Connect with us

    BANTWAL

    ಬಂಟ್ವಾಳ ಹಿಂದೂ ಕಾರ್ಯಕರ್ತ ರಾಜೇಶ್ ಪೂಜಾರಿ ನಿಗೂಢ ಸಾವು : ಚುರುಕುಗೊಂಡ ಪೊಲೀಸ್ ತನಿಖೆ..!

    Published

    on

    ಬಂಟ್ವಾಳ : ಹಿಂದೂ ಕಾರ್ಯಕರ್ತ ಬಂಟ್ವಾಳ ತಾಲೂಕು ಸಜೀಪ ನಡು ಗ್ರಾಮದ ಸಾನದ ಮನೆ ರಾಜೇಶ್ ಪೂಜಾರಿ ನಿಗೂಢ ಸಾವು ಪ್ರಕರಣದ ಬಗ್ಗೆ  ಬಂಟ್ವಾಳ  ಪೊಲೀಸರು ತನಿಖೆಯನ್ನಯ ತೀವ್ರಗೊಳಿಸಿದ್ದಾರೆ.

    ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆ ವರದಿ ಬಳಿಕ ಹಾಗೂ ಪೋಲೀಸರ ತನಿಖೆಯಿಂದ ಸ್ಪಷ್ಟವಾದ ಮಾಹಿತಿ ಲಭ್ಯವಾಗಲಿದ್ದು, ವರದಿಗಾಗಿ ಕಾಯ ಬೇಕಾಗಿದೆ.

    ಜನವರಿ 12 ರಂದು ಬೆಳಗ್ಗೆ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ರಾಜೇಶ್ ಪೂಜಾರಿ ಅವರ ದ್ವಿಚಕ್ರ ವಾಹನ ಮಗುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಳಿಕ ಸೇತುವೆಯ ಅಡಿ ಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

    ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು.

    ಮೃತದೇಹದಲ್ಲಿ ಯಾವುದೇ ಗಾಯಗಳು ಕಂಡು ಬಂದಿಲ್ಲ. ಅವರ ಶರ್ಟ್ ನಲ್ಲಿ ಮೋಬೈಲ್ ಪೋನ್ ಹಾಗೂ ಪರ್ಸ್ ಪತ್ತೆಯಾಗಿದ್ದು, ಮೊಬೈಲ್ ಕರೆಯನ್ನು ಪರಿಶೀಲನೆ ನಡೆಸಿ ಬಳಿಕ ಸಾವಿನ ಪ್ರಾಥಮಿಕ ವರದಿಯನ್ನು ಪೋಲಿಸರು ನೀಡುವ ಸಾಧ್ಯತೆ ಇದೆ.

    ಸದ್ಯ ಪೋಲೀಸರು ಸ್ಥಳೀಯವಾಗಿ ಇರುವ ಸಿ.ಸಿ.ಕ್ಯಾಮರಾಗಳ ಪರಿಶೀಲನೆ ನಡೆಸುತ್ತಿದ್ದು, ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending