Saturday, November 27, 2021

ಬಿರುಮಲೆ ಬೆಟ್ಟದಲ್ಲಿ ಗಾಂಜಾ ಅನೈತಿಕ ಚಟುವಟಿಕೆ : ಯುವತಿ – ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ ..!

ಬಿರುಮಲೆ ಬೆಟ್ಟದಲ್ಲಿ ಗಾಂಜಾ ಅನೈತಿಕ ಚಟುವಟಿಕೆ : ಯುವತಿ – ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ ..!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಓರ್ವ ಯುವತಿ ಹಾಗೂ ನಾಲ್ವರು ಯುವಕರನ್ನು ಭಜರಂಗದಳದ ಸಂಘಟನೆಯ ಕಾರ್ಯಕರ್ತರು ರೆಡ್‌ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ,

ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಅಕ್ರಮ ಕೂಟದಲ್ಲಿ ಭಾಗಿಯಾಗಿದ್ದ ತಂಡವನ್ನು ರೆಡ್‌ ಹ್ಯಾಂಡಾಗಿ ಹಿಡಿದಿದ್ದಾರೆ.

ಕೇರಳ ರಾಜ್ಯ ನೋಂದಾವಣೆಯಾಗಿರುವ ಕಾರಿನಲ್ಲಿ ಇಲ್ಲಿಗೆ ಬಂದಿದ್ದು ತಂಡದಲ್ಲಿ ಓರ್ವ ಯುವತಿ ಮತ್ತು ನಾಲ್ವರು ಯುವಕರಿದ್ದರು.

ಈ ತಂಡ ಗಾಂಜಾ ಸೇವಿಸಿ ಅನೈತಿಕ ಚಟುವಟಿಯಲ್ಲಿ ತೊಡಗಿಕೊಂಡಿದ್ದರು. ಕೂಡಲೇ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರಿಗೆ ಒಪ್ಪಿಸಿದ್ದಾರೆ.

ಪ್ರೀತಿಯ ಹೆಸರಿನ ನಾಟಕವಾಡಿ ಯುವತಿಯನ್ನುಪುಸಲಾಯಿಸಿ ಕಾರಿನಲ್ಲಿ ಕರೆತಂದು ಮಾದಕ ದ್ರವ್ಯ ತಿನ್ನಿಸಿ ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಬೃಹತ್ ಇದಾಗಿದೆ ಎಂದು ಸಂಕಿಸಲಾಗಿದ್ದು ಈ ನಿಟ್ಟಿನಲ್ಲಿ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...