Connect with us

    BANTWAL

    ಬಂಟ್ವಾಳ ನಗರ ಠಾಣೆಯ ಎಎಸ್‌ ಐ ಜಯರಾಮ ರೈ ನಿಧನ..!

    Published

    on

    ಬಂಟ್ವಾಳ : ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ  ಠಾಣೆಯ ಎಎಸ್ಸೈ ಜಯರಾಮ ರೈ ಅವರು  ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಮಂಚಿ ನಿವಾಸಿಯಾಗುರುವ 58 ವರ್ಷದ ರೈ  ಬಂಟ್ವಾಳ ನಗರ ಠಾಣೆಯಲ್ಲಿ ಎಎಸ್ಸೈ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಅವರು ಕೆಲವು ದಿನಗಳಿಂದ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿದ್ದು, ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

    ಅವರು ದ.ಕ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

    ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಸೈ ಅಗಿ ಕರ್ತವ್ಯ ಮಾಡುತ್ತಿದ್ದರು.

    Click to comment

    Leave a Reply

    Your email address will not be published. Required fields are marked *

    BANTWAL

    ಕಳ್ಳತನಕ್ಕೆ ವೃದ್ಧೆಯ ಕತ್ತು ಹಿಸುಕಿದ ಕಿರಾತಕರು..!

    Published

    on

    ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ  ನಡೆದಿದೆ.

    ವಿದೇಶದಲ್ಲಿರುವ ಸುಲೈಮಾನ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಡಿಯ ಕಿಟಕಿ ಸರಳು ತುಂಡರಿಸಿ ಬಾಗಿಲಿನ ಮೂಲಕ ಒಳನುಗ್ಗಿದ ಕಳ್ಳರು ಅಜ್ಜಿಯನ್ನು ಘಾಸಿಗೊಳಿಸಿ ಚಿನ್ನಾಭರಣ ಲೂಟಿದ್ದಾರೆ. ಮನೆಯ ಕೋಣೆಯೊಳಗೆ ನಿದ್ರಿಸಿದ್ದ ವೃದ್ಧೆ ಐಸಮ್ಮಾ(72)ಅವರ ಕತ್ತು ಹಿಸುಕಿ ಪ್ರಜ್ಞಾಹೀನರಾದ ಬಳಿಕ ಕಿವಿಯಲ್ಲಿದ್ದ ಚಿನ್ನ ಕಸಿದು ಪರಾರಿಯಾಗಿದ್ದಾರೆ.

    ಇನ್ನೊಂದು ಕೋಣೆಯಲ್ಲಿ ಮಕ್ಕಳೊಂದಿಗೆ ಮಲಗಿದ್ದ ಸೊಸೆ ಐಸಮ್ಮಾ ಅವರಿಗೆ ಈ ವಿಚಾರ ಬೆಳಗ್ಗೆ ಅರಿವಿಗೆ ಬಂದಿದೆ. ಬೆಳಗ್ಗೆ ಎದ್ದು ಅತ್ತೆಯನ್ನು ಎಚ್ಚರಿಸಲು ಬಂದಾಗ ಅತ್ತೆ ಐಸಮ್ಮಾ ಪ್ರಜ್ಞಾಹೀನರಾಗಿ ಬಿದ್ದುಕೊಂಡಿದ್ದರು. ಏನೋ ತೀವೃ ಅಸೌಖ್ಯ ಎಂದು ಶಂಕಿಸಿ ಮನೆಯವರು, ನೆರೆಯ ಸಂಬಂದಿಕರಿಗೆ ಮಾಹಿತಿ ನೀಡಿದ್ದಾರೆ. ಸಂಬಂದಿಗಳು ಬಂದು ನೋಡಿದಾಗ ಕಿಟಕಿಯ ಸರಳು ತುಂಡರಿಸಿರುವುದು ಮತ್ತು ಮಹಡಿಯ ಬಾಗಿಲು ತೆರೆದಿರುವುದು ಕಂಡುಬಂದಿತ್ತು. ಇದಾದ ಬಳಿಕ ಮನೆಯವರು ಮತ್ತಷ್ಟು ಪರಿಶೀಲಿಸಿದಾಗ ಅಜ್ಜಿಯ ಕಿವಿಯೋಲೆಗಳು ಕಳ್ಳತನ ಆಗಿರುವುದು ಗೊತ್ತಾಗಿದೆ. ಬಳಿಕ ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಮೂಲಕ ಪರಿಶೀಲನೆ ನಡೆಸಲಾಗಿದೆ. ಗಾಯಗೊಂಡ ವೃದ್ಧೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಲೈಮಾನ್ ಸಹೋದರ ಇಬ್ರಾಹಿಂ ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    BANTWAL

    ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಪಾತ್ರಿ ಶ*ವವಾಗಿ ಪತ್ತೆ!

    Published

    on

    ಬಂಟ್ವಾಳ : ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃ*ತದೇಹ ಪತ್ತೆಯಾಗಿದೆ. ಪಾತ್ರಿಯಾಗಿದ್ದ ಗಿರೀಶ್, ದೈವ ಚಾಕಿರಿಯ ಜೊತೆಗೆ ಜೀವನೋಪಾಯಕ್ಕಾಗಿ ಆಟೋ ಚಾಲನೆಯ ಕೆಲಸ ಮಾಡುತ್ತಿದ್ದರು. ಬಜಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಹೇಳಿ ಬುಧವಾರ ತಡರಾತ್ರಿ ಎರಡು ಗಂಟೆಗೆ ರಿಕ್ಷಾದಲ್ಲಿ ಹೊರಟವರು ಬಳಿಕ ನಾಪತ್ತೆಯಾಗಿದ್ದರು.

    ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗುರುವಾರ ಅವರ ರಿಕ್ಷಾವು ಅಡ್ಡರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜಪೆ ಪೊಲೀಸರು ಅನುಮಾನಾಸ್ಪದ ವಾಗಿ ಚಾಲನೆಯಲ್ಲೇ ನಿಂತಿದ್ದ ರಿಕ್ಷಾವನ್ನು ಪರಿಶೀಲಿಸಿದರು.

    ಇದನ್ನೂ ಓದಿ : ಹೋಂ ವರ್ಕ್ ಮಾಡುತ್ತಿದ್ದಾಗ ತಲೆಗೆ ಪೆನ್ ಚುಚ್ಚಿ ಯುಕೆಜಿ ಮಗು ಸಾ*ವು!

    ಪರಿಸರದಲ್ಲಿ ಹುಡುಕಿದರೂ ಚಾಲಕನ ಪತ್ತೆಯಾಗಲಿಲ್ಲ, ಬಳಿಕ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಗೆ ಮಾಹಿತಿ ನೀಡಿದ್ದರು. ತೀವ್ರ ಹುಡುಕಾಟದ ಬಳಿಕ ಅವರು ಶ*ವವಾಗಿ ಪತ್ತೆಯಾಗಿದ್ದಾರೆ.

    Continue Reading

    BANTWAL

    ಅಜಿಲಮೊಗರು: ನೀರು ಪಾಲಾ*ದ ವ್ಯಕ್ತಿಯ ಮೃ*ತದೇಹ ಪತ್ತೆ

    Published

    on

    ಬಂಟ್ವಾಳ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಅವರ ಮೃ*ತದೇಹ ಜುಲೈ 5ರಂದು ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

    ಮೈಕಲ್ ಗುರುವಾರ ಸಂಜೆ ಅಜಿಲಮೊಗರು ಕೂಟೇಲು ಸೇತುವೆ ಬಳಿ ಕಂಡಿ ಅಣೆಕಟ್ಟಿನಲ್ಲಿ ಕುಳಿತು ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ಬಿ*ದ್ದು ನೀರು ಪಾ*ಲಾಗಿದ್ದರು.

    ಸುದ್ದಿ ತಿಳಿಯುತ್ತಿದ್ದಂತೆ ರಾತ್ರಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನದಿಯಲ್ಲಿ ಹುಡುಕುವ ಪ್ರಯತ್ನ ನಡೆಸಿದರಾದರೂ ಸುಳಿವು ಸಿಕ್ಕಿರಲಿಲ್ಲ. ಬೆಳಿಗ್ಗೆ ನೇತ್ರಾವತಿ ನದಿಯಲ್ಲಿ ನೀರು ಇಳಿಕೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದಾಗ ಮೃ*ತದೇಹ ಪತ್ತೆಯಾಗಿದೆ.

    ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೈಕಲ್ ಅವರ ಮನೆ ಮಂದಿ ಸ್ಥಳಕ್ಕೆ ಆಗಮಿಸಿದ್ದರು.

    Continue Reading

    LATEST NEWS

    Trending