Friday, August 12, 2022

ವಿಟ್ಲ: ಬಕ್ರೀದ್ ಹಬ್ಬ ಹಿನ್ನೆಲೆ ಜಿಲ್ಲಾ ಗಡಿಪ್ರದೇಶದಲ್ಲಿ ಬಂದೋಬಸ್ತ್‌

ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೊಡಂಗೆ ಚೆಕ್ ಪೋಸ್ಟ್‌ನಲ್ಲಿ ದಿನದ 24 ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ ಎಂದು ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ರವರು ಹೇಳಿದರು.


ಅವರು ಇಂದು ರಂದು ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಕೇರಳ ಕರ್ನಾಟಕ ಗಡಿಪ್ರದೇಶವಾದ ಕೊಡಂಗೆ ಎಂಬಲ್ಲಿನ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರಿಂದ ಮಾಹಿತಿ ಪಡೆದುಕೊಂಡರು.

ಕೇರಳವನ್ನು ಸಂಪರ್ಕಿಸುವ ಪ್ರಧಾನ ರಸ್ತೆಗಳಲ್ಲೊಂದಾದ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಮೂಲಕ ಕರ್ನಾಟಕದಲ್ಲಿ ದುಷ್ಕೃತ್ಯ ನಡೆಸಿ ಕೇರಳಕ್ಕೆ ಪಲಾಯನ ನಡೆಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಚೆಕ್ ಪೋಸ್ಟ್ ಅನ್ನು ಇನ್ನಷ್ಟು ಛಲಗೊಳಿಸುವ ನಿಟ್ಟಿನಲ್ಲಿ ಆಲೋಚನೆ ಮಾಡಲಾಗಿದೆ.

ಮರ, ಮರಳು, ದನ ಸಹಿತ ಅಕ್ರಮ ಸಾಗಾಟ ಹಾಗೂ ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಈ ಚೆಕ್ ಪೋಸ್ಟ್ ಮತ್ತಷ್ಟು ಸಹಕಾರಿಯಾಗಲಿದೆ.

ವಿಟ್ಲ ಠಾಣಾ ವ್ಯಾಪ್ತಿ ದೊಡ್ಡದಿರುವ ಹಿನ್ನೆಲೆಯಲ್ಲಿ ಇದೀಗಾಗಲೇ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚು ಮಾಡಿ ಇತರ ಕಡೆಗಳಿಂದ ವರ್ಗಾವಣೆ ಮಾಡಲಾಗಿದೆ‌ ಎಂದರು.

LEAVE A REPLY

Please enter your comment!
Please enter your name here

Hot Topics

ಆದಾಯಕ್ಕಿಂತ ಅಧಿಕ ಆಸ್ತಿ: ಮಂಗಳೂರು ಮೂಲದ ಸರ್ಕಾರಿ ಅಧಿಕಾರಿಗೆ 3 ವರ್ಷ ಜೈಲು, 50 ಲಕ್ಷ ದಂಡ

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಕಳವು-ಆರೋಪಿ ಅಂದರ್

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಇವರು ಮೂಲತಃ ಮರವಂತೆಯ...