Friday, August 19, 2022

ಕೊಡಗಿನಲ್ಲಿ ಹೊತ್ತಿದ ಧರ್ಮ ಕಿಡಿ: ಮುಸ್ಲಿಂ ವ್ಯಾಪಾರಿಗಳನ್ನು ಹೊರದಬ್ಬಿದ ಬಜರಂಗದಳ

ಮಡಿಕೇರಿ: ಇಲ್ಲಿನ ಶನಿವಾರಸಂತೆ ಸಮೀಪದ ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕುಲ ಗೋವು ಸಮ್ಮೇಳನ’ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು ತೆರವುಗೊಳಿಸಿದ್ದಾರೆ.


ಮಕ್ಕಳ ಆಟಿಕೆ ವಸ್ತು, ಕಬ್ಬಿನ ಜ್ಯೂಸ್, ತಿಂಡಿ ತಿನಿಸುಗಳ ಮಳಿಗೆಯನ್ನು ಮುಸ್ಲಿಂ ಸಮುದಾಯದ ವರ್ತಕರು ಹಾಕಿದ್ದರು. ‘ಗೋವು ಹತ್ಯೆ ಮಾಡುವರು, ಗೋವು ಸಮ್ಮೇಳನಕ್ಕೆ ಏಕೆ ಬರಬೇಕು. ಅವರಿಗೆ ಅವಕಾಶ ನೀಡುವುದಿಲ್ಲ’ ‘ಹಿಂದೂಗಳು ನಡೆಸುವ ಜಾತ್ರೆಯ ವೇಳೆ ಮುಸ್ಲಿಂ ವರ್ತಕರಿಗೆ ಅವಕಾಶ ನೀಡುವುದಿಲ್ಲ.

ಬೇಕಿದ್ದರೆ ಅವರ ಧಾರ್ಮಿಕ ಸ್ಥಳಗಳ ಬಳಿ ವ್ಯಾಪಾರ ಮಾಡಿಕೊಳ್ಳಲಿ ಎಂದು ಅಲ್ಲಿನ ರಸ್ತೆ ಬದಿ ಹಾಗೂ ಮೈದಾನದಲ್ಲಿ ಹಾಕಿದ್ದ ಅಂಗಡಿಗಳನ್ನು ಕಾರ್ಯಕರ್ತರು ತೆರವುಗೊಳಿಸಿದರು.


ಈ ವೇಳೆ ಸೋಮವಾರಪೇಟೆ ತಾಲ್ಲೂಕು ಸಂಚಾಲಕ ಜೀವನ್‌, ಬಜರಂಗದಳ ಪ್ರಖಂಡರಾದ ಜೀವನ್ ನೇಗಳ್ಳೆ, ಮಧು ಕಿಬ್ಬೆಟ್ಟ, ಪ್ರದೀಪ್, ಪಿ.ಕೆ.ರವಿ, ತನ್ಮಯ್, ಸತ್ಯ, ವಿಶ್ವ, ನಿಶ್ಚಿತ್, ಯಶು, ಮಂಜೇಶ, ದರ್ಶನ್ ಹಾಜರಿದ್ದರು.

LEAVE A REPLY

Please enter your comment!
Please enter your name here

Hot Topics

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ...