Connect with us

DAKSHINA KANNADA

ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಪರ ವಕಾಲತ್ತು ಮಾಡಬೇಡಿ : ವಕೀಲರ ಸಂಘಕ್ಕೆ ಬಜರಂಗದಳ ಮನವಿ..!

Published

on

ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ನೀಡಿದೆ.

 

ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ನೇತೃತ್ವದ ನಿಯೋಗ ವಕೀಲರ ಸಂಘದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ.

ಮೊಹಮ್ಮದ್ ಶಾರೀಕ್ ಎಂಬಾತ ನಗರದಲ್ಲಿ ಕಳೆದ ವಾರ ನಡೆಸಿದ ಬಾಂಬ್‌ ಬ್ಲಾಸ್ಟ್ ನ ಕೃತ್ಯದಿಂದ ಮಂಗಳೂರಿನ ಜನತೆ ಹೆದರಿಕೆಯಿಂದ ಸಮಾಜದಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಹಲವು ಮೂಲಗಳಿಂದ ಮತ್ತು ಪತ್ರಿಕೆಗಳಲ್ಲಿನ ಮಾಹಿತಿಯಿಂದ ಶಾರೀಕ್ ಐಸಿಸ್ ನಂತಹ ಉಗ್ರ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದ್ದನು ಎಂಬ ವಿಚಾರವು ನಮ್ಮ ಗಮನಕ್ಕೆ ಬಂದಿರುತ್ತದೆ.

ಇಂತಹ ಸನ್ನಿವೇಶಗಳಿಂದ ನಮ್ಮ ನಾಗರಿಕರಿಗೆ ಅಭದ್ರತೆಯ ಕೊರತೆ ಎದ್ದುಕಾಣುತ್ತಿದೆ.ಹಾಗೆಯೆ ಸಮಾಜದಲ್ಲಿನ ಶಾಂತಿಯನ್ನು ಹಾಳುಮಾಡುವ ಉದ್ದೇಶ ಮತ್ತು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದೆ ಇರುವುದು ಇಂತಹ ಕೃತ್ಯಗಳು ಮರುಕಳಿಸುವಂತಾಗಿದೆ.

ಆದ್ದರಿಂದ, ಸಮಾಜದಲ್ಲಿ ಶಾಂತಿ ಕದಡುವ ಹಾಗು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದ ಮತ್ತು ಭಯೋತ್ಪಾದನೆಯಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪಿ ಪರವಾಗಿ ಮಾನ್ಯ ನ್ಯಾಯಾಲಯದಲ್ಲಿ ಸಂಘದ ಪದಾಧಿಕಾರಿಗಳೇ ಆಗಲಿ ಅಥವಾ ಸದದಸ್ಯರುಗಳೇ ಆಗಲಿ ಅಥವಾ ಇನ್ಯಾವುದೇ ಜಿಲ್ಲೆಯ ನ್ಯಾಯವಾದಿಗಳೇ ಆಗಲಿ ಆರೋಪಿಯ ಪರ ವಕಾಲತ್ತು ನಡೆಸದಾಗಿ ಕರೆ ನೀಡಬೇಕು.

ಈ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವಂತಹ ತಾವುಗಳು ಸಮಾಜಘಾತುಕರ ವಿರುದ್ಧ ಕಾನೂನು ಸಮರಕ್ಕೆ ಸಹಕಾರ ನೀಡಬೇಕೆಂದು ಎಂದು ಬಜರಂಗದಳ ಮನವಿ ಮಾಡಿದೆ.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending