DAKSHINA KANNADA
ಪಂಪ್ ವೆಲ್ ಭಿನ್ನ ಕೋಮಿನ ಜೋಡಿಗೆ ಹಲ್ಲೆ ಮಾಡಿದ್ದು, ಸಾರ್ವಜನಿಕರು : ಸುನೀಲ್ ಕೆ. ಆರ್.
ಮಂಗಳೂರು: ಮಂಗಳೂರಿನಲ್ಲಿ ಗುರುವಾರ ರಾತ್ರಿ ಖಾಸಗಿ ಬಸ್ನಲ್ಲಿ ಹೋಗುತ್ತಿದ್ದ ಭಿನ್ನ ಕೋಮಿನ ಜೋಡಿಯ ಮೇಲೆ ಹಲ್ಲೆ ನಡೆಸಿಲ್ಲ. ತಡೆದಿದ್ದೇವೆ ಮಾತ್ರ ಎಂದು ಬಜರಂಗದಳದ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಲವ್ ಜಿಹಾದ್ ವ್ಯಾಪಕವಾಗಿ ನಡೆಯುತ್ತಿದ್ದು,ಇದಕ್ಕೆ ಹಿಂದೂ ಹುಡುಗಿಯರನ್ನೇ ಟಾರ್ಗೇಟ್ ಮಾಡಲಾಗುತ್ತಿದೆ ಎಂದು ದೂರಿದರು,
ಹಿಂದೂ ಯುವತಿಯರನ್ನು ಲವ್ ಜಿಹಾದ್ ಮೂಲಕ ಮತಾಂತರಗೊಳಿಸಲು ತಂಡಗಳ ರಚನೆ ಮಾಡಲಾಗಿದೆ. ಇದರ ವಿರುದ್ಧ ಬಜರಂಗದಳ ಕಾರ್ಯಾಚರಣೆ ಮಾಡುತ್ತಿದೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಇಂತಹ ಜೋಡಿಗಳನ್ನು ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ.
ಮಂಗಳೂರಿನಲ್ಲಿ ಗುರುವಾರ ಕೂಡ ಇಂತಹುದೇ ಘಟನೆ ನಡೆದಿದ್ದು ಬಜರಂಗದಳ ಕಾರ್ಯಕರ್ತರು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜೋಡಿಯನ್ನು ತಡೆದಿದೆ.
ಆದರೆ ಈ ಸಂದರ್ಭದಲ್ಲಿ ಆಕ್ರೋಶಗೊಂಡಿದ್ದ ಸಾರ್ವಜನಿಕರು ಹಲ್ಲೆ ಮಾಡಿ ಚೂರಿಯಿಂದ ಇರಿದಿದ್ದಾರೆ. ಆದರೆ ಈ ಘಟನೆಯ ಹಿನ್ನೆಲೆ ಬಜರಂಗದಳ ಕಾರ್ಯಕರ್ತರ ಮೇಲೆ ವಿನ ಕಾರಣ ಸುಳ್ಳು ಕೇಸು ದಾಖಲಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸರ್ಕಾರ ಲವ್ ಜಿಹಾದ್ಗೆ ಕಡಿವಾಣ ಹಾಕಲು ಕಟ್ಟು ನಿಟ್ಟಿನ ಕಾನೂನು ತರಬೇಕೆಂದು ಒತ್ತಾಯಿಸಿದರು.
ಕಳೆದ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಪಂಪ್ವೆಲ್, ಬೆಳ್ತಂಗಡಿ, ಸುರತ್ಕಲ್ ಸಹಿತ ಸುಮಾರು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ, ಒಂದು ಹೆಣ್ಣು ಮಕ್ಕಳನ್ನು ಪ್ರಾಮಪಾಶಕ್ಕೆ ಸಿಲುಕಿಸಿ ಮತಾಂತರಕ್ಕೆ ವಡ್ಯಂತ್ರ ನಡೆಯುತ್ತಿದ್ದು, ಒಂದು ಕುಟುಂಬಗಳ ರಕ್ಷಣೆ ಮಾಡುವುದು ಸಂಘಟನೆಗಳ ಜವಾಬ್ದಾರಿಯಾಗಿದೆ ಎಂದು ಸುನೀಲ್ ಹೇಳಿದರು.
ಇಂತಹ ಪ್ರಕರಣಗಳನ್ನು ತಡೆಯಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಬಜರಂಗದಳ ಕಾರ್ಯಕರ್ತರೇ ಮುಂದಾಗಲಿದ್ದಾರೆ ಎಂದು ಎಚ್ಚರಿಸಿದರು.
ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ ,ವಿಭಾಗ ಸಂಚಾಲಕ ಭುಜಂಗ ಕುಲಾಲ್ ,ಜಿಲ್ಲಾ ಸಂಚಾಲಕ ಶ್ರೀಧರ ತೆಂಕಿಲ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು,
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.