ಬಂಟ್ವಾಳ ಮಾಣಿಯಲ್ಲಿ ಬುಧವಾರ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಮಹೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು ಧೈರ್ಯ ತುಂಬಿದ್ದಾರೆ.
ಮಂಗಳೂರು : ಬಂಟ್ವಾಳ ಮಾಣಿಯಲ್ಲಿ ಬುಧವಾರ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಮಹೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು ಧೈರ್ಯ ತುಂಬಿದ್ದಾರೆ.
ಈ ಬಗ್ಗೆ ಪ್ರತಿಕ್ರೀಯಿಸಿರುವ ಶಾಸಕ ರಾಜೇಶ್ ನಾಯ್ಕ್ ಘಟನೆ ನಡೆದ ಸಂದರ್ಭದಲ್ಲಿ ತಾನು ವಿಧಾನಸಭಾ ಅಧಿವೇಶನದಲ್ಲಿದ್ದು, ವಿಚಾರ ಗಮನಕ್ಕೆ ಬಂದ ಕೂಡಲೇ ಎಸ್ಪಿಯವರನ್ನು ಸಂಪರ್ಕಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಬಂಟ್ವಾಳ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಕದಡುವುದಕ್ಕೆ ಅವಕಾಶ ನೀಡುವುದಿಲ್ಲ. ಬಿಜೆಪಿ, ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆಗೆ ಮುಂದಾದರೆ ಸುಮ್ಮನಿರುವುದಿಲ್ಲ. ಕಾರ್ಯಕರ್ತರು ಧೃತಿಗೆಡಬಾರದು, ನಿಮ್ಮ ಜತೆ ನಾವಿದ್ದೇವೆ ಎಂದರು.
ಬಂಟ್ವಾಳ ಶಾಸಕ ರಾಜೆಶ್ ನಾಯಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಕ್ಯಾ.ಬ್ರಿಜೇಶ್ ಚೌಟ, ಮಾಧವ ಮಾವೆ, ಸುದರ್ಶನ್ ಬಜ, ಮುರಳಿಕೃಷ್ಣ ಹಸಂತ್ತಡ್ಕ, ಭುಜಂಗ ಕುಲಾಲ್, ಗಣೇಶ್ ರೈ ಮಾಣಿ ಮೊದಲಾದವರಿದ್ದರು.