Thursday, October 21, 2021

ಕಾರ್ಕಳ: ಹೊಂಡಗುಂಡಿಯಿಂದ ತುಂಬಿದ ರಸ್ತೆಯಲ್ಲಿ ಬಾಳೆ ಗಿಡನೆಟ್ಟು ಪ್ರತಿಭಟನೆ

ಕಾರ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿಯ ನಗರ ಮೂರು ಮಾರ್ಗ ಬಳಿ ಮಂಗಳೂರಿಗೆ ತೆರಳುವ ರಸ್ತೆ ಸಂಪೂರ್ಣ ಕೆಟ್ಟು‌ ಹೋಗಿದ್ದು,

ಇದರಿಂದ ರೋಸಿಹೋದ ರಿಕ್ಷಾ ಚಾಲಕರೋರ್ವರು ಬುಧವಾರ ರಸ್ತೆ ಹೊಂಡದಲ್ಲಿ ಬಾಳೆ ಗಿಡನೆಟ್ಟು ಪ್ರತಿಭಟಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ರಸ್ತೆ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಒಳಚರಂಡಿ ಕಾಮಗಾರಿಯ ಸಂದರ್ಭ ರಸ್ತೆಗೆ ಹಾನಿಯಾಗಿತ್ತು. ಅನಂತರದಲ್ಲಿ ಶಾಶ್ವತ ದುರಸ್ತಿ ಪಡಿಸದೆ ತಾತ್ಕಾಲಿಕ ತೇಪೆಯಲ್ಲೆ ದಿನ ಕಳೆಯುತ್ತ ಬರಲಾಗಿತ್ತು. ಇದೀಗ ಮಳೆಯ ಕಾರಣ ಪೂರ್ತಿ ಕೆಟ್ಟುಹೋಗಿದೆ.
ಕ್ಷೇತ್ರದ ಶಾಸಕರು ರಾಜ್ಯದ ಮಂತ್ರಿಯಾಗಿದ್ದರೂ ಮುಖ್ಯ ರಸ್ತೆಯ ಹೊಂಡಕ್ಕೆ ಮುಕ್ತಿ ನೀಡುವ ಬಗ್ಗೆ ಅಧಿಕಾರಿ ವರ್ಗ, ಜನಪ್ರತಿನಿಧಿಗಳು ಗಮನಕೊಡುತಿಲ್ಲ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಇದೆ ಹೊಂಡದಲ್ಲಿ ಬೆಂಡೆ ಗಿಡ ನೆಟ್ಟಿದ್ದರು. ಆದರೂ ಅಧಿಕಾರಿಗಳು ನೆಟ್ಟಗೆ ಆಗಿಲ್ಲ ಅಂತ ಜನ ಹಿಡಿಶಾಪ ಹಾಕುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...