bengaluru
ಚುರುಕುಗೊಂಡ ತನಿಖೆ: ಪೊಲೀಸರಿಗೆ ಕಿರಿಕಿರಿಯಾದ ಬಂಧಿತ PFI ಕಾರ್ಯಕರ್ತರ ‘ಕೋಡ್‌ವರ್ಡ್’ಗಳು
Published
2 years agoon
By
Adminಬೆಂಗಳೂರು: ಮೊನ್ನೆ ತಾನೇ ಪಿಎಫ್‌ಐ ಸಂಘಟನೆಯ ಕೆಲವು ಮುಖಂಡರನ್ನು ಹಾಗೂ ಮುಖಂಡರನ್ನು ಬಂಧಿಸಿದ ಪೊಲೀಸರು ಇದೀಗ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಪ್ರಮುಖ ಆರೋಪಿಗಳಾದ ನಾಸೀರ್ ಪಾಷಾ ಹಾಗೂ ಮೊಹಮ್ಮದ್ ಅಶ್ರಫ್ ಇಬ್ಬರನ್ನು ಪೂರ್ವ ವಿಭಾಗ ಪೊಲೀಸರು ಗಂಭೀರವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಇದೀಗ ಆರೋಪಿತರ ಕೆಲ ಕೋಡ್ ವರ್ಡ್ಗಳು ಇದ್ದು, ಅದನ್ನು ಡಿಕೋಡ್ ಮಾಡುವುದು ಮಾತ್ರ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
ಅವರನ್ನು ಆಡುಗೋಡಿ ಟೆಕ್ನಿಕಲ್ ಸೆಲ್ನಲ್ಲಿ ಇರಿಸಿ ವಿಚಾರಣೆ ನಡೆಸಲಾಗುತ್ತಿದೆ. ಕಚೇರಿ ಮತ್ತು ಮನೆಗಳ ಮೇಲೆ ದಾಳಿ ವೇಳೆ ವಶಕ್ಕೆ ಪಡೆದುಕೊಂಡಿರುವ ವಸ್ತುಗಳಲ್ಲಿ ಕೆಲವೊಂದು ಡೈರಿಗಳು ಸಿಕ್ಕಿದೆ.
ಆ ಡೈರಿಯಲ್ಲಿ ಆರೋಪಿಗಳು ಕೆಲವೊಂದು ಶಬ್ಧಗಳಿಗೆ ಪ್ರತಿಯಾಗಿ ಕೋಡ್‌ವರ್ಡ್ ಬಳಕೆ ಮಾಡಿರುವುದು ದೃಢಪಟ್ಟಿದೆ. ಆದರೆ ಅದರ ಅರ್ಥ ಹುಡುಕುವುದು ಕೂಡಾ ಪೊಲೀಸರಿಗೆ ಅಷ್ಟೇ ತಲೆನೋವಾಗಿ ಕಾಡುತ್ತಿದೆ.
ಅದರಲ್ಲಿ ‘training to be organized’ ಎಂಬ ಶಬ್ದವೇ ಸ್ವಲ್ಪ ಮಟ್ಟಿಗೆ ಆತಂಕ ಹುಟ್ಟಿಸುವಂತದ್ದು, ಈ ಶಬ್ಧವನ್ನು ಯಾವ ಅರ್ಥದಲ್ಲಿ ಬರೆಯಲಾಗಿದೆ ಎಂಬುದನ್ನು ತಿಳಿದುಕೊಳ್ಳಬೇಕಿದೆ.
ಇದು ಭಯೋತ್ಪಾದಕ ಕೃತ್ಯದಾ ಟ್ರೈನಿಂಗಾ?, ಕೋಮುಗಲಭೆಗೆ ಸೃಷ್ಟಿಗಾ ಅಥವಾ ಸ್ಫೋಟಕ ತಯಾರಿಸಲು ತರಬೇತಿಯಾ ಎಂಬುದರ ಬಗ್ಗೆ ಮೊದಲು ಪೊಲೀಸರು ತಿಳಿದುಕೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ತನಿಖೆ ಸಂದರ್ಭ ಇವರು ಇಬ್ಬರು ಪ್ರಮುಖ ಆರೋಪಿಗಳ ಬ್ಯಾಂಕ್ ಖಾತೆಗೆ ವಿದೇಶಿ ಫಂಡಿಂಗ್ ಆಗಿರುವ ವಿಚಾರದ ಹಿನ್ನೆಲೆ ಬ್ಯಾಂಕ್ ದಾಖಲೆಗಳ ಮುಖಾಂತರ ಪೊಲೀಸರು ಮಾಹಿತಿ ಕಲೆ ಹಾಕಿದ್ದರು.
ತನಿಖೆಯನ್ನು ಎಳೆಎಳೆಯಾಗಿ ಕಲೆಹಾಕುತ್ತಿರುವ ಪೊಲೀಸರಿಗೆ ಇನ್ನು ಕೂಡಾ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
bengaluru
ಪಟಾಕಿ ದುರಂತ: ಡಬ್ಬದ ಮೇಲೆ ಯುವಕನನ್ನು ಕೂರಿಸಿ ಬಾಂಬ್ ಸಿಡಿಸಿದ್ರು; ಸ್ಥಳದಲ್ಲೇ ಸಾ*ವು!
Published
3 weeks agoon
04/11/2024By
NEWS DESK2ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬ*ಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.
ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬ*ಲಿಯಾಗಿದ್ದಾನೆ.
ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.
ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾ*ವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
bangalore
ಅಬ್ಬಬ್ಬಾ! ಖತರ್ನಾಕ್ ಗರ್ಲ್ ಫ್ರೆಂಡ್; ಪ್ರಿಯಕರನನ್ನೇ ರಾಬರಿ ಮಾಡಿಸಿದ ಯುವತಿ, ಯಾಕೆ ಗೊತ್ತಾ!?
Published
2 months agoon
29/09/2024By
NEWS DESK4ಮಂಗಳೂರು/ ಬೆಂಗಳೂರು: ಇತ್ತೀಚೆಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೆಲವೊಂದು ಪ್ರಕರಣಗಳು ವಿಚಿತ್ರವಾಗಿರುತ್ತವೆ. ಇಲ್ಲೊಬ್ಬಾಕೆ ಪ್ರಿಯತಮನ ಮೊಬೈಲ್‌ನಲ್ಲಿದ್ದ ತನ್ನ ಫೋಟೋ ಹಾಗೂ ವೀಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ.
ಬೆಳ್ಳಂದೂರು ಪೊಲೀಸರು ಟೆಕ್ಕಿ ಶ್ರುತಿ ಸೇರಿ ಮೂವರನ್ನು ಬಂಧಿಸಿದ್ದಾರೆ.
ಆ್ಯಕ್ಸಿಡೆಂಟ್ – ಡ್ರಾಮಾ :
ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶ್ರುತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದ ಅಪರಿಚಿತರು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ಅಲ್ಲದೇ, ವಂಶಿ ಜತೆಯಲ್ಲಿಯೇ ಇದ್ದ ಶ್ರುತಿಯ ಮೊಬೈಲ್ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್ ವಂಶಿ ಮುಂದೆ ಶ್ರುತಿ ನಾಟಕವಾಡಿದ್ದಾಳೆ.
ಆದರೆ, ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಇದನ್ನು ಓದಿ:ಪುತ್ತೂರು ಕಾಂಗ್ರೆಸ್ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್..!
ಬೇಡವಾಗಿದ್ದ ಬಾಯ್ ಫ್ರೆಂಡ್ :
ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶ್ರುತಿ ಯತ್ನಿಸಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್‌ನಲ್ಲಿ ಶ್ರುತಿಯ ಫೋಟೋಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂಬ ಭಯದಿಂದ ಶ್ರುತಿ ಮೊಬೈಲ್ ರಾಬರಿ ಮಾಡುವ ಯೋಜನೆ ರೂಪಿಸಿದ್ದಾರೆ. ಸದ್ಯ ಆರೋಪಿ ಟೆಕ್ಕಿ ಶ್ರುತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದು, ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ
LATEST NEWS
ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !
WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
Trending
- LATEST NEWS6 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS2 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!