Wednesday, October 5, 2022

ಬಂಟ್ವಾಳ: ಕಾರು-ಬೈಕ್ ಡಿಕ್ಕಿ, ಅಪಘಾತದ ವೀಡಿಯೋ ವೈರಲ್‌

ಬಂಟ್ವಾಳ: ಆಲ್ಟೋ ಕಾರು ಹಾಗು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟುವಿನ ಎಸ್ ಕೆ ಎಫ್ ತಿರುವಿನಲ್ಲಿ ನಿನ್ನೆ ಸಂಜೆ ಸಂಭವಿಸಿದೆ.


ಕಕ್ಯೆಪದವು ನಿವಾಸಿ ಕೃಷ್ಣಮಯ್ಯ ಅವರು ಗಾಯಗೊಂಡ ಬೈಕ್ ಸವಾರರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಇವರ ಜೊತೆಗೆ ಇದ್ದ ಸಹ ಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅಪಾಯದಿಂದ ಪಾರಾಗಿದ್ದಾರೆ.

ಬಂಟ್ವಾಳ ಬೈಪಾಸ್ ರಸ್ತೆಯಿಂದ ಬಂಟ್ವಾಳ ಪೇಟೆಗೆ ಭಂಡಾರಿ ಬೆಟ್ಟು ಎಂಬಲ್ಲಿಂದ ಎಸ್ಕೇಪ್ ರೋಡ್ ಗೆ ಬೈಕ್ ಕ್ರಾಸ್ ಮಾಡುವ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಘಟನೆಯ ದೃಶ್ಯ ಸಿ‌ಸಿಟಿ.ವಿಯಲ್ಲಿ ಸೆರೆಯಾಗಿದೆ. ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.