Connect with us

    BANTWAL

    ಬಂಟ್ವಾಳ ಕಕ್ಯಪದವು ಸತ್ಯ ಧರ್ಮ ಜೋಡುಕರೆ ಕಂಬಳಕೂಟ ಸಂಪನ್ನ-ಭಾಗಿಯಾದ 214 ಜತೆ ಕೋಣಗಳು

    Published

    on

    ಬಂಟ್ವಾಳ: ಶನಿವಾರ ಮತ್ತು ರವಿವಾರ ನಡೆದ ಬಂಟ್ವಾಳದ ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ದಶಮಾನೋತ್ಸವದ ಹೊನಲು ಬೆಳಕಿನ ಸತ್ಯ- ಧರ್ಮ ಜೋಡುಕರೆ ಬಯಲು ಕಂಬಳ ಕೂಟದಲ್ಲಿ ದಾಖಲೆಯ 214 ಜತೆ ಕೋಣಗಳು ಭಾಗವಹಿಸಿದ್ದವು.

    ಕನೆಹಲಗೆ ವಿಭಾಗದಲ್ಲಿ 2 ಜತೆ, ಅಡ್ಡಹಲಗೆ ವಿಭಾಗದಲ್ಲಿ 9 ಜತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜತೆ, ನೇಗಿಲು ಹಿರಿಯ ವಿಭಾಗದಲ್ಲಿ 31 ಜತೆ, ಹಗ್ಗ ಕಿರಿಯ ವಿಭಾಗದಲ್ಲಿ 26 ಜತೆ, ನೇಗಿಲು ಕಿರಿಯ ವಿಭಾಗದಲ್ಲಿ 75 ಜತೆ ಮತ್ತು ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ 52 ಜತೆ ಕೋಣಗಳು ಭಾಗವಹಿಸಿದ್ದವು.

    ಕಂಬಳದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ಉಳಿಪಾಡಿಗುತ್ತು ಅವರು ಮಾತನಾಡಿ ನಮ್ಮ ಮೂಲ ಸಂಸ್ಕೃತಿಯ ಜತೆ ರೈತರ ಜಾನಪದ ಕ್ರೀಡೆ ಕಂಬಳವನ್ನು ಉಳಿಸಿ ಬೆಳಸಬೇಕು ಎಂದರು.

    ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ। ಪಿ.ಎಸ್‌. ಹರ್ಷ, ಪ್ರಮುಖರಾದ ಜಗನ್ನಾಥ ನಿರ್ಮಲ್‌ ನರಿಕೊಂಬು, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್‌ ಹೆಗ್ಡೆ ಎರ್ಮಾಳ್‌, ಪ್ರಧಾನ ತೀರ್ಪುಗಾರ ಗುಣಪಾಲ ಕಡಂಬ, ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಅಧ್ಯಕ್ಷ ಲಕ್ಷ್ಮಣ ಪೂಜಾರಿ ನೇರಳ ಪಲ್ಕೆ, ಶಿವಾನಂದ ಮೈರಾ, ಪುರಂದರ ಕುಕ್ಕಾಜೆ ಮುಂತಾದವರು ಉಪಸ್ಥಿತರಿದ್ದರು.

    ಸಾಧಕರಾದ ಸಂಜೀವ ಶೆಟ್ಟಿ ಕಿಂಜಾಲು, ಶಿವಪ್ಪ ಪೂಜಾರಿ ಜೇಡರ ಬೆಟ್ಟು, ಬಾಲಕೃಷ್ಣ ಬಂಗಾಡಿ, ವಜ್ರ ಪೂಜಾರಿ, ಮೋನಪ್ಪ ಸಾಲಿಯಾನ್‌, ವೈಭವ್‌ ಕೆ. ಅರ್ಮುಡ್ತಾಯ ಅವರನ್ನು ಸನ್ಮಾನಿಸಲಾಯಿತು.


    ಕಂಬಳದ ಫಲಿತಾಂಶ:
    ಕನೆಹಲಗೆ ವಿಭಾಗದಲ್ಲಿ ಬೇಲಾಡಿ ಬಾವ ಅಶೋಕ್ ಶೆಟ್ಟಿ ಮತ್ತು ವಾಮಂಜೂರು ತಿರುವೈಲುಗುತ್ತು ನವೀನ್‌ ಚಂದ್ರ ಆಳ್ವ ಅವರು ಸಮಾನ ಬಹುಮಾನ ಪಡೆದರು. ಇಲ್ಲಿ ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗ ಮತ್ತು ಬೈಂದೂರು ಭಾಸ್ಕರ ದೇವಾಡಿಗ ಅವರು.

    ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಪೆರಿಯಾವು ಗುತ್ತು ಸತೀಶ್ ಗಟ್ಟಿಯಾಳ್ ದ್ವಿತೀಯ ಸ್ಥಾನ ಗಳಿಸಿದರು. ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ಮತ್ತು ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ. ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಎ” ಮತ್ತು ದ್ವಿತೀಯ ಸ್ಥಾನ ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ “ಎ” ಅವರು ಪಡೆದರು.

    ಓಡಿಸಿದವರು ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮತ್ತು ಬೈಂದೂರ್ ಹರೀಶ್. ಹಗ್ಗ ಕಿರಿಯ ವಿಭಾಗದಲ್ಲಿ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಪ್ರಥಮ ಹಾಗೂ ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ತಾನಾಜಿ ಬಿ ಶೆಟ್ಟಿ ದ್ವಿತೀಯ ಸ್ಥಾನ ಗಳಿಸಿದರು. ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್ ಮತ್ತು ಮರೋಡಿ ಶ್ರೀಧರ್ ಕೋಣ ಓಡಿಸಿದ್ದರು.

    ನೇಗಿಲು ಹಿರಿಯ ವಿಭಾಗದಲ್ಲಿ ಬೆಳ್ಳಿಪ್ಪಾಡಿ ಕೈಪ ಕೇಶವ ಮಂಕು ಭಂಡಾರಿ “ಬಿ” ಪ್ರಥಮ ಹಾಗೂ ಕನಡ್ತ್ಯಾರ್ ಕೃಷ್ಣ ಶೆಟ್ಟಿ ದ್ವಿತೀಯ ಸ್ಥಾನ ಪಡೆದರು. ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಮತ್ತು ಕಾವೂರ್ ತೋಟ ಸುದರ್ಶನ್ ಕೋಣ ಓಡಿಸಿದರು.

    ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಜೈ ತುಳುನಾಡ್ ಕಕ್ಯಪದವು ಪುನ್ಕೆದಡಿ ರಾಮಯ್ಯ ಭಂಡಾರಿ ಮತ್ತು ದ್ವಿತೀಯ ಸ್ಥಾನ ಪಣೋಲಿಬೈಲು ಭಂಡಾರಮನೆ ಶಿವಾನಂದ ಕುಲಾಲ್ ಪಡೆದರು. ಕೋಣ ಓಡಿಸಿದವರು ಕಕ್ಯಪದವು ಪೆಂರ್ಗಾಲು ಕೃತಿಕ್ ಮತ್ತು ಪೆರಿಂಜೆ ಪ್ರಮೋದ್.

    ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ ಪ್ರಥಮ ಹಾಗೂ ದ್ವಿತೀಯ: ಭಟ್ಕಳ ಎಚ್.ಎನ್. ನಿವಾಸ ಪಿನ್ನುಪಾಲ್ ದ್ವಿತೀಯ ಸ್ಥಾನ ಗಳಿಸಿದರು. ಬೈಂದೂರು ವಿಶ್ವನಾಥ ದೇವಾಡಿಗ ಮತ್ತು ಭಟ್ಕಳ ವಿನೋದ್ ಕೋಣ ಓಡಿಸಿದ್ದರು.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending