Connect with us

LATEST NEWS

ಬಿಜೆಪಿ ನಾಯಕ ಯಶ್ಪಾಲ್ ಸುವರ್ಣಾಗೆ ಮುಗಿಸುವ ಬೆದರಿಕೆ ಹಾಕಿದ್ದ ಬಜ್ಪೆ ‘ ಮಹಮ್ಮದ್ ಶಫಿ ‘ ಅರೆಸ್ಟ್..!

Published

on

ಉಡುಪಿ : ಬಿಜೆಪಿ ನಾಯಕ ಉಡುಪಿಯ ಯಶ್ಪಾಲ್ ಸುವರ್ಣಾ ಗೆ ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಉಡುಪಿ ಕಾಪು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶಫಿ ಬಂಧಿತ ಆರೋಪಿಯಾಗಿದ್ದಾನೆ. ಮಾರಿ ಗುಡಿ ಪೇಜ್ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಯಶ್ಪಾಲ್ ಸುವರ್ಣ ರಿಗೆ ಶಫಿ ಜೀವ ಬೆದಿಕೆ ಹಾಕಿದ್ದ.

ಇದೀಗ ಉಡುಪಿ ಪೊಲೀಸರು ಪೇಜ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ಮಂಗಳೂರಿನ ಸುರತ್ಕಲ್ ನಲ್ಲಿ ಶಫಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನದ ವಶದಲ್ಲಿದ್ದಾರೆ.

ಐಪಿ ವಿಳಾಸದ ಮೂಲಕ ಆರೋಪಿ ಶಫಿಯನ್ನು ಉಡುಪಿ ಕಾಪು ಪೊಲೀಸರು ಬಂಧಿಸಿದ್ದಾರೆ.

ಶಫಿ ಮೂಲತಃ ಮಂಗಳೂರಿನ ಬಜ್ಪೆಯವನಾಗಿದ್ದು ಸುರತ್ಕಲ್ ಭಾಗದಲ್ಲಿ ಲಾಜಿಸ್ಡಿಕ್ ನಲ್ಲಿ ಲಾರಿಗಳ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿವಾದಿತ ಮಳಲಿ ಮಸಿದಿ ವಿಚಾರಲ್ಲಿ ಯಶ್ಪಾಲ್ ಸುವರ್ಣ ಅವರನ್ನು ಟಾರ್ಗೆಟ್ ಮಾಡಿರುವುದಾಗಿ ಮಹಮ್ಮದ್ ಶಫಿ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾನೆ.

ಮಹಮ್ಮದ್ ಶಫಿ ಬಂಧನದ ಬಳಿಕ ಇನ್ಸ್ಟಾಗ್ರಾಮ್ ನ ಮಾರಿಗುಡಿ ಪೇಜ್ ನಲ್ಲಿರುವ ಎಲ್ಲಾ ಪೋಸ್ಟ್ ಡಿಲಿಟ್ ಮಾಡಲಾಗಿದೆ..

ಈತನ ಜೊತೆಗೆ ಕೈಜೋಡಿಸಿರುವ ಮಹಮ್ಮದ್ ಆಸಿಫ್‌ ಎಂಬವನಿಗೂ ಪೊಲೀಸರು ಬಲೆ ಬೀಸಿದ್ದಾರೆ.

ಮಹಮ್ಮದ್ ಆಸೀಫ್ ಆಲಿಯಾಸ್ ಆಶಿಕ್ ದುಬೈ ನಲ್ಲಿ ನೆಲೆಸಿದ್ದಾನೆ. ಈತನ ಬಂಧನಕ್ಕೂ ಬೇಕಾದ ಪ್ರಕ್ರೀಯೆಗಳನ್ನು ಆರಂಭಿಸಲಾಗಿದೆ ಎಂದು ಉಡುಪಿ ಎಎಸ್ಪಿ ಎಸ್.ಟಿ ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ

LATEST NEWS

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾ*ವು

Published

on

ಮಂಡ್ಯ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾ*ವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾ*ವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃ*ತಪಟ್ಟಿದ್ದಾರೆ.

ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾ*ವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ.

ಮಿಮ್ಸ್ ಆಸ್ಪತ್ರೆಗೆ ಶ*ವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

LATEST NEWS

WATCH : ಪತಿ ಬಿಟ್ಟು ಪರಪುರುಷನೊಂದಿಗೆ ಜಾಲಿ ರೈಡ್; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಕೆಗೆ ಪತಿ ಏನು ಮಾಡ್ದ ಗೊತ್ತಾ!?

Published

on

ಮಂಗಳೂರು/ ಹರಿಯಾಣ : ಇತ್ತೀಚೆಗೆ ದಾಂಪತ್ಯ ಜೀವನದಲ್ಲಿ ಬಿರುಕು ಸಾಮಾನ್ಯವಾಗಿದೆ. ಅನೈತಿಕ ಸಂಬಂಧಗಳೂ ಹೆಚ್ಚಾಗಿವೆ. ಇದೀಗ ಅಂತಹುದೇ ಒಂದು ಘಟನೆ ನಡೆದಿದೆ. ಆದರೆ, ಇಲ್ಲಿ ಪತ್ನಿ ಪರಪುರುಷನೊಂದಿಗೆ ಇದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾಳೆ. ಅಷ್ಟೇ ಅಲ್ಲ, ಧರ್ಮದೇಟೂ ತಿಂದಿದ್ದಾಳೆ.

ಹರಿಯಾಣದ ಪಂಚಕುಲದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವೀಡಿಯೋದಲ್ಲಿ ಏನಿದೆ?

ಪಂಚಕುಲದ ಸೆಕ್ಟರ್ 26ರ ಉದ್ಯಾನವನದಲ್ಲಿ ಪತ್ನಿ ಬೇರೊಬ್ಬ ಪುರುಷನೊಂದಿಗೆ ಕಾರಿನಲ್ಲಿದ್ದಳು. ಇದನ್ನು ಗಮನಿಸಿದ ಪತಿ ಬ್ಯಾಟಿನಿಂದ ಕಾರಿನ ಕಿಟಕಿ ಗಾಜು ಒಡೆದಿದ್ದಾನೆ. ಅಷ್ಟು ಮಾತ್ರವಲ್ಲ, ಅವಳನ್ನು ಹೊರಗೆಳೆದು ನಡುರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ.

ಇದನ್ನೂ ಓದಿ : ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

ಈ ದೃಶ್ಯಾವಳಿಗಳನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದು, ವೀಡಿಯೋ ವೈರಲ್ ಆಗುತ್ತಿದೆ.

ಪತಿ ಬಂಧನ :

ಇನ್ನು ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಘಟನೆಯ ಬೆಂಬತ್ತಿದ್ದಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪಂಚಕುಲದ ಸೆಕ್ಟರ್ 26ರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending