ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಿನ್ನೆ ರಾತ್ರಿ ಶಿವಮೊಗ್ಗ ನಗರದಲ್ಲಿ ಹತ್ಯೆಗೈದಿದ್ದಾರೆ. ಘಟನೆ ಹಿನ್ನೆಲೆ ಗುಂಪಿನ ನಡುವೆ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಗೊಳಿಸಿದ್ದಾರೆ.
ಹರ್ಷ (24) ಎಂದು ಗುರುತಿಸಲಾಗಿದೆ.
ನಾಲ್ಕು ಜನರ ತಂಡವೊಂದು ಹರ್ಷನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಅಂತ ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದ್ದಾರೆ.
ಹಿಂದೂಪರ ಸಂಘಟನೆ ಕಾರ್ಯಕರ್ತನ ಹತ್ಯೆ ಹಿನ್ನೆಲೆ ನಗರದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹೆಚ್ಚುವರಿ ಪೊಲೀಸ್ ಪಡೆಯನ್ನ ನಗರದಾದ್ಯಂತ ನಿಯೋಜಿಸಲಾಗಿದ್ದು, ಶಾಂತಿ ಕದಡದಂತೆ ಕ್ರಮ ವಹಿಸಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಪರಿಸ್ಥಿತಿ ಹತೋಟಿಗೆ ತರಲು ಕ್ರಮವಹಿಸಿದ್ದಾರೆ.