Thursday, March 23, 2023

ಪತ್ನಿ ಕೊಲೆ ಮಾಡಿದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಳ್ಳಾರಿ ಕೋರ್ಟ್..!

ಬಳ್ಳಾರಿ: ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ‌ ಹಾಗೂ 50 ಸಾವಿರ ರೂ.ದಂಡ ವಿಧಿಸಿ ಬಳ್ಳಾರಿ ನಗರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ ನಿವಾಸಿ ರಮೇಶ್, ಉಮಾದೇವಿ ಎಂಬುವರನ್ನು ವಿವಾಹವಾಗಿದ್ದ.
ಮದುವೆಯಾದ ನಂತರ ಪತ್ನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದ ಆರೋಪಿ, 2013 ರಲ್ಲಿ ಸೀಮೆ ಎಣ್ಣೆ ಸುರಿದು ಹೆಂಡತಿಯನ್ನು ಕೊಲೆ ಮಾಡಲು ಪ್ರಯತ್ನಿಸಿದ್ದ.
ಈ ವೇಳೆ ತೀವ್ರ ಗಾಯಗೊಂಡ ಉಮಾದೇವಿಯನ್ನು ವಿಮ್ಸ್​ಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ಡಿ.ವಿನಯ್, ಆರೋಪಿ ರಮೇಶ್ ವಿರುದ್ಧ ಕಲಂ 498(ಎ) ಮತ್ತು 302 ಭಾ.ದಂ.ಸಂ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿ, ದಂಡದ ಮೊತ್ತದಲ್ಲಿ ಶೇ.70 ರಷ್ಟನ್ನು ಮೃತಳ ತಾಯಿ ಗಂಗಮ್ಮಗೆ ಪರಿಹಾರ ರೂಪದಲ್ಲಿ ನೀಡುವಂತೆ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...