Connect with us

    BANTWAL

    2021ರ ಕಳ್ಳತನ ಪ್ರಕರಣ ಸೇರಿದಂತೆ 200ಕ್ಕೂ ಅಧಿಕ ಕೇಸ್‌ಗಳಿದ್ದ ಕುಖ್ಯಾತ ಕಳ್ಳ ಅರೆಸ್ಟ್

    Published

    on

    ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಹಿಂದೆ ನಡೆದ ಕಳ್ಳತನ ಪ್ರಕರಣದಲ್ಲಿ ಅಂತರರಾಜ್ಯ ಕಳ್ಳನೋರ್ವನನ್ನು ಗ್ರಾಮಾಂತರ ಠಾಣೆಯ ಪೋಲಿಸರ ತಂಡ ಬಂಧಿಸಿದೆ.

    ಕಣ್ಣೂರು ನಿವಾಸಿ ಮಹಮ್ಮದ್ ಅಲಕ್ಕೋಡು ಬಂಧಿತ ಆರೋಪಿ.

    ಈತನಿಂದ ಸುಮಾರು4.50 ಲಕ್ಷದ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. 2021 ಜನವರಿ 30 ರಂದು ಅಜಿಲಮೊಗರು ನಿವಾಸಿ ಖಾದರ್ ಅವರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ನಡೆದಿತ್ತು.

    ಈ ಪ್ರಕರಣವನ್ನು ಕೈಗೆತ್ತಿಕೊಂಡು ತೀವ್ರ ಕಾರ್ಯಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಇನ್ನು ಆರೋಪಿ ಮಹಮ್ಮದ್ ಅಲಕ್ಕೋಡು ಕುಖ್ಯಾತ ಕಳ್ಳನಾಗಿದ್ದು, ಈತನ ಮೇಲೆ ಕೇರಳ ರಾಜ್ಯದಲ್ಲಿ 200 ಕ್ಕೂ ಅಧಿಕ ಕಳವು ಪ್ರಕರಣ ದಾಖಲಾಗಿದೆ.

    ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಕಳ್ಳತನ ಅಕೌಂಟ್ ಓಪನ್ ಮಾಡಿದ್ದು, ಹತ್ತುಕ್ಕೂ ಅಧಿಕ ಕಡೆಗಳಲ್ಲಿ ಕಳ್ಳತನ ಮಾಡಿರುವುದು ತನಿಖೆ ವೇಳೆ ಬಯಲಾಗಿದೆ.

    ಬಂಧಿತನ ವಿಚಾರಣೆಯ ಬಳಿಕ ಇನ್ನಷ್ಟು ಕಳವು ಪ್ರಕರಣದ ಮಾಹಿತಿ ಲಭ್ಯವಾಗುವ ಸಾಧ್ಯತೆ ಗಳಿವೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending