Connect with us

BANTWAL

ಬಂಟ್ವಾಳದ ಭಗೀರಥ ಅಮೈ ಮಹಾಲಿಂಗ ನಾಯ್ಕರಿಗೆ ಕೇಂದ್ರ ಸರ್ಕಾರದ ಪದ್ಮ ಶ್ರೀ ಗೌರವ

Published

on

ಮಂಗಳೂರು :  ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಬಂಟ್ವಾಳದ ಅಮೈ ಮಹಾಲಿಂಗ ನಾಯ್ಕ ಅವರು ಕೇಂದ್ರ ಸರ್ಕಾರದ ಪದ್ಮ ಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 73ರ ಹರೆಯದ ಮಹಾಲಿಂಗ ನಾಯ್ಕ ಕರಾವಳಿ ಜಿಲ್ಲೆಗಳಲ್ಲಿ ಕೃಷಿ ನಿಧಾನವಾಗಿ ಹಿನ್ನೆಲೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕರಾಗಿದ್ದು ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಕೃಷಿಗೆ ನೀರು ಹಾಯಿಸಲು ಪಂಪ್‌ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್‌ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್‌ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಾಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದ ಕೀರ್ತಿಗೆ ಪಾತ್ರರಾಗಿದ್ದಾರೆ.

ಮಹಾಲಿಂಗ ನಾಯ್ಕರ ಬದುಕಿನ ಯಶೋಗಾಥೆ

ಅಡಿಕೆ, ತೆಂಗಿನ ಮರ ಏರುವುದರಲ್ಲಿ ಪರಿಣತಿ ಹೊಂದಿದ್ದ ಕೃಷಿಕೂಲಿ ಕಾರ್ಮಿಕ ಮಹಾಲಿಂಗ ನಾಯ್ಕ 40 ವರ್ಷಗಳ ಹಿಂದೆ ಊರಿನ ಕೃಷಿಕರ ತೋಟಗಳಲ್ಲಿ ದುಡಿಯುವಾಗ ಸ್ವಂತ ತೋಟ ಮಾಡುವ ಸ್ವಾವಲಂಬಿ ಜೀವನದ ಕನಸು ಕಂಡಿದ್ದರು. ಆದರೆ ಅದಕ್ಕೆ ಅವರಲ್ಲಿ ಜಮೀನು ಇರಲಿಲ್ಲ. ಭೂ ಮಾಲಕ ಅಮೈ ಮಹಾಬಲ ಭಟ್ಟರ ತೋಟಕ್ಕೆ ದಿನಾಲು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಈ ಆದಾಯದಲ್ಲಿ ಅವರ ಸಂಸಾರದ ರಥ ಸಾಗುತ್ತಿತ್ತು. 1978ರಲ್ಲಿ ಮಹಾಬಲ ಭಟ್ಟರ ಸಹಕಾರದಿಂದ 2 ಎಕರೆ ಗುಡ್ಡ ದರ್ಖಾಸ್ತು ರೂಪದಲ್ಲಿ ಮಹಾಲಿಂಗ ನಾಯ್ಕರಿಗೆ ಪ್ರಾಪ್ತವಾಯಿತು.

ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳುಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿ ಕಂಡು ಬಂದರೂ ಅವರು ತನ್ನ ಪ್ರಯತ್ನವನ್ನು ಬಿಡಲಿಲ್ಲ. ಅಲ್ಲೇ ಭವಿಷ್ಯ ರೂಪಿಸುವ ಉದ್ದೇಶದಿಂದ ಸ್ವಲ್ಪ ಜಾಗವನ್ನು ಸಮತಟ್ಟು ಮಾಡಿ ಸಣ್ಣದೊಂದು ಗುಡಿಸಲು ಕಟ್ಟಿದರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆಯೂ ಇರಲಿಲ್ಲ. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದುದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದಾರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನ ಮಾಡಿದರು.

ಮಹಾಲಿಂಗ ನಾಯ್ಕ ಮೊದಲು 30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀ. ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಆದರೂ ಅವರ ಅಪಾಯಕಾರಿ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು ಎಂದು ಮಹಾಲಿಂಗ ನಾಯ್ಕ ಅಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ.

ಯಾರು ಏನು ಹೇಳಿದರೂ ತನ್ನ ಭಗೀರಥ ಪ್ರಯತ್ನವನ್ನು ನಿಲ್ಲಿಸದೆ ಮುಂದುವರಿಸಿದ ಮಹಾಲಿಂಗ ನಾಯ್ಕರಿಗೆ ಆರನೇ ಪ್ರಯತ್ನ ಫಲ ನೀಡಿತು. ಈ ಪ್ರಯತ್ನದಲ್ಲಿ ನೀರು ಕಾಣಿಸಿತು. 25 ಮೀ. ಉದ್ದದ ಸುರಂಗದಲ್ಲಿ ಸಿಕ್ಕಿದ ನೀರಿನಲ್ಲಿ ಕೃಷಿ ಸಾಧ್ಯವಿಲ್ಲ ಎನ್ನುವುದು ಅವರಿಗೆ ಅರಿವಾಯಿತು. ಆರನೇ ಸುರಂಗದ ಪಕ್ಕದಲ್ಲಿ ಇನ್ನೊಂದು ಸುರಂಗ ಕೊರೆದರು. 25 ಮೀ. ತಲುಪುವಾಗ ನೀರು ಕಾಣಿಸಿಕೊಂಡಿತು. ಮತ್ತೆ ಮುಂದುವರಿಸಿ 75 ಮೀ. ಉದ್ದದ ಸುರಂಗವಾಗುವ ಹೊತ್ತಿಗೆ ಯಥೇಚ್ಛ ನೀರು ಸಿಕ್ಕಿತು. ಆಗ ಅವರ ತೋಟದ ಕನಸು ಮತ್ತೆ ಗರಿಗೆದರಿತು. ಸುರಂಗದ ನೀರನ್ನು ಸಂಗ್ರಹಿಸಲು ಮಣ್ಣಿನ ಟ್ಯಾಂಕ್ ನಿರ್ಮಿಸಿದರು. ನೀರಿನ ಸಂಪನ್ನತೆಯಿಂದಾಗಿ ತೋಟ ಮಾಡುವ ಕನಸು ನನಸಾಯಿತು. ಗುಡ್ಡವನ್ನು ಸಮತಟ್ಟು ಮಾಡಿ ಭತ್ತ, ಅಡಿಕೆ, ತೆಂಗು, ಬಾಳೆ ಕೃಷಿ ಕೈಗೊಂಡರು. ಮಡದಿ ಲಲಿತ ಮೂವರು ಮಕ್ಕಳು ಪ್ರಯತ್ನಕ್ಕೆ ಕೈ ಜೋಡಿಸಿದರು.

ಬದುಕಿನಲ್ಲಿ ಎದುರಾದ ದುರಂತ

ಕೃಷಿಯಿಂದ ಆದಾಯ ಬರುತ್ತಿದ್ದರೂ ಅವರು ಹಿಂದಿನ ದುಡಿಮೆಯ ಕಾಯಕವನ್ನು ನಿಲ್ಲಿಸಿರಲಿಲ್ಲ. ಹದಿನಾಲ್ಕು ವರ್ಷಗಳ ಹಿಂದೆ ನೆಗಳಗುಳಿ ಎಂಬಲ್ಲಿ ಕೃಷಿಕರೊಬ್ಬರ ತೋಟದಲ್ಲಿ ತೆಂಗಿನ ಮರ ಹತ್ತುತ್ತಿದ್ದಾಗ ಮಹಾಲಿಂಗ ನಾಯ್ಕ ಆಕಸ್ಮಿಕವಾಗಿ ಜಾರಿ ಬಿದ್ದು ಗಾಯಗೊಂಡರು. ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆ ಸೇರಿದ ಮಹಾಲಿಂಗ ನಾಯ್ಕ ಮೂರು ತಿಂಗಳು ಆಸ್ಪತ್ರೆಯಲ್ಲಿದ್ದರು. ಬಳಿಕ ಮನೆಗೆ ಮರಳಿದ್ದರೂ ಚೇತರಿಸಿಕೊಳ್ಳುವ ಹೊತ್ತಿಗೆ ಒಂದು ವರ್ಷ ಕಳೆದಿತ್ತು. ದುಡಿದು ಉಳಿಸಿದ ಹಣ ಕರಗಿ ಹೋಯಿತು. ಈ ಘಟನೆಯ ಬಳಿಕ ಅಡಿಕೆ, ತೆಂಗಿನಮರ ಹತ್ತುವ ಕಾಯಕದಿಂದ ನಿವೃತ್ತರಾದರು. ಆದರೆ ಕೃಷಿಯನ್ನು ಮುಂದುವರಿಸಿದರು.

ಒಂದು ಎಕರೆಯಲ್ಲಿ ಕೃಷಿ

ಮಹಾಲಿಂಗ ನಾಯ್ಕ ಒಂದು ಎಕರೆಯಲ್ಲಿ ಅಡಿಕೆ, ತೆಂಗು, ಬಾಳೆ, ಕಾಳುಮೆಣಸಿನ ಕೃಷಿ ಕೈಗೊಂಡಿದ್ದಾರೆ. ಇನ್ನೊಂದು ಎಕರೆಯಲ್ಲಿ ಕಾಡು ಬೆಳೆಸಿದ್ದಾರೆ. ಗೇರು ಕೃಷಿಯೂ ಇದೆ. ಮಣ್ಣಿನ ಟ್ಯಾಂಕಿಯಿಂದ ವಿದ್ಯುತ್‌ನ ಖರ್ಚಿಲ್ಲದೆ ಗ್ರಾವಿಟಿ ಮೂಲಕ ಅಡಿಕೆ, ತೆಂಗು ಮತ್ತು ಬಾಳೆಗಿಡಗಳಿಗೆ ನೀರು ಉಣಿಸುತ್ತಾರೆ. ಅವರ ತೋಟದಲ್ಲಿ 300 ಅಡಿಕೆ, 75 ತೆಂಗು, 200 ಬಾಳೆಗಿಡಗಳಿವೆ. ಹಟ್ಟಿಗೊಬ್ಬರ, ಕಾಂಪೋಸ್ಟ್ ಹೊರತು ಬೇರೆ ಯಾವುದೇ ಗೊಬ್ಬರದ ಬಗ್ಗೆ ಮಾಹಾಲಿಂಗ ನಾಯ್ಕರಿಗೆ ಗೊತ್ತಿಲ್ಲ. ಜಮೀನಿನಲ್ಲಿ ಇಂಗುಗುಂಡಿಗಳ ಮೂಲಕ ಜಲಕೊಯ್ಲು ಮಾಡುತ್ತಾರೆ. ನಾಲ್ಕು ವರ್ಷಗಳ ಹಿಂದೆ 2 ಬೋರ್‌ವೆಲ್ ತೆಗೆಸಿದ್ದಾರೆ. ಮೊದಲ ಬೋರ್‌ವೆಲ್ 400 ಅಡಿ ಸಾಗಿದ್ದರೂ ನೀರು ದೊರೆಯಲಿಲ್ಲ. 2ನೇ ಬೋರ್‌ನಲ್ಲಿ 370 ಅಡಿ ತಲುಪುವ ಹೊತ್ತಿಗೆ 1 ಇಂಚು ನೀರು ಸಿಕ್ಕಿದೆ. ಇದೀಗ ಬೋರ್‌ವೆಲ್‌ಗೆ ಪಂಪ್‌ಸೆಟ್ ಇದೀಗ ಅಳವಡಿಸಿದ್ದಾರೆ.

ಸಾಲಕ್ಕಾಗಿ ಯಾವುದೇ ಬ್ಯಾಂಕ್ ಮೊರೆ ಹೋಗಿಲ್ಲ. ಕೃಷಿಯಲ್ಲಿ ದೊರೆತ ಆದಾಯದಿಂದ ಸ್ವಂತ ಮನೆ ಕಟ್ಟಿದ್ದಾರೆ. ಮನೆಗೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳು ಬಂದಿವೆ. ಶಾಲಾ ಕಾಲೇಜುಗಳ ಮೆಟ್ಟಿಲು ಹತ್ತದ ಛಲಗಾರ ಮಹಾಲಿಂಗ ನಾಯ್ಕರಿಗೆ ದುಡಿಮೆ ಎಲ್ಲವನ್ನು ನೀಡಿದೆ. ಮಹಾಲಿಂಗ ನಾಯ್ಕರ ಏಕಾಂಗಿ ಸಾಧನೆಯನ್ನು ದೂರದರ್ಶನ ತನ್ನ ವಾಟರ್ ವಾರಿಯರ್ ಧಾರಾವಾಹಿಯಲ್ಲಿ ಬಿತ್ತರಿಸಿದೆ.

Click to comment

Leave a Reply

Your email address will not be published. Required fields are marked *

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending