Connect with us

    BELTHANGADY

    ಶೋಕಿ ಜೀವನಕ್ಕಾಗಿ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದ ಬಂಟ್ವಾಳ ಮೂಲದ ಕಳ್ಳಿಯನ್ನು ಬೆಂಗಳೂರಲ್ಲಿ ಬಂಧಿಸಿದ ಪೊಲೀಸರು

    Published

    on

    ಬೆಳ್ತಂಗಡಿ: ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾ ಚಿನ್ನಾಭರಣ ಕದ್ದು ಸಿಲಿಕಾನ್ ಸಿಟಿ ಸೇರಿದ್ದ ಕಳ್ಳಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಚಿನ್ನಾಭರಣ ಸಹಿತ ಬಂಧಿಸಿದ್ದಾರೆ.


    ಬೆಳ್ತಂಗಡಿ ತಾಲೂಕಿನಲ್ಲಿರುವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬೆಂಗಳೂರಿನ ಶ್ರೀಮತಿ ಹೇಮಾ ಕುಟುಂಬದೊಂದಿಗೆ ಬಂದಿದ್ದು ಇವರ ಬಳಿ ಇದ್ದ 80 ಗ್ರಾಂ ತೂಕದ ಎರಡು ಹವಳದ ಚಿನ್ನದ ಮಾಂಗಲ್ಯ ಸರ ಹಾಗೂ 6000 ರೂಪಾಯಿ ನಗದು ಇದ್ದ ವ್ಯಾನಿಟಿ ಬ್ಯಾಗನ್ನು ಚಿಕಿತ್ಸೆಗೆ ಹೋಗಿದ್ದ ವೇಳೆಯಲ್ಲಿ ಕಳ್ಳತನ ಮಾಡಿದ್ದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


    ತನಿಖೆ ನಡೆಸಿದ ಪೊಲೀಸರು ಆರೋಪಿ ಬಂಟ್ವಾಳ ಗ್ರಾಮದ ನಿವಾಸಿ ಆರೋಪಿ ಯುವತಿ ವರ್ಷಾ(26) ಎಂಬಾಕೆ ಬೆಂಗಳೂರಿನಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಳ್ಳತನ ಮಾಡಿದ್ದ 65 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

    ಆಕೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳೆದ ಐದು ತಿಂಗಳಿಂದ ವಿಶೇಷ ಕರ್ತವ್ಯದಲ್ಲಿ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಅವರ ವಿಶೇಷ ತಂಡ ಬೆಂಗಳೂರಿನಲ್ಲಿ ಆಕೆಯನ್ನು ಬಂಧಿಸಿದೆ.


    ಚಿನ್ನದ ಅಂದಾಜು ಮೌಲ್ಯ ಅಂದಾಜು 2,50,000 ಆಗಿದೆ. ಕಳವು ಬಳಿಕ ಈಕೆ ದುಬೈಗೆ ತೆರಳಲು ಸಿದ್ಧತೆ ನಡೆಸಿದ್ದಳು. ತನ್ನ ಶೋಕಿ ಜೀವನಕ್ಕಾಗಿ ಕಳವು ಕೃತ್ಯ ಮಾಡಲು ಇಳಿದಿದ್ದಳು.


    ಆರೋಪಿ ವರ್ಷಾಳನ್ನು ಡಿಸೆಂಬರ್ 18 ರಂದು ದುಬೈಗೆ ಕಳುಹಿಸಿ ಕೆಲಸ ಮಾಡಲು ಮನೆಮಂದಿ ವಿಸಾ ಮಾಡಿಸಿದ್ದರು. ಇದೀಗ ಯುವತಿ ಕಳ್ಳತನ ಕೇಸ್ ನಲ್ಲಿ ಜೈಲು ಪಾಲಾಗಿದ್ದಾಳೆ.

     

    Baindooru

    ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

    Published

    on

    ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೋಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್(21) ಆತ್ಮಹತ್ಯೆಗೆ ಯತ್ನಿಸಿದ ಯುವಕ.

    ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ ಎಂದು ತಿಳಿದು ಬಂದಿದೆ.

    ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಹುಡುಗರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.

    ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬಿರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.

    ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈ ಘಟಣೆ ಬಗ್ಗೆ ಸಾರ್ವಜನಿಕರು ಈ ಮೂವರನ್ನು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

    Continue Reading

    Baindooru

    ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ

    Published

    on

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

    ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೈಸೂರಿನ ಉದ್ಯಮಿ ಎಂ.ಕೆ.ಪೋತ್‌ರಾಜ್, ಉದ್ಯಮಿ ಕಲಬುರಗಿಯ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು, ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.

    Continue Reading

    BELTHANGADY

    ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ

    Published

    on

    ಬೆಳ್ತಂಗಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಾಳೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

    ಮೊದಲಿಗೆ ಶ್ರೀ ಮಂಜುನಾಥನ ದರ್ಶನ ಪಡೆದು, ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌ತಿಳಿಸಿದ್ದಾರೆ.

    ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ನಬಾರ್ಡ್‌ ಅಧ್ಯಕ್ಷ ಶಾಜಿ, ಕೆ.ವಿ. ಸಂಸದ ಬ್ರಿಜೇಶ್‌ ಚೌಟ, ಶಾಸಕ ಹರೀಶ್‌ ಪೂಂಜ ಶುಭಾಶಂಸನೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

    Continue Reading

    LATEST NEWS

    Trending