Connect with us

bangalore

Bengaluru: ಟೊಮೆಟೊ ತುಂಬಿದ್ದ ಬೊಲೆರೊ ವಾಹನ ಕಳವು – ಕಂಗಾಲಾದ ರೈತ

Published

on

ಬೆಂಗಳೂರಿನ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಸಮೀಪ ಸುಮಾರು 2 ಸಾವಿರ ಕೆಜಿಗೂ ಹೆಚ್ಚು ಟೊಮೆಟೊ ಇದ್ದ ಬೊಲೆರೊ ವಾಹನವನ್ನು ಕಳವುಗೈದ ಘಟನೆ ನಡೆದಿದೆ.

ಬೆಂಗಳೂರು: ಟೊಮೆಟೊದ ಬೆಲೆ ಗಗನಕ್ಕೇರಿದ ಬೆನ್ನಲೆ ಟೊಮೆಟೊ ಕಳವು ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಬೆಂಗಳೂರಿನ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಸಮೀಪ ಸುಮಾರು 2 ಸಾವಿರ ಕೆಜಿಗೂ ಹೆಚ್ಚು ಟೊಮೆಟೊ ಇದ್ದ ಬೊಲೆರೊ ವಾಹನವನ್ನು ಕಳವುಗೈದ ಘಟನೆ ನಡೆದಿದೆ.

ಶನಿವಾರದಂದು ಹಿರಿಯೂರಿನಿಂದ ಕೋಲಾರಕ್ಕೆ ರೈತನು ತಾವು ಬೆಳೆದ ಟೊಮೆಟೋವನ್ನು ಸಾಗಿಸುತ್ತಿದ್ದರು.

ಈ ಸಂದರ್ಭ ಕಾರಿನಲ್ಲಿ ಬಂದ ಮೂವರು ಈ ಟೊಮೆಟೊ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎನ್ನಲಾಗಿದೆ.

ಟೊಮೆಟೊ ತುಂಬಿದ ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದ ಅವರು ಆರ್‌ಎಮ್‌ಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಬೊಲೆರೊ ವಾಹನವನ್ನು ಅಡ್ಡಗಟ್ಟಿ, ನಿಮ್ಮ ವಾಹನ ತಮ್ಮ ಕಾರಿಗೆ ಪೀಣ್ಯಾ ಬಳಿ ತಾಗಿದೆ ಎಂದು ವಾದಿಸಿದ್ದಾರೆ.

ವಾಗ್ವಾದ ತಾರಕಕ್ಕೇರಿದ್ದು, ಆತನ  ಮೇಲೆ ಹಲ್ಲೆ ಕೂಡ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ದುಷ್ಕರ್ಮಿಗಳು ರೈತನಲ್ಲಿ ಹಣಕ್ಕಾಗಿ ಬೇಡಿಕೆ ಕೂಟ ಇಟ್ಟಿದ್ದರು. ಆದರೆ  ಹಣ ಇಲ್ಲ ಎಂದಿದ್ದಕ್ಕೆ ಬೊಲೆರೊ ಸಮೇತ ರೈತ ಮತ್ತು ಚಾಲಕನನ್ನು ಕರೆದುಕೊಂಡು ಚಿಕ್ಕಜಾಲ ತನಕ ಹೋಗಿದ್ದಾರೆ.

ಬಳಿಕ ಚಿಕ್ಕಜಾಲ ಬಳಿ ರೈತನನ್ನು ಬಿಟ್ಟು ಚಾಲಕ​ ಮತ್ತು ಟೊಮೆಟೊ ತುಂಬಿದ್ದ ವಾಹನ ಸಮೇತ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಆರ್ ಎಂಸಿ ವಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

bangalore

ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?

Published

on

ಸೂಪರ್ ಹಿಟ್ ಕಿರಿಕ್ ಪಾರ್ಟಿ ಸಿನಿಮಾದ ಬೆಳಗ್ಗೆದ್ದು ಯಾರ ಮುಖವ ನಾನು ನೋಡಿದೆ ಹಾಡಿನಲ್ಲಿ ರಕ್ಷಿತ್  ವೈಟ್ ಟೀ-ಶರ್ಟ್ ಮೇಲೆ ಬ್ಲೂ ಬಣ್ಣದ ಶರ್ಟ್ ಧರಿಸಿದ್ದರು. ಈ ಲುಕ್ ಇದೀಗ ರಿಪೀಟ್ ಆಗಿದ್ದು ಹುಡುಗಿ ಮಾತ್ರ ಚೇಂಜ್ ಆಗಿದ್ದಾರೆ. 

 

ಬೆಂಗಳೂರು : ಸದ್ಯ ರಕ್ಷಿತ್ ಶೆಟ್ಟಿ ಸುದ್ದಿಯಲ್ಲಿದ್ದಾರೆ. ಅವರ ಸಿನೆಮಾ ಸಪ್ತ ಸಾಗರಾದಾಚೆ ಅಂತೂ ಹೆವ್ವಿ ಸೌಂಡ್ ಮಾಡ್ತಿದ್ದು, ನೆರೆಯ ಭಾಷೆಗಳಿಗೂ ರಿಮೇಕ್ ಆಗಿ ಜನರ ಮನಸ್ಸು ಗೆದ್ದಿದೆ.


ಈ ನಡುವೆ ರಕ್ಷಿತ್ ಶೆಟ್ಟಿ ಮತ್ತೆ ಲವ್ವಲ್ಲಿ ಬಿದ್ರಾ ಅನ್ನೋ ಗುಮಾನಿ ಕೂಡ ಗಾಂಧೀನಗರದ ಗಲ್ಲಿ ಗಲ್ಲಿಗಳಲ್ಲಿ ಚರ್ಚೆಯಾಗುತ್ತಿದೆ.

ರಕ್ಷಿತ್ ಶೆಟ್ಟಿ ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಹುಡುಗೀನ ನೋಡಿ ನಕ್ಕಿದ್ರೂ ಅದು ಬಿಗ್ ಹೆಡ್ ಲೈನ್ ಆಗಿ ಬಿಡುತ್ತೆ.

ಇದೀಗ ನೆಟ್ಟಿಗರು ಎಷ್ಟು ಸ್ಮಾರ್ಟ್ ಆಗಿದ್ದಾರೆ  ಅಂದ್ರೆ 4-5 ವರ್ಷಗಳ ಹಿಂದಿನ ರಕ್ಷಿತ್ ಶೆಟ್ಟಿ ಫೋಟೋ ಹುಡುಕಿ ಈಗ ಸ್ವೀಟ್ ಮೀಮ್ಸ್ ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿ ಬಿಡುತ್ತಿದ್ದಾರೆ.

ಹೌದು! ಸೂಪರ್ ಹಿಟ್ ಕಿರಿಕ್ ಪಾರ್ಟಿ ಸಿನಿಮಾದ ಬೆಳಗ್ಗೆದ್ದು ಯಾರ ಮುಖವ ನಾನು ನೋಡಿದೆ ಹಾಡಿನಲ್ಲಿ ರಕ್ಷಿತ್  ವೈಟ್ ಟೀ-ಶರ್ಟ್ ಮೇಲೆ ಬ್ಲೂ ಬಣ್ಣದ ಶರ್ಟ್ ಧರಿಸಿದ್ದರು.

ಈ ಲುಕ್ ಇದೀಗ ರಿಪೀಟ್ ಆಗಿದ್ದು ಹುಡುಗಿ ಮಾತ್ರ ಚೇಂಜ್ ಆಗಿದ್ದಾರೆ.

ಅಂದು ಪಕ್ಕದಲ್ಲಿ ರಶ್ಮಿಕ ಮಂದಣ್ಣ ಇದ್ರೆ ಇಂದು ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ.

ರೊಮ್ಯಾಂಟಿಕ್ ಆಕ್ಷನ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ರಕ್ಷಿತ್ ಮತ್ತು ರಕ್ಮಿಣಿ ವಸಂತ್ ನಟಿಸಿದ್ದು , ಸಿನಿಮಾ ಹಿಟ್ ಆದ ಬೆನ್ನಲ್ಲೆ ಸಾಕಷ್ಟು ಪ್ರೆಸ್‌ಮೀಟ್ ಮತ್ತು ಸಕ್ಸಸ್ ಮೀಟ್ ಗಳಲ್ಲಿ ಈ ಜೋಡಿ ಕಾಣಿಸಿಕೊಳ್ಳೋದು ಮಾಮೂಲು.

ಆದ್ರೆ ಕಿರಿಕ್ ಪಾರ್ಟಿ ಟೈಮಲ್ಲಿ ಹಾಕಿದ ಬಟ್ಟೆಯನ್ನೇ ಇದೀಗ ಮತ್ತೆ ಶೆಟ್ರು ರಿಪೀಟ್ ಮಾಡಿರೋದನ್ನ ನೋಡಿ ಶೆಟ್ರು ಸೋ ಸಿಂಪಲ್ ಅಂತಿದ್ದಾರೆ.

ಒಟ್ನಲ್ಲಿ ಇದನ್ನು ನೋಡಿದ ನೆಟ್ಟಿಗರು ಹುಡುಗಿ ಚೇಂಜ್ ಆದ್ರೂ  ಡ್ರೆಸ್ ಇನ್ನೂ ಚೇಂಜ್ ಆಗಿಲ್ಲ ಅಲ್ವಾ ಎಂದು ಟ್ರೋಲ್ ಮಾಡುತ್ತಿದ್ದಾರೆ. ಆದ್ರೆ ಅಂದು ರಕ್ಷಿತ್ ಶೆಟ್ಟಿ ಹಾಕಿದ ಶರ್ಟಿಗೂ ಈಗ ವೈರಲ್ ಆಗುತ್ತಿರುವ ಶರ್ಟಿಗೂ ವ್ಯತ್ಯಾಸ ಇರೋದಂತೂ ಅಕ್ಷರಶಃ ಸತ್ಯ.

 

Continue Reading

bangalore

ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಡೇಟ್ ಫಿಕ್ಸ್…

Published

on

ಬೆಂಗಳೂರು : ಕೊನೆಗೂ ಕನ್ನಡ ಕಿರುತೆರೆಯ ವೀಕ್ಷಕರು ಕಾಯುತ್ತಿದ್ದ ಕನ್ನಡದ ಬಿಗ್ ಬಾಸ್ ಸೀಸನ್ 10 ಶೋ ಕುರಿತ ಬಿಗ್ ಅಪ್ ಡೇಟ್ ಸಿಕ್ಕಿದ್ದು, ಅಕ್ಟೋಬರ್ 7 ಮತ್ತು 8 ರಂದು ಎರಡು ದಿನಗಳ ಕಾಲ ಪ್ರವೇಶದ ಸಂಚಿಕೆಗಳು ಪ್ರಸಾರವಾಗಲಿದೆ.

ಕಿಚ್ಚ ಸುದೀಪ್ ನಿರಂತರವಾಗಿ ಹೋಸ್ಟ್ ಮಾಡಿಕೊಂಡು ಬಂದಿರುವ ಬಿಗ್ ಬಾಸ್ ಕನ್ನಡ ರಿಲಯಾಲಿಟಿ ಶೋ ಈ ಬಾರಿ ಸಾಕಷ್ಟು ಕುತೂಹಲವನ್ನು ಉಂಟು ಮಾಡಿದೆ.

ಸಿನೆಮಾ, ರಾಜಕೀಯ, ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿ ಸುದ್ದಿಯಾದವರನ್ನು ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನೋಡ್ಬೋದು ಎಂಬ ಮಾತುಗಳು ಕೇಳಿ ಬರುತ್ತಿದೆ.

ಕೆಜಿಎಫ್ ಖ್ಯಾತಿಯ ರೂಪ ರಾಯಪ್ಪ,ನಾಗಿಣಿ ಸೀರಿಯಲ್ ಮೂಲಕ ಜನಪ್ರಿಯತೆ ಪಡೆದ ಸೀರಿಯಲ್ ನಟಿ ನಮ್ರತಾ ಗೌಡ, ರೀಲ್ಸ್ ಮಾಡುತ್ತಾ ಜನಪ್ರಿಯತೆ ಪಡೆದ ಭೂಮಿ ಬಸವರಾಜ್ ಸೇರಿದಂತೆ, ಬುಲೆಟ್ಪ್ರಕಾಶ್ ಪುತ್ರ ರಕ್ಷಕ್,

ಲಕ್ಷ್ಮಣ ಧಾರವಾಹಿ ನಟಿ ಸುಕೃತ ನಾಗ್, ಗೀತಾ ಸೀರಿಯಲ್ ನ ಪ್ರಮುಖ ಪಾತ್ರಧಾರಿ ಭವ್ಯಾ ಗೌಡ, ಹಾಗೇ ಸೋಷಿಯಲ್ ಮೀಡಿಯಾದಲ್ಲಿ ಬ್ರೇಕಪ್ ಸುದ್ದಿ ಹರಿದಾಡಿಸಿ ಸುದ್ದಿಯಾದ ವರುಣ್ -ವರ್ಷಾ ಹೆಸರು ಕೂಡ ಬಿಗ್ ಬಾಸ್ ರೇಸ್ ನಲ್ಲಿದೆ.


ಇದೀಗ ಅಧಿಕೃತವಾಗಿ ವಾಹಿನಿ ಪ್ರೋಮೋ ವೊಂದನ್ನು ರಿಲೀಸ್ ಮಾಡಿದ್ದು, ಬಿಗ್ ಬಾಸ್ 10ರ ಶೋಗೆ ಕ್ಷಣಗಣನೆ ಶುರುವಾಗಿದೆ.

ಅ.7 ಮತ್ತು 8 ರಂದು ಎರಡು ದಿನಗಳ ಕಾಲ ಪ್ರವೇಶದ ಸಂಚಿಕೆಗಳು ಪ್ರಸಾರವಾಗಲಿದ್ದು, ಅ. 9ರಿಂದ ಬಿಗ್ ಬಾಸ್ ಮನೆಯಲ್ಲಿ ನಿಜವಾದ ಆಟ ಶುರುವಾಗಲಿದೆ.

Continue Reading

bangalore

FILM: ಎಲ್ಲೆಲ್ಲೂ ‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಸಾಂಗ್ ಹವಾ

Published

on

‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಹಾಡು ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್ ಗಟ್ಟಲೇ ವೀಕ್ಷಣೆಯಾಗುವ ಮೂಲಕ ಹೊಸ ಸಂಚಲನ ಸೃಷ್ಟಿಸಿದೆ..

ಬೆಂಗಳೂರು: ಕೆಲ ದಿನಗಳ ಹಿಂದೆ ಕನ್ನಡದ ‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇ’ ರೀಲ್ಸ್ ಭಾರೀ ವೈರಲ್ ಆಗಿತ್ತು. ರಾತ್ರಿ ಬೆಳಗಾಗೋದ್ರಲ್ಲಿ ಇದನ್ನು ಹಾಡಿದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಸೆಲೆಬ್ರಿಟಿ ಲೆವೆಲ್ ಗೆ ಸುದ್ದಿಯಾಗಿದ್ರು.

ಇದೀಗ ‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಹಾಡು ಬಿಡುಗಡೆಗೊಂಡ ದಿನ 5 ಮಿಲಿಯನ್ ವೀಕ್ಷಣೆಯಾಗುವ ಮೂಲಕ ಹೊಸ ಸಂಚಲನ ಸೃಷ್ಟಿಸಿದೆ.. ‘I am barbie girl’ ಎಂಬ ಇಂಗ್ಲಿಷ್ ಹಾಡಿನ ಟ್ಯೂನ್​ಗೆ ‘ನಾನು ನಂದಿನಿ ಬೆಂಗಳೂರಿಗೆ ಬಂದೀನಿ’ ಎಂಬ ಸಾಹಿತ್ಯ ರಚಿಸಿ ಹಾಡಿದ್ದಾರೆ.

ಈಗ ‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಎಂಬ ರೀಲ್ಸ್ ಸೋಷಿಯಲ್ ಮೀಡಿಯಾದಲ್ಲಿ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ.

‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ. ಪಿಜಿಲಿ ಇರ್ತೀನಿ ಐಟಿ ಕೆಲಸ ಮಾಡ್ತೀನಿ. ಊಟ ಸರಿ ಇಲ್ಲ ಅಂದ್ರೂನೂ ತಿಂತೀನಿ. ಬಂದಿದ್ ದುಡ್ ಎಲ್ಲಾ ಮನೇಗ್​ ಕಳಸ್ತೀನಿ. ಬಾರೇ ನಂದಿನಿ ಗೋಬಿ ತಿನ್ನಸ್ತೀನಿ. ಬಾರೇ ನಂದಿನಿ

ಬೆಂಗಳೂರ್ ತೋರಸ್ತೀನಿ. ಬಾರೆ ನಂದಿನಿ ಪೇಢಾ ತಿನ್ನಸ್ತೀನಿ. ಬಾರೇ ನಂದಿನಿ ಪಿಚ್ಚರ್ ತೋರಸ್ತೀನಿ ಎನ್ನುವ ವಿಕಿ ಪೀಡಿಯಾ ವಿಕಾಸ್ ಅವರ ರೀಲ್ಸ್ ಗೆ ಜನಾ ಫಿದಾ ಆಗಿದ್ದಾರೆ.

ಒಂದು ದಿನದ ಹಿಂದೆಯಷ್ಟೇ ಫೇಸ್​ಬುಕ್​ನಲ್ಲಿ ಮತ್ತು ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಲಕ್ಷಾಂತರ ಜನರು ಲೈಕ್ ಮಾಡಿದ್ದು ಸಾವಿರಾರು ಜನರು ಈ ಪೋಸ್ಟ್​ ಅನ್ನು ಹಂಚಿಕೊಂಡಿದ್ದಾರೆ.

ಈ ಹಾಡನ್ನು ಕ್ರಿಯೇಟ್ ಮಾಡಿದವರು ವಿಕಿಪಿಡಿಯಾ ಖ್ಯಾತಿಯ ವಿಕ್ಕಿ ಎಂಬುವವರು. ಬಹುತೇಕರಿಗೆ ಇವರ ಪರಿಚಯ ಮಾಡಬೇಕಾಗಿಲ್ಲ. ಸಾಕಷ್ಟು ಹಾಸ್ಯದ ವೀಡಿಯೋಗಳನ್ನು ಇವರು ಕ್ರಿಯೇಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೈರಲ್ ಆಗಿದ್ದಲ್ಲದೇ ವಿಕ್ಕಿ ಅವರಿಗೆ ಬಹಳಷ್ಟು ಪ್ರಸಿದ್ದಿ ತಂದುಕೊಟ್ಟಿದೆ.

Continue Reading

LATEST NEWS

Trending