DAKSHINA KANNADA
ಶಾಲಾ ಮೈದಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ..! ಬಿಜೆಪಿಯಿಂದ ಭಜನೆ ಹಾಡಿ ಪ್ರತಿಭಟನೆ
ಮಂಗಳೂರು: ಗಣೇಶೋತ್ಸವ, ಮೊಸರು ಕುಡಿಕೆ ಸಹಿತ ಹಿಂದುಗಳ ಹಬ್ಬಗಳ ಆಚರಣೆಗೆ ಕೋಮುದ್ವೇಷ ಮನಸ್ಥಿತಿಯ ಸಿದ್ಧರಾಮಯ್ಯ ಸರಕಾರದ ನಿಲುವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಭಜನೆ ಮೂಲಕ ಪ್ರತಿಭಟನೆ ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ ನಡೆಯಿತು.
ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಹಿಂದುಗಳ ದ್ವೇಷ ಭಾವನೆಗೆ ಧಕ್ಕೆ ತಂದರೆ ಸಿದ್ಧರಾಮಯ್ಯ ಕಾಂಗ್ರೆಸ್ ಸರಕಾರ ಉಳಿಯಲ್ಲ. ದೇವರೂ ನಿಮ್ಮನ್ನು ಸಹಿಸುವುದಿಲ್ಲ. ದೇವರ ಕೆಲಸಕ್ಕೆ ಅಡ್ಡಿ ತರುವ ಕೆಲಸ ಮಾಡಬೇಡಿ. ನಮ್ಮ ಹಿರಿಯರಿಗೆ ನೋವು ಕೊಟ್ಟಿದ್ದೀರಿ. ಹಿಂದೂ ಸಮಾಜ ಒಟ್ಟಾಗಲು, ದೇಶ ಒಗ್ಗಟ್ಟಿನಲ್ಲಿ ಬರಲು ಸಾರ್ವಜನಿಕ ಗಣೇಶೋತ್ಸವಗಳು ಆರಂಭಗೊಂಡಿದ್ದವು. ಆದರೆ ಸಿದ್ಧರಾಮಯ್ಯ ಸರಕಾರ ಸುತ್ತೋಲೆ ಕಳಿಸುವ ಮೂಲಕ ಸಾರ್ವಜನಿಕ ಕಾರ್ಯಕ್ರಮಗಳನ್ನು ಶಾಲಾ ಮೈದಾನದಲ್ಲಿ ಮಾಡದಂತೆ ನಿರ್ಬಂಧ ವಿಧಿಸಿದೆ. ಸಾರ್ವಜನಿಕ ಗಣೇಶೋತ್ಸವಗಳನ್ನು ಸ್ವತಃ ಕಾಂಗ್ರೆಸ್ನವರೂ ಕೂಡಾ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ಸಿನ ನಾಯಕರು ಇನ್ನೂ ಬಾಯ್ಬಿಟ್ಟಿಲ್ಲ ಇದು ವಿಷಾದನೀಯ ಸಂಗತಿ. ದೇವರು ಇನ್ನಾದರೂ ಸಿದ್ಧರಾಮಯ್ಯನವರಿಗೆ ಸದ್ಭುದ್ಧಿ ಕೊಡಲಿ ಎಂದು ಭಜನೆ ಮಾಡಿ ಪ್ರಾರ್ಥಿಸಿದ್ದೇವೆ ಎಂದರು. ಬಿಜೆಪಿ ಮುಖಂಡರಾದ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ರೂಪಾ ಬಂಗೇರ, ಶಕಿಲಾ ಕಾವ, ನಿತಿನ್ ಕುಮಾರ್ ಮೊದಲಾದವರಿದ್ದರು.
DAKSHINA KANNADA
ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು
ಮಂಗಳೂರು/ಆನೇಕಲ್ : ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ ದುರ್ದೈವಿ.
ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್ ಮೂಲಕ ಆನೇಕಲ್ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.
ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
ಅಪಘಾ*ತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
DAKSHINA KANNADA
ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.
ನಳೀನ್ ಕುಮಾರ್ಗೆ ಗುಡ್ ನ್ಯೂಸ್;
ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾರ್ ಕಟೀಲ್ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
DAKSHINA KANNADA
ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.
ಎರಡು ಬೈಕ್ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.
ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಇಂದು(ಸೆ.16) ಈದ್ ಮಿಲಾದ್ ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
- FILM6 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- LATEST NEWS5 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ
- FILM6 days ago
ರೇಣುಕಾಸ್ವಾಮಿ ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ..!
- FILM5 days ago
ಶಾಂಕಿಂಗ್ ನ್ಯೂಸ್ : ಕಟ್ಟಡದಿಂದ ಹಾರಿ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆ
Pingback: ಜು.23ರಂದು ದ.ಕ. ಟ್ಯಾಕ್ಸಿಮೆನ್ಸ್, ಮ್ಯಾಕ್ಸಿ ಕ್ಯಾಬ್ ಮಾಲಕರ ಸಂಘದಿಂದ ಪ್ರತಿಭಟನೆ - NAMMAKUDLA NEWS - ನಮ್ಮಕುಡ್ಲ ನ್ಯೂಸ