ್ಗಿ ಹಲ್ಲೆ: ಪಕ್ಕದ ಅಂಗಡಿಯಾತನಿಂದಲೇ ಸುಪಾರಿ-ನಾಲ್ವರು ಅರೆಸ್ಟ್

Published

on

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಉಡುಪಿಯ ಬೈಂದೂರಿನ ಯುವಕರ ಬೇಕರಿ ನುಗ್ಗಿ ಪುಡಿರೌಡಿಗಳು ದಾಂಧಲೆ ನಡೆಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಹಲ್ಲೆಗೊಳಗಾದ ಯುವಕರ ಅಂಗಡಿಯ ಪಕ್ಕದಲ್ಲೇ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್ ಎಂಬಾತ ಸುಪಾರಿ ಕೊಟ್ಟು ಈ ಕೃತ್ಯ ನಡೆಸಿರುವುದು ಬಹಿರಂಗವಾಗಿದೆ. ಮಂಜುನಾಥ್ ಸ್ಥಳೀಯ ಹುಡುಗರನ್ನು ಬಳಸಿಕೊಂಡು ಗಲಾಟೆ ಮಾಡಿಸಿದ್ದಾನೆ.

ಸುಫಾರಿ ಕೊಟ್ಟ ಮಂಜುನಾಥ್

ಹಲ್ಲೆಗೊಳಗಾಗಿರುವ ಯುವಕರ ಅಂಗಡಿ ಪಕ್ಕದಲ್ಲಿ ಮಂಜುನಾಥ್ ನ ಟೀ-ಕಾಫಿ ಅಂಗಡಿ ಇತ್ತು. ತನ್ನ ಅಂಗಡಿಯ ವ್ಯಾಪಾರಕ್ಕೆ ಈ ಅಂಗಡಿಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಿ ಸುಪಾರಿ ಕೊಟ್ಟು ಸ್ಥಳೀಯ ಹುಡುಗರ ಬಳಿ ಕೃತ್ಯ ನಡೆಸಲು ಹೇಳಿದ್ದಾನೆ. ಯುವಕರ ಮೇಲೆ ಪುಡಿರೌಡಿಗಳ ಹಲ್ಲೆಯ ವಿಡಿಯೋ ವೈರಲ್ ಆಗಿತ್ತು.

ವಿಡಿಯೊ ವೈರಲ್ ಬೆನ್ನಲ್ಲೇ ಹಲ್ಲೆ ಪ್ರಕರಣದ ಕುರಿತು ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೋ ಹಂಚಿಕೊಂಡು ಬೆಂಗಳೂರಿಗೆ ದುಡಿಮೆಗಾಗಿ ಬಂದವರ ಮೇಲೆ ಹಲ್ಲೆ ಮಾಡಿರುವ ಪುಡಿ ರೌಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಕೂಡಾ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಲ್ಲಿ ಮನವಿ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಪಕ್ಕದ ಅಂಗಡಿ ಮಾಲಕ ಮಂಜುನಾಥ್ ಸಹಿತ ನಾಲ್ವರನ್ನು ಬಂಧಿಸಲಾಗಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ. ಇವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

bangalore

ಕೊಳೆತ ಬಟ್ಟೆ ನೋಡಿ ರೈತನನ್ನು ಮೆಟ್ರೋಗೆ ಹತ್ತಿಸದ ಸಿಬ್ಬಂದಿ – ಭಾರಿ ಆಕ್ರೋಶ..!

Published

on

ಬೆಂಗಳೂರು: ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ ಬೆನ್ನಲೆ ಭಾರಿ ವಿರೋಧಕ್ಕೆ ಕಾರಣವಾಗಿದೆ.

ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್ ಪರಿಶೀಲನೆ ಮಾಡುವ ಸಿಬ್ಬಂದಿ ರೈತನನ್ನು ತಡೆದಿದ್ದಾರೆ. ಗಲೀಜು ಬಟ್ಟೆ ಹಾಕಿದ್ದೀರಾ, ತಲೆ ಮೇಲೆ ಮೂಟೆ ಇದೆ ಎಂದು ಹೇಳಿ ರೈತನನ್ನ ಮೆಟ್ರೋದಲ್ಲಿ ಪ್ರಯಾಣಿಸಲು ಅನುಮತಿ ಕೊಟ್ಟಿಲ್ಲ ಎನ್ನವ ವಿಡಿಯೋ ವೈರಲ್ ಆಗಿದೆ.

 

Continue Reading

bangalore

‘ಫಸ್ಟ್ ನೈಟ್ ವಿತ್ ದೆವ್ವ’ ಚಿತ್ರದ ಟೀಸರ್ ಬಿಡುಗಡೆ

Published

on

Film: ಬಿಗ್ ಬಾಸ್ ಸೀಸನ್ 4ರ ವಿಜೇತ ನಟ ಪ್ರಥಮ್ ನಾಯಕನಾಗಿ ನಟಿಸಿರುವ ‘ಫಸ್ಟ್ ನೈಟ್ ವಿತ್ ದೆವ್ವ’ ದ ಟೀಸರ್ ಬಿಡುಗಡೆಯಾಗಿದೆ.

ನವೀನ್ ಬೀರಪ್ಪ ನಿರ್ಮಾಣ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನ ಮಾಡಿರುವ ‘ಫಸ್ಟ್ ನೈಟ್ ವಿತ್ ದೆವ್ವ’ ಸಿನಿಮಾದಲ್ಲಿ ನಗು, ಹಾರಾರ್, ಕಾಮಿಡಿ, ಆಕ್ಷನ್ ಹಾಗೂ ಸೆಂಟಿಮೆಂಟ್ ಗಳನ್ನು ಒಳಗೊಂಡಿರುವ ಚಿತ್ರದಲ್ಲಿ ನಾಯಕ ನಟನಾಗಿ ಪ್ರಥಮ್, ನಾಯಕಿಯರಾಗಿ ನಿಖಿತ, ಜೀವಿತ ಹಾಗೂ ಸುಶ್ಮಿತ ಮೂವರು ನಟಿಸಿದ್ದಾರೆ. ಈ ಸಿನಿಮಾದ ಚಿತ್ರಕಥೆಯನ್ನು ಪ್ರಥಮ್ ಬರೆದಿರುತ್ತಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ರಮೇಶ್ ಭಟ್, ಹರೀಶ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನವೆಂಬರ್ ನಲ್ಲಿ ಈ ಚಿತ್ರ ಆರಂಭವಾಗಿತ್ತು. ಚಿತ್ರ ಆರಂಭವಾದ ತಕ್ಷಣ ಮೊದಲು ಬರುವ ಸನ್ನಿವೇಶವೇ ಮದುವೆ ದೃಶ್ಯ. ಮದುವೆಯನ್ನು ಬಹಳ ಆಸೆಯಿಂದ ಆದ ಹುಡುಗನಿಗೆ ತನ್ನ ಮೊದಲರಾತ್ರಿ ನಡೆಯುತ್ತಿರುವುದು ದೆವ್ವದ ಜೊತೆಗೆ ಎಂದು ತಿಳಿದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಚಿತ್ರದ ಕಥಾಸಾರಾಂಶ.

Continue Reading

bangalore

ಪತ್ನಿ ಜೊತೆ ರೊಮ್ಯಾಂಟಿಕ್ ಸ್ಟೆಪ್ ಹಾಕಿದ ಡಿ ಬಾಸ್

Published

on

ಇತ್ತೀಚೆಗಷ್ಟೇ ವಿವಾದದಲ್ಲಿ ಸಿಲುಕಿಕೊಂಡ ಚಾಲೆಂಜಿಗ್ ಸ್ಟಾರ್ ದರ್ಶನ್ ಇದೀಗ ಪತ್ನಿ ಜೊತೆ ರೊಮ್ಯಾಂಟಿಕ್ ಡ್ಯಾನ್ಸ್ ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸಾಮಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.


ಮೊನ್ನೆಯಷ್ಟೇ ದರ್ಶನ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪಾರ್ಟಿಯೊಂದನ್ನು ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪತ್ನಿಯೊಂದಿಗೆ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ ದರ್ಶನ್ ಅವರು ವಿಜಯಲಕ್ಷ್ಮಿ ಜೊತೆ ಕುಣಿಯುತ್ತಿರುವ ವಿಡಿಯೋ ವೈರಲ್ ಕೂಡ ಆಗಿದೆ.

Continue Reading

LATEST NEWS

Trending