Connect with us

bangalore

ಬೆಂಗಳೂರು: ಕಾಂಗ್ರೆಸ್‌ ಪಕ್ಷದಿಂದ ಗೂಂಡಾಗಿರಿಯ ಗ್ಯಾರಂಟಿ ಕಾರ್ಡ್‌ – ನಳಿನ್‌ ಕುಮಾರ್‌

Published

on

ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗಲಭೆ, ದೊಂಬಿ, ಹತ್ಯೆ, ಹಲ್ಲೆಗಳಂತಹ ಘಟನೆಗಳು ಸಾಮಾನ್ಯವಾಗಿವೆ. ಇದು ಗೂಂಡಾಗಿರಿಯ ಗ್ಯಾರಂಟಿ ಕಾರ್ಡ್‌ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಆಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಆರೋಪಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗಲಭೆ, ದೊಂಬಿ, ಹತ್ಯೆ, ಹಲ್ಲೆಗಳಂತಹ ಘಟನೆಗಳು ಸಾಮಾನ್ಯವಾಗಿವೆ. ಇದು ಗೂಂಡಾಗಿರಿಯ ಗ್ಯಾರಂಟಿ ಕಾರ್ಡ್‌ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಆಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಆರೋಪಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ವಿತರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದ ಬಳಿಕ ಗೂಂಡಾಗಿರಿ ಹೆಚ್ಚಾಗಿದೆ.

ಹಲವೆಡೆ ಕಾಂಗ್ರೆಸ್‌ ಕಾರ್ಯ ಕರ್ತರಿಂದ ದುಷ್ಕೃತ್ಯಗಳು ನಡೆಯುತ್ತಿವೆ. ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಘಟನೆಗಳು ನಮ್ಮ ಗಮನಕ್ಕೆ ಬಂದಿವೆ ಎಂದರು.

ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಅವರನ್ನು ಕೊಲೆ ಮಾಡಿದ್ದು, ಅವರ ಪುತ್ರ ಮತ್ತು ಪತ್ನಿಯ ಮೇಲೆ ಹಲ್ಲೆ ನಡೆಸಲಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಹೆಸರಲ್ಲಿ ಮನೆ ಮುಂದೆ ಪಟಾಕಿ ಹಚ್ಚಲು ಬಂದಾಗ ಸ್ವಲ್ಪ ದೂರ ಹಚ್ಚಿ ಎಂದು ಹೇಳಿದ್ದಕ್ಕೆ ಕೃಷ್ಣಪ್ಪ ಮತ್ತು ಕುಟುಂಬದವರ ಮೇಲೆ ಹಲ್ಲೆ ನಡೆಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟರೆ, ಅವರ ಪುತ್ರ ಮತ್ತು ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕೃತ್ಯ ಖಂಡನೀಯ ಎಂದರು. ಪಕ್ಷದ ನಾಯಕರು ಇರುವ ರೀತಿ ಕಾರ್ಯಕರ್ತರೂ ಹೋಗುತ್ತಾರೆ. ಇಂತಹ ಗೂಂಡಾಗಿರಿಗಳನ್ನು ಸಾಕಷ್ಟು ನೋಡಿದ್ದೇವೆ.

ನಾವು ಕೈ ಕಟ್ಟಿ ಕೂರುವುದಿಲ್ಲ. ಘಟನೆಯ ಹಿಂದೆ ಯಾರಿದ್ದಾರೆಯೋ ಅವರನ್ನು ತತ್‌ಕ್ಷಣ ಬಂಧಿಸಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವುದು ಅನಿವಾರ್ಯ ಎಂದರು.

Click to comment

Leave a Reply

Your email address will not be published. Required fields are marked *

bangalore

ಶೋಭಾ ಕರಂದ್ಲಾಜೆ ಕಾರಿಗೆ ಸಿಕ್ಕಿ ಯುವಕನ ದುರ್ಮ*ರಣ..!

Published

on

ಬೆಂಗಳೂರು : ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಅಸು ನೀಗಿದ್ದಾನೆ.

ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಅಸುನೀಗಿದ ದುರ್ದೈವಿ. ಬೆಂಗಳೂರಿನ ಕೆ.ಆರ್.ಪುರಂ ಸಮೀಪ ಈ ಅಪ*ಘಾತ ಸಂಭವಿಸಿದ್ದು, ಕೆ.ಆರ್‌.ಪುರಂ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.  ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ನಿಲ್ಲಿಸಿದ ಕಾರಿನಿಂದ ಸಡನ್ ಆಗಿ ಬಾಗಿಲು ತೆರೆದು ಈ ದುರ್ಘಟನೆ ನಡೆದಿದೆ. ಕಾರಿನ ಡೋರ್ ತೆಗೆದಾಗ ಹಿಂಬಂದಿಯಿಂದ ಬಂದಿದ್ದ ಬೈಕ್‌ ಸವಾರ ಕಾರಿನ ಡೋರ್‌ಗೆ ತಾಗಿ ಕೆಳಗೆ ಬಿದ್ದಿದ್ದಾನೆ.

 

ತಲೆಗೆ ಗಂ*ಭೀರ ಗಾಯಗೊಂಡಿದ್ದ ಬೈಕ್ ಸವಾರ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ : ಬೇಸಿಗೆಯ ಬಿಸಿ ತಡೆಯಲಾರದೆ 14 ಲಕ್ಷ ವೆಚ್ಚದಲ್ಲಿ ಕೂಲ್ ಹೋಮ್ ನಿರ್ಮಾಣ ಮಾಡಿದ ಯುವ ಇಂಜಿನಿಯರ್

Continue Reading

bangalore

ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ದಿಢೀರ್ ಅಸ್ವ*ಸ್ಥ..!! ಆಸ್ಪತ್ರೆ ದಾಖಲು

Published

on

ಬೆಂಗಳೂರು:  47 ವಿದ್ಯಾರ್ಥಿನಿಯರು ಅಸ್ವ*ಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ(BMCRI) ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವ*ಸ್ಥಗೊಂಡಿದ್ದು ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

medical college of bangalore

ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.  ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ವಿದ್ಯಾರ್ಥಿಗಳು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಅಷ್ಟಕ್ಕೂ ವಿದ್ಯಾರ್ಥಿನಿಯರು ಅಸ್ವ*ಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್‌ ಕೃಷ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕಾಲರ ಭೀತಿ ಶುರುವಾಗಿದ್ದು, ಈ ಮಧ್ಯೆ ಹಾಸ್ಟೆಲ್ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿರುವುದು ಆತಂಕಕ್ಕೆ ಎಡೆ ಮಾಡಿದೆ.

ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದಕ್ಕೆ ನೈಜ ಕಾರಣವೇನು ಅನ್ನೋದು ತನಿಖೆ ಬಳಿಕವಷ್ಟೇ ತಿಳಿಯಬೇಕಿದೆ.

Continue Reading

bangalore

ಧಗಧಗನೇ ಹೊ*ತ್ತಿ ಉ*ರಿದ ಖಾಸಗಿ ಕಂಪನಿಯ ಕಟ್ಟಡ!

Published

on

ಬೆಂಗಳೂರು : ಶುಕ್ರವಾರ ಮಧ್ಯಾಹ್ನ 1:50ರ ಸುಮಾರಿಗೆ ಬೆಂಗಳೂರಿನ ಆರ್‌.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದ ಕೆಳ ಮಹಡಿಯಲ್ಲಿ ಬೆಂ*ಕಿ ಅವಘ*ಡ ಸಂಭವಿಸಿದೆ.

ಕೂಡಲೇ ಘಟನಾ ಸ್ಥಳಕ್ಕೆ ಎರಡು ಅ*ಗ್ನಿಶಾಮಕ ವಾಹನ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬೆಂಕಿ ಅವಘ*ಡ ಸಂಭವಿಸಿದಾಗ ಕೆಲ ಉದ್ಯೋಗಿಗಳು ಕಟ್ಟಡದಲ್ಲಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು, RT ನಗರ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ಆರಂಭಿಸಿದರು.

ಅ*ಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಯಾರಿಗೂ ಪ್ರಾಣಾಪಾಯವಿಲ್ಲ. ಲಕ್ಷಾಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಅ*ಗ್ನಿಗೆ ಆ*ಹುತಿಯಾಗಿದೆ. ಅ*ಗ್ನಿ ಅ*ನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Continue Reading

LATEST NEWS

Trending