Friday, August 19, 2022

ಉಜಿರೆಯಲ್ಲಿ ಅಕ್ರಮ ಗೋಸಾಗಾಟ ವಾಹನದ ಮೇಲೆ ಬಜರಂಗದಳ ದಾಳಿ ..!

ಬೆಳ್ತಂಗಡಿ :  ದಕ್ಷಿಣ ಕನ್ನಡದ ಉಜಿರೆಯಲ್ಲಿ ಅಕ್ರಮ ಗೋ ಸಾಗಾಟ ಜಾಲವನ್ನು ವಿಶ್ವಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಪತ್ತೆಹಚ್ಚಿದ್ದಾರೆ.

ಮಾಹಿತಿ ಪಡೆದ ಕಾರ್ಯಕರ್ತರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳು ಮತ್ತು ವಾಹನವನ್ನು ಸ್ಥಳೀಯ ಪೋಲೀಸರಿಗೆ ಮಾಹಿತಿ ನೀಡಿ ಒಪ್ಪಿಸಿದ್ದಾರೆ.

ಪಿಕಪ್ ವಾಹದಲ್ಲಿ ಹೀನಾಯ ಸ್ಥಿತಿಯಲ್ಲಿದ್ದ ಎರಡು ದನಗಳನ್ನು ಕಾರ್ಯಕರ್ತರು ರಕ್ಷಿಸಿದ್ದಾರೆ.

ಯಾವುದೇ ದಾಖಲೆಗಳಿಲ್ಲದ ಒಂದು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಇಬ್ಬರನ್ನು ಪೋಲೀಸರಿಗೆ ಒಪ್ಪಿಸಲಾಗಿದೆ.

ಮನೆ ಮನೆಗೆ ಗುಜಿರಿ ಸಾಗಟದ ನೆಪದಲ್ಲಿ ದನ ಇದ್ದ ಮನೆಗಳ ಮಾಹಿತಿಯನ್ನು ನೀಡಿ ದನ ಸಾಗಿಸುವ ದಂದೆ ನಡೆಯುತ್ತಿದ್ದು ಇದಕ್ಕೆ ಪೋಲೀಸರು ಕಡಿವಾಣ ಹಾಕಬೇಕಿದೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಲಾಠಿ ಹಿಡಿದ ಕೈಯಲ್ಲಿ ಪೊರಕೆ ಹಿಡಿದು ಕಲ್ಲಡ್ಕ ಬಸ್ಟ್ಯಾಂಡ್ ಕ್ಲೀನ್: ಮೆಲ್ಕಾರ್ ಟ್ರಾಫಿಕ್ ಪೊಲೀಸರ ಸಮಾಜಮುಖಿ ಕಾರ್ಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ‌ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ.ಕಲ್ಲಡ್ಕದ ಪೇಟೆಯಲ್ಲಿರುವ ಬಸ್ ನಿಲ್ದಾಣ...

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು...

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...