ಬಂಟ್ವಾಳ: ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಉರುಳಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಬಿ.ಸಿ ರೋಡ್ – ಬೆಳ್ತಂಗಡಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಎಂಬಲ್ಲಿ ಈ ಅಪಘಾತ ನಡೆದಿದೆ.
ಕಾರಿನಲ್ಲಿ ಒಂದೇ ಕುಟುಂಬದ ಮೂವರು ಪ್ರಯಾಣಿಸುತ್ತಿದ್ದು, ಭಾಗೀರಥಿ(58) ಎಂಬವರು ಮೃತ ಪಟ್ಟಿದ್ದಾರೆ. ಮಂಗಳೂರಿನ ಕೊಡಿಯಾಲ್ ಬೈಲ್ ನಿವಾಸಿಗಳಾದ ಇವರು ಶಿವಮೊಗ್ಗಕ್ಕೆ ತೆರಳಿ ವಾಪಾಸಾಗುವಾಗ ಬೆಳಗಿನ ಜಾವ 4.30 ಗಂಟೆಗೆ ಈ ಅಪಘಾತ ನಡೆದಿದೆ. ಕಾರಿನಲ್ಲಿ ಭಾಗೀರಥಿ ಅವರ ಪುತ್ರಿ ಸುಚಿತ್ರ ಮತ್ತು ಅಳಿಯ ರೂಪೇಶ್ ಪ್ರಯಾಣಿಸುತ್ತಿದ್ದು ರೂಪೇಶ್ ಕಾರು ಚಲಾಯಿಸುತ್ತಿದ್ದರು. ದಸರಾ ರಜೆಗೆ ಶಿವಮೊಗ್ಗಕ್ಕೆ ತೆರಳಿ ವಾಪಾಸಾಗುವಾಗ ಈ ಅಪಘಾತ ನಡೆದಿದ್ದು, ರೂಪೇಶ್ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಚಿತ್ರಾ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದೆ.
ಬಾಂಬಿಲ ಬಳಿಯಲ್ಲಿ ಈ ಹಿಂದೆಯೂ ಹಲವು ಅಪಘಾತಗಳು ನಡೆದು ಜೀವ ಹಾನಿ ಸಂಭವಿಸಿದೆ. ಇಲ್ಲಿನ ತಿರುವು ಹಾಗೂ ಇಳಿಜಾರಿನಿಂದ ಕೂಡಿದ ರಸ್ತೆ ನಿರಂತರ ಅಪಘಾತದಿಂದಾಗಿ ಅಪಘಾತ ವಲಯ ಆಗಿ ಬದಲಾಗಿದೆ. ಇಲ್ಲಿ ಅಪಘಾತ ತಡೆಯಲು ಹೆದ್ದಾರಿ ಇಲಾಖೆ ಸೂಕ್ತ ಸೂಚನ ಫಲಕಗಳನ್ನು ಅಳವಡಿಸುವ ಜೊತೆ ರಸ್ತೆಯಲ್ಲಿ ಹಂಪ್ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
Pingback: ಸಂಪಾಜೆ : ಕಾರು ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿ - NAMMAKUDLA NEWS - ನಮ್ಮಕುಡ್ಲ ನ್ಯೂಸ್