Wednesday, October 20, 2021

ಕಥೆಯೆ ಮುಗಿದೇ ಹೋದರೂ ಮುಗಿಯದಿರಲಿ ಬಂಧನ…. SPB ಹಾಡು ನಿಲ್ಲಿಸಿ ಒಂದು ವರುಷ

ಬೆಂಗಳೂರು: ಭಾರತೀಯ ಚಿತ್ರರಂಗದ ಮೇರು ಗಾಯಕ ಡಾ. ಎಸ್​.ಪಿ. ಬಾಲಸುಬ್ರಹ್ಮಣ್ಯಂ ನಿಧನರಾಗಿ ಇಂದಿಗೆ ಒಂದು ವರ್ಷವಾಗಿದ್ದು, ಇಂದು ಅವರ ಪ್ರಥಮ ಪುಣ್ಯಸ್ಮರಣೆ ಆಚರಿಸಲಾಗುತ್ತಿದೆ.


ಎಸ್​​ಪಿಬಿ ತಮ್ಮ 74 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಕಳೆದ ವರ್ಷ ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಅವರಿಗೆ ಗರಿಷ್ಠ ಲೈಫ್ ಸಪೋರ್ಟ್ ನೀಡಲಾಗಿತ್ತು.

ಆದರೂ ಗಾನ ಗಂಧರ್ವನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕದ ಯಾತ್ರೆ ಮುಗಿಸಿದರು.

ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಎಸ್​ಪಿಬಿ ಹಾಡಿದ್ದಾರೆ.

ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು, ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ, ಸುಮಾರು 25 ಬಾರಿ ಆಂಧ್ರ ಪ್ರದೇಶದ ಪ್ರತಿಷ್ಠಿತ ನಂದಿ ಪ್ರಶಸ್ತಿ, ಹಲವು ವಿಶ್ವ ವಿದ್ಯಾಲಯಗಳಿಂದ ಡಾಕ್ಟರೇಟ್, ನಟ, ಕಂಠದಾನ ಕಲಾವಿದ, ನಿರ್ಮಾಪಕ ಹೀಗೆ ಎಸ್.ಪಿ. ಬಾಲಸ್ರುಬ್ರಹ್ಮಣ್ಯಂ ಮಾಡಿರುವ ಸಾಧನೆಗಳಿಗೆ ಲಭಿಸಿರುವ ಗೌರವಗಳು ಅನೇಕ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...