Connect with us

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    BANTWAL

    ಭೀ*ಕರ ರಸ್ತೆ ಅ*ಪಘಾತ; ಮಹಿಳೆ ಸಾ*ವು, ಮಕ್ಕಳ ಸಹಿತ 8 ಮಂದಿಗೆ ಗಾ*ಯ

    Published

    on

    ಬಂಟ್ವಾಳ: ಕಾರು ಮತ್ತು ರಿಕ್ಷಾ ನಡುವೆ ಭೀ*ಕರ ಅ*ಪಘಾತವಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾ*ವನ್ನಪ್ಪಿ, ಮಕ್ಕಳ ಸಹಿತ 8 ಮಂದಿಗೆ ಗಾ*ಯಗಳಾಗಿರುವ ಘಟನೆ ಬಂಟ್ವಾಳದ ವಗ್ಗ ಸಮೀಪ ಬಾಂಬಿಲದಲ್ಲಿ ಇಂದು (ಡಿ.5) ಸಂಭವಿಸಿದೆ.

    ಪಂಜಿಕಲ್ಲು ಬಾಂದೊಟ್ಟು ರೆಚ್ಚಾಡಿ ಹರೀಶ್‌ ಎಂಬುವವರ ಪತ್ನಿ ತಿಲಕ (40) ಮೃ*ತ ಮಹಿಳೆ.

    ಮಕ್ಕಳ ಸಹಿತ ರಿಕ್ಷಾದಲ್ಲಿದ್ದ ಎಂಟು ಮಂದಿಗೆ ಗಾ*ಯವಾಗಿದ್ದು, ಅವರನ್ನು ಯಶಸ್ವಿನಿ, ಗೀತಾ, ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ಮಕ್ಕಳಾದ ದಿಗಂತ್‌, ದಿಶಾನಿ ಎಂದು ಗುರುತಿಸಲಾಗಿದೆ. ಗಾ*ಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮದ್ವದಲ್ಲಿ ಸಂಬಂಧಿಕರ ಮನೆಯಲ್ಲಿ ನಡೆದ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಾಸು ಮನೆಗೆ ಬರುವ ಸಂದರ್ಭ ದು*ರ್ಘಟನೆ ನಡೆದಿದೆ. ಪಂಜಿಕಲ್ಲುವಿನಿಂದ ನಾರಾಯಣ ಪೂಜಾರಿಯ ರಿಕ್ಷಾವನ್ನು ಗಾಯಾಳುಗಳು ಬಾಡಿಗೆ ಮಾಡಿದ್ದು, ಕಾರ್ಯಕ್ರಮ ಮುಗಿಸಿ ಅದೇ ಗಾಡಿಯಲ್ಲಿ ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ವೇಳೆ ರಿಟ್ಸ್‌ ಕಾರು ಮತ್ತು ಆಪೆ ರಿಕ್ಷಾ ನಡುವೆ ಅ*ಪಘಾತವಾಗಿದೆ.

    ಇನ್ನು ಘಟನೆ ತಿಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಗಾಯಾಳುಗಳು ದಾಖಲಾಗಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮೃತರಾದ ತಿಲಕ ಅವರ ಮೃತದೇಹ ಇರಿಸಲಾದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಘಟನೆಯ ಕುರಿತು ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BANTWAL

    ಡಿ. 8ರಂದು ಯಕ್ಷಾವಾಸ್ಯಂ ಕಾರಿಂಜ ಚತುರ್ಥ ವಾರ್ಷಿಕೋತ್ಸವ

    Published

    on

    ಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಚತುರ್ಥ ವಾರ್ಷಿಕೋತ್ಸವ ಡಿಸೆಂಬರ್ 8ರಂದು ಕಾಡಬೆಟ್ಟಿನ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದೆ ಎಂದು ಸಂಚಾಲಕಿ ಸಾಯಿಸುಮಾ ನಾವಡ ಹೇಳಿದ್ದಾರೆ.

    ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 6:30ರ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಯಕ್ಷಾವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಕಲಾವಿದರಾದ ಹರಿನಾರಾಯಣ ಬೈಪಡಿತ್ತಾಯ, ಲೀಲಾವತಿ ಬೈಪಡಿತ್ತಾಯ ದಂಪತಿಗೆ ನೀಡಿ ಗೌರವಿಸಲಾಗುವುದು. ಅಭಿನಂದನಾ ನುಡಿಗಳನ್ನು ಕಲಾವಿದ ಚಂದ್ರಶೇಖರ ಭಟ್ ಕೊಂಕಣಾಜೆ ಆಡಲಿದ್ದಾರೆ ಎಂದರು.

    ಅಪರಾಹ್ನ 2 ಗಂಟೆಗೆ ಪಿ.ಜಿನರಾಜ ಆರಿಗ ದೀಪೋಜ್ವಲನ ಮಾಡಲಿದ್ದಾರೆ. ಬಳಿಕ ಯಕ್ಷಗಾನದ ಪೂರ್ವರಂಗವನ್ನು ಕೇಂದ್ರದ ವಿದ್ಯಾರ್ಥಿಗಳು ಶ್ರೀನಿವಾಸ ಬಳ್ಳಮಂಜ ನಿರ್ದೇಶನದಲ್ಲಿ ಮಾಡಲಿದ್ದಾರೆ. ಅದಾದ ನಂತರ, ಮಕ್ಕಳ ಯಕ್ಷಗಾನ ನರಕಾಸುರ, ಮೈಂದ ದ್ವಿವಿದ ಶ್ರೀನಿವಾಸ ಬಳ್ಳಮಂಜ ಮತ್ತು ಸಾಯಿಸುಮಾ ಎಂ. ನಾವಡ ಪ್ರಸ್ತುತಿಯಲ್ಲಿ ವಿದ್ಯಾರ್ಥಿಗಳು ಅಭಿನಯಿಸಲಿದ್ದಾರೆ. ಸಂಜೆ 6:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸಲಿದ್ದಾರೆ ಎಂದು ತಿಳಿಸಿದರು.

    ಅಭ್ಯಾಗತರಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪಕ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪಪ್ರಾಂಶುಪಾಲರಾದ ಉದಯ ಕುಮಾರ್ ಜೈನ್, ಜೇಸಿ ಮಡಂತ್ಯಾರು ನಿಕಟಪೂರ್ವ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಆಲಂಪುರಿಗುತ್ತು ಶ್ರುತಾಂಜನ್ ಜೈನ್, ಶಾರದಾಂಬಾ ಭಜನಾ ಮಂದಿರ ಕಾಡಬೆಟ್ಟು ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾವಳಪಡೂರು ಗ್ರಾಪಂ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾವಳಮುಡೂರು ಗ್ರಾಪಂ ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಕಾವಳಪಡೂರು ಗ್ರಾಪಂ ಸದಸ್ಯ ವೀರೇಂದ್ರ ವಗ್ಗ ಭಾಗವಹಿಸುವರು. ವಿದ್ಯಾರ್ಥಿ ಪುರಸ್ಕಾರ, ಬಳಿಕ ಕಿತ್ತೂರು ರಾಣಿ ಚೆನ್ನಪ್ಪ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ನಿರ್ದೇಶನದಲ್ಲಿ ವೀರಮಣಿ ಕಾಳಗ ನಡೆಯಲಿದೆ ಎಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಯಕ್ಷಕೂಟ ಮಧ್ವ ಸಂಚಾಲಕ ಭಾಸ್ಕರ ಶೆಟ್ಟಿ ಮಧ್ವ, ಯಕ್ಷಾವಾಸ್ಯಂ ಸದಸ್ಯರಾದ ಸುಮನಾ ಯಳಚಿತ್ತಾಯ, ಪೋಷಕರಾದ ರತ್ನಾ ತುಕಾರಾಮ ಗೌಡ ಉಪಸ್ಥಿತರಿದ್ದರು.

    Continue Reading

    BANTWAL

    ವಿಟ್ಲ: ಬಾಡಿಗೆಗೆಂದು ಹೋದ ಅಟೋ ಚಾಲಕ ನಾಪತ್ತೆ

    Published

    on

    ವಿಟ್ಲ: ಬಾಡಿಗೆಗೆಂದು ಹೋದ ಆಟೋ ಚಾಲಕ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್‌ ನಾಪತ್ತೆಯಾದವರು. ಆತನ ಆಟೋ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ನವೆಂಬರ್‌ 28 ರಂದು ಅವರು ಬಾಯಿಲದ ತನ್ನ ಮನೆಯಿಂದ ಅಟೋ ರಿಕ್ಷಾವನ್ನು ತೆಗೆದುಕೊಂಡು ಬೆಳಗ್ಗೆ ಹೊರಟಿದ್ದು, ವಾರ ಕಳೆದರೂ ಮನೆಗೆ ವಾಪಸ್‌ ಬಂದಿಲ್ಲ.

    ಈ ಬಗ್ಗೆ ಸಂಬಂದಿಕರಲ್ಲಿ ,ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಹುಡುಕಾಡಿದಾಗ ಧನರಾಜ್‌ನ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು ಆತನ ಮೊಬೈಲ್‌ ಸ್ವೀಚ್‌ ಆಫ್‌ ಬರುತ್ತಿದೆ. ಹಾಗಾಗಿ ಆತನನ್ನು ಪತ್ತೆ ಹಚ್ಚಿ ಕೊಡುವಂತೆ ಮನೆಯವರು ಠಾಣೆಗೆ ನೀಡಿದ ದೂರಿನಲ್ಲಿ ಕೋರಿದ್ದಾರೆ.

    Continue Reading

    LATEST NEWS

    Trending