DAKSHINA KANNADA
ಗಡೀಪಾರಿನ ಮೂಲಕ ಬಜರಂಗದಳ ಮಟ್ಟ ಹಾಕ್ತೇವೆನ್ನುವುದು ಭ್ರಮೆ : ಪೊಲೀಸ್ ಇಲಾಖೆಗೆ ಪುನೀತ್ ಅತ್ತಾವರ ಸವಾಲು..!
ಗಡೀಪಾರಿನ ಮೂಲಕ ಬಜರಂಗದಳ ಮಟ್ಟ ಹಾಕ್ತೇವೆನ್ನುವುದು ಭಾವಿಸಿದ್ರೆ ಅದು ಭ್ರಮೆ ಎಂದು ಬಜರಂಗದಳದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಗುಡುಗಿದ್ದಾರೆ.
ಮಂಗಳೂರು :ಗಡೀಪಾರಿನ ಮೂಲಕ ಬಜರಂಗದಳ ಮಟ್ಟ ಹಾಕ್ತೇವೆನ್ನುವುದು ಭಾವಿಸಿದ್ರೆ ಅದು ಭ್ರಮೆ ಎಂದು ಬಜರಂಗದಳದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಗುಡುಗಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರೀಯಿಸಿದ ಪುನೀತ್ ಅತ್ತಾವರ ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಎನ್ನುವ ಹೇಳಿಕೆ ನೀಡಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುಗಳ ದಮನ ಕಾರ್ಯ ಶುರುವಾಗಿದೆ.
ಇದಕ್ಕೆ ಪೂರಕ ಎಂಬಂತೆ ಮೂವರು ಬಜರಂಗಳದ ಕಾರ್ಯಕರ್ತರನ್ನು ಗಡೀಪಾರು ಮಾಡುತ್ತೇವೆ ಎಂದು ಪೊಲೀಸ್ ಇಲಾಖೆ ಮೂಲಕ ಸರಕಾರ ನೊಟೀಸ್ ನೀಡಿದೆ.
ಸರಕಾರ ಪೊಲೀಸ್ ಇಲಾಖೆ ಮೂಲಕ ಬಜರಂಗದಳದ ಕಾರ್ಯಕರ್ತರನ್ನು ನಿಯಂತ್ರಿಸಲು ಮುಂದಾಗುತ್ತಿದ್ದಾರೆ.
ರಾಜಕೀಯ ತುಷ್ಟೀಕರಣ, ಮುಸ್ಲಿಮರನ್ನು ಖುಷಿಪಡಿಸಲು ಇವರು ಮುಂದಾಗಿದ್ದಾರೆ. ಕೇಸುಗಳನ್ನು ಹಾಕಿಸಿ ನಮ್ಮ ಕಾರ್ಯಕರ್ತರ ಕೆಲಸಗಳಿಗೆ ಅಡ್ಡಿ ಪಡಿಸಬೇಕೆಂದು ತೀರ್ಮಾನಿಸಿದ್ದರೆ ಅದು ನಿಮ್ಮ ಭ್ರಮೆ ಎಂದರು.
ನಮ್ಮ ಕಾರ್ಯಕರ್ತರು ಗೋವಿನ ರಕ್ಷಣೆ, ಲವ್ ಜಿಹಾದ್‌ನಲ್ಲಿ ಬಲಿಯಾದ ಹೆಣ್ಣುಮಕ್ಕಳ ರಕ್ಷಣೆಗೋಸ್ಕರ, ಸಮಾಜದಲ್ಲಿ ಆಗುವ ಹಿಂದು ವಿರೋಧಿ ಕೃತ್ಯಗಳ ವಿರುದ್ಧ ಹೋರಾಟ ನಡೆಸಿದ್ದೇವೆ.
ನಮ್ಮಲ್ಲಿ ಸಾವಿರಾರು ಕಾರ್ಯಕರ್ತರು ಇದ್ದಾರೆ. ಕೇವಲ ಮೂವರು ಕಾರ್ಯಕರ್ತರನ್ನು ಗಡೀಪಾರು ಮಾಡಿದರೆ ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಮುಸ್ಲಿಮರ ಮತ ಪಡೆಯಲು ಹಿಂದು ಕಾರ್ಯಕರ್ತರನ್ನು ಗಡೀಪಾರು ಮಾಡುವುದು, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಲು ಮುಂದಾಗುವುದಾದರೆ ನಮ್ಮಲ್ಲಿ ಇರುವ ಸಾವಿರಾರು ಕಾರ್ಯಕರ್ತರು ಬೀದಿಗೆ ಇಳಿದು ಹೋರಾಟ ಮಾಡುತ್ತಾರೆ ಎಂದರು.
ಸರಕಾರ ಹಿಂದು-ಮುಸ್ಲಿಂ ಬೇಧವಿಲ್ಲದೇ ಎಲ್ಲರನ್ನೂ ಸಮಾನ ದೃಷ್ಟಿಯಲ್ಲಿ ನೋಡಬೇಕು.
ಬಜರಂಗದಳದ ಕಾರ್ಯಕರ್ತರನ್ನು ಕಾನೂನು ಪ್ರಕಾರ ದಮನಿಸಲು ಮುಂದಾದರೆ ಸರಕಾರದ ವಿರುದ್ಧ, ಪೊಲೀಸ್ ಇಲಾಖೆ ವಿರುದ್ಧವೂ ನಾವು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.
ಗೋವಿನ ರಕ್ಷಣೆಗಾಗಿ ನಾವು ಯಾವ ತ್ಯಾಗಕ್ಕೂ ಸಿದ್ಧರಿದ್ದೇವೆ. ಇದುವರೆಗೆ ನಾವು ಪೊಲೀಸರಿಗೆ ಮಾಹಿತಿ ನೀಡಿ ಅದನ್ನು ತಡೆಹಿಡಿಯುವ ಕೆಲಸ ಮಾಡಿದ್ದೇವೆ.
ಆದರೆ ಇಷ್ಟು ಮಾಡಿ ನಮ್ಮ ವಿರುದ್ದವೇ ಪೊಲೀಸರು ಕ್ರಮ ಜರುಗಿಸುವುದಾದರೆ ನಾವು ಅವರಿಗೆ ಮಾಹಿತಿ ಏಕೆ ನೀಡಬೇಕು ಎಂದು ಪ್ರಶ್ನಿಸಿದ ಪುನೀತ್ ಬಜರಂಗದಳದ ಕಾರ್ಯಕರ್ತರಿಗೆ ನೊಟೀಸ್ ನೀಡಿ ಗಡಿಪಾರು ಮಾಡುವ ಮುನ್ನ ಪೊಲೀಸ್ ಇಲಾಖೆ ಈ ಬಗ್ಗೆ ನೂರು ಬಾರಿ ಯೋಚಿಸುವುದು ಒಳ್ಳೆಯದು ಎಂದು ಗುಡುಗಿದ್ದಾರೆ.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮೇಯರ್ ಫೋನ್ ಇನ್ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್ ಇನ್ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್, ಕಂಕನಾಡಿ ಜಂಕ್ಷನ್, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.
ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.
ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.
ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್ ಅತಿಕ್ರಮಣ ನಡೆಸಿದ್ದಾರೆ.
ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿದೆ.
ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
bengaluru
ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ಡೇಟ್ ಫಿಕ್ಸ್-ಅಶೋಕ್ ಕುಮಾರ್ ರೈ
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.
ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.
ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ.
ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!