Connect with us

    BANTWAL

    ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್

    Published

    on

    ಬಂಟ್ವಾಳ: ಮಳೆರಾಯನ ಆರ್ಭಟಕ್ಕೆ ಬಂಟ್ವಾಳ ತಾಲೂಕಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ, ಕೃಷಿಗೆ ಅಪಾರವಾದ ನಷ್ಟವುಂಟಾಗಿದ್ದು, ಸರಕಾರದಿಂದ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡುವ ವ್ಯವಸ್ಥೆ ಮಾಡುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ.


    ಪಾಕೃತಿಕ ವಿಕೋಪದಲ್ಲಿ ಅತೀ ಹೆಚ್ಚು ಹಾನಿಯಾದ ಬಂಟ್ವಾಳ ತಾಲೂಕಿನ ಕಾವಳಪಡೂರು,ಅರಳ, ಸಂಗಬೆಟ್ಟು ,ಕಾಡಬೆಟ್ಟು ಗ್ರಾಮಗಳಿಗೆ ತೆರಳಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.


    ಅತೀ ಹೆಚ್ಚು ಹಾನಿಯಾದ ಅರಳ ಗ್ರಾಮದ ಪೊರ್ಕಳ ಬಂಡಶಾಲೆ ರಸ್ತೆ, ನವಗ್ರಾಮದ ಮನೋಹರ ಕುಲಾಲ್ ಅವರ ಗುಡ್ಡ ಕುಸಿತ, ತಿಮ್ಮಪ್ಪ ನಾಯ್ಕ್ ಹಾಗೂ ರಾಮ ಶೆಟ್ಟಿಗಾರ್ ಮನೆಗೆ ಸೇರಿದಂತೆ ಹಲವಾರು ಮಂದಿ ಗ್ರಾಮಸ್ಥರ ಮನೆಗೆ ಹಾನಿಯಾಗಿದ್ದು ಇವರ ಮನೆಗೆ ಶಾಸಕರು ಅಧಿಕಾರಿಗಳ ಜೊತೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

    ನಂತರ ಮಾತನಾಡಿದ ಅವರು ‘ಈ ಹಿಂದೆ ಕನಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ನೀಡುತ್ತಿದ್ದು, ಅದು ಸಾಕಾಗುವುದಿಲ್ಲ ಎಂಬ ಕಾರಣದಿಂದ ಸಿ.ಎಂ.ಬೊಮ್ಮಾಯಿ ನೇತೃತ್ವದ ಸರಕಾರ ಅಧಿಕಾರಿಗಳ ಮೂಲಕ ನಷ್ಟದ ಸಂಪೂರ್ಣ ಮಾಹಿತಿ ಪಡೆದ ಬಳಿಕ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಲು ಮುಂದಾಗಿದೆ. ಪ್ರತಿ ಗ್ರಾಮದಲ್ಲಿ ಹಾನಿಯಾದ ವಿವರಗಳನ್ನು ಅಧಿಕಾರಿಗಳು ವರದಿ ನೀಡಲು ಸೂಚಿಸಿದ್ದೇನೆ.


    ಜೊತೆಗೆ ಹಾನಿಯಾದ ಸಂದರ್ಭದಲ್ಲಿ ಸ್ಥಳದಲ್ಲಿಯೇ 10 ಸಾವಿರ ಹಣವನ್ನು ನೀಡುವಂತೆ ಸರಕಾರ ಅದೇಶ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲು ತಾಲೂಕಿನ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಅವರು ತಿಳಿಸಿದರು.

    ಕಾವಳಮೂಡೂರು ಗ್ರಾಮಪಂಚಾಯತ್ ಅಜಿತ್ ಕುಮಾರ್, ಸದಸ್ಯ ಶರ್ಮಿತ್ ಜೈನ್, ಕಾಡಬೆಟ್ಟು ಗ್ರಾ.ಪಂ.ಸದಸ್ಯ ಪ್ರಮೋದ್ ಕುಮಾರ್ ರೈ, ದಿನೇಶ್ ಕಾಡಬೆಟ್ಟು, ಜಿನೇಂದ್ರ ಜೈನ್, ಪಿ.ಡಿ.ಒ.ಪಂಕಜಾ ಶೆಟ್ಟಿ, ಗ್ರಾಮ ಕರಣೀಕೆ ಆಶಾ ಮೆಹಂದಲೆ, ನಗರ ಒಳಚರಂಡಿ ಮತ್ತು ನೀರು ಸರಬರಾಜು ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಪಿ.ಎಲ್ ಡಿ ಬ್ಯಾಂಕ್ ನಾಮ ನಿರ್ದೇಶಕ ಸುದರ್ಶನ್ ಬಜೆ,


    ಅರಳ ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಮೀಧರ ಶೆಟ್ಟಿ, ಸದಸ್ಯರಾದ ಜಗದೀಶ್ ಅಳ್ವ, ಉಮೇಶ್ ಅರಳ, ಪ್ರಸನ್ನ ಶೆಟ್ಟಿ, ಅರಳ ಗ್ರಾಮ ಪಂಚಾಯತ್ ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣೀಕ ಅಮೃತ್ ವಂಶು, ಪಿ.ಡಿ.ಒ.ಧರ್ಮರಾಜ್, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಉಪಾಧ್ಯಕ್ಷೆ ವಿಮಲಮೋಹನ್, ಗ್ರಾಮ ಕರಣೀಕ ಪರೀಕ್ಷಿತ್ ಶೆಟ್ಟಿ, ಪ್ರಮುಖರಾದ ರತ್ನಕುಮಾರ್ ಚೌಟ, ವಸಂತ ಅಣ್ಣಳಿಕೆ ಮತ್ತಿತರರು ಉಪಸ್ಥಿತರಿದ್ದರು.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending