Connect with us

    BANTWAL

    ಬಂಟ್ವಾಳ ಗ್ಯಾಂಗ್‌ರೇಪ್‌ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

    Published

    on

    ಬಂಟ್ವಾಳ: ಬಂಟ್ವಾಳದ ಬಾಲಕಿಯೊಬ್ಬಳ ಮೇಲೆ ಗ್ಯಾಂಗ್‌ರೇಪ್‌ ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಕೋರ್ಟ್‌ ಆದೇಶಿಸಿದೆ.


    ಆರೋಪಿಗಳಾದ ಕಾಪು ನಿವಾಸಿ ಕೆ ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್ ಹಾಗೂ ಇದಾಯತ್ತುಲ್ಲ ಎಂಬ ನಾಲ್ವರನ್ನು ಇಂದು ಮಂಗಳೂರಿನ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.
    ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಾಹಿತಿ ನೀಡಿದ್ದಾರೆ.

    ಪ್ರಕರಣದಲ್ಲಿ ಬಾಲಕಿಯ ದೂರು ಮತ್ತು ಆರೋಪಿಗಳ ವಿಚಾರಣೆಯ ಬಳಿಕ ಇಡೀ ಪ್ರಕರಣದಲ್ಲಿ ಬಾಲಕಿಯ ಪರಿಚಿತ ವ್ಯಕ್ತಿಗಳಾದ ಇಬ್ಬರು ಸೇರಿ ಒಟ್ಟು ನಾಲ್ವರು ಆರೋಪಿಗಳಿರುವುದು ಖಚಿತವಾಗಿದೆ ಎಂದರು.

    ಅಡಿಷನಲ್ ಎಸ್ಪಿ ಡಾ. ಶಿವಕುಮಾರ್ ಮಾರ್ಗದರ್ಶನದಲ್ಲಿ, ಬಂಟ್ವಾಳ ಎ.ಎಸ್.ಪಿ.ಶಿವಾಂಶು ರಜಪೂತ್ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರ ತಂಡದ ಸಹಕಾರದೊಂದಿಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿತ್ತು.

    ಬೇರೆ ಬೇರೆ ಪ್ರದೇಶಗಳಲ್ಲಿದ್ದ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ವಿಚಾರಣೆ ನಡೆಸಿದಾಗ ಮಂಗಳೂರಿನಲ್ಲಿ ಈ ಕೃತ್ಯ ನಡೆದಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿರುವುದಾಗಿ ಎಸ್‌ಪಿ ತಿಳಿಸಿದರು.

    ಆರಂಭದಲ್ಲಿ ತನ್ನನ್ನು ಕಾರಿನಲ್ಲಿ ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂಬ ದೂರಿನಂತೆ ತನಿಖೆ ನಡೆಸಿದ ವೇಳೆ ಈ ಅಂಶ ಬಯಲಿಗೆ ಬಂದಿದೆ ಎಂದು ತಿಳಿಸಿದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಎಸ್ಪಿ ಶಿವಾಂಶು ರಜಪೂತ್ ಅವರ ನೇತೃತ್ವದ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್, ಬಂಟ್ವಾಳ ಎಸ್ಸೈ ಅವಿನಾಶ್ ಗೌಡ ಹಾಗೂ ಸಹಕರಿಸಿದ ಎಸ್ಸೈ ಪ್ರಸನ್ನ ಈ ಸಂದರ್ಭ ಉಪಸ್ಥಿತರಿದ್ದರು. ಆರೋಪಿಗಳನ್ನು ಇಂದು ಮಧ್ಯಾಹ್ನ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಈಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending