Connect with us

    BANTWAL

    ಬಂಟ್ವಾಳದಲ್ಲಿ ಮದುವೆಯ ಸ್ಪೆಷಲ್ ಇನ್ವಿಟೇಶನ್: ಆಹ್ವಾನ ಪತ್ರದ ಜತೆ ಗಿಡ ಬೆಳೆಸಲು ತರಕಾರಿ ಬೀಜದ ಪ್ಯಾಕೆಟ್‌ ಫ್ರೀ..

    Published

    on

    ಬಂಟ್ವಾಳ: ಪ್ರತಿ ಉಸಿರಿನಲ್ಲಿಯೂ ಪರಿಸರ ಸಂರಕ್ಷಣೆ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರೋರ್ವರು ಇದೀಗ ತಮ್ಮ ಪುತ್ರಿಯ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಪರಿಸರ ಪ್ರೇಮದ ಕಾಣಿಕೆ ನೀಡಿ ಸುದ್ದಿಯಾಗಿದ್ದಾರೆ.

    ರಾಜಮಣಿ ರಾಮಕುಂಜ ಅವರ ಪುತ್ರಿ ಮೇಧಾರಾಮಕುಂಜ ಅವರ ವಿವಾಹ ರಂಜನ್ ಆಚಾರ್ಯ ಅವರ ಜತೆ ಡಿಸೆಂಬರ್‌ 14 ರಂದು ಬಿಸಿ ರೋಡಿನ ಮಹಾಲಿಂಗೇಶ್ವರ ದೇವಸ್ಥಾನದ ಮಾಂಗಲ್ಯ ಮಂಟಪದಲ್ಲಿ ನಡೆಯಲಿದೆ. ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ವಿಶೇಷತೆ ಇದೆ.


    ಹೌದು. ಇದರ ಮುಖಪುಟದಲ್ಲಿ ಮದುಮಗ ಮತ್ತು ಮದುಮಗಳ ಚಿತ್ರವನ್ನು ಮಂಗಳೂರಿನ ಖ್ಯಾತ ಚಿತ್ರ ಕಲಾವಿದ ಭುವನ್ ಮಂಗಳೂರು ಅವರು ಬಿಡಿಸಿದ್ದಾರೆ.

    ಒಳಗಿನ ಪುಟದಲ್ಲಿ ಹೋಮ ಕುಂಡಲಿಯಿದೆ, ಅದರ ಜತೆಗೆ ನಿಮ್ಮಿಂದ ಗಿಡವಾಗಲಿ ಎಂಬ ಬರಹದ ಅಡಿಯಲ್ಲಿ ಬೆಂಡೆಕಾಯಿ, ಬದನೆ, ಹರಿವೆ ಹಲಸಂಡೆ ಬೀಜಗಳ ಪ್ಯಾಕೆಟ್ ಇಟ್ಟಿದ್ದಾರೆ.

    ಉದ್ದೇಶ ಇಷ್ಟೇ…ಇವರ ಕಾಗದ ಪರಿಸರವನ್ನು ಉಳಿಸುವ ಮತ್ತು ಬೆಳೆಸುವ ವಸ್ತುವಾಗಬೇಕು…ಕಾಗದ ಸಿಕ್ಕಿದ ಪ್ರತಿ ಮನೆಯಲ್ಲಿಯೂ ಗಿಡವೊಂದು ಮೊಳಕೆಯೊಡೆಯ ಬೇಕು..ಅ ಮೂಲಕ ಮನಪರಿವರ್ತನೆಯಾಗಿ ನಾವು ಪರಿಸರವನ್ನು ಉಳಿಸುವ ಪಣತೊಡ ಬೇಕು ಎಂಬುದೇ ಆಶಯವಾಗಿದೆ.

    ಆಮಂತ್ರಣ ಪತ್ರಿಕೆ ನಾಲ್ಕು ಪುಟಗಳನ್ನು ಹೊಂದಿದ್ದು, ಕೊನೆಯ ಪುಟದಲ್ಲಿ ಪರಿಸರ ಸಂರಕ್ಷಣೆಯ ಬರಹಗಳು ಗಮನ ಸೆಳೆಯುತ್ತವೆ.

    ” ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ” ಎಂಬ ತಲೆಬರಹದಡಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬೇಡಿ,ಕಸ ಎಸಯಬೇಡಿ ಹೀಗೆ ಅನೇಕ ಪರಿಸರ ಸಂರಕ್ಷಣಾ ವಿಚಾರಗಳನ್ನು ಹೊಂದಿದ ಬರಹ ಇಲ್ಲಿವೆ.


    ಇದರ ಜತೆಗೆ ಮದುವೆ ಕಾರ್ಯಕ್ರಮದ ಪೌರೋಹಿತ್ಯ ಹಾಗೂ ಪಾಕಶಾಲೆಯ ನೇತೃತ್ವ ವಹಿಸಿದವರ ಹೆಸರು ಕೂಡಾ ಉಲ್ಲೇಖಿಸಲಾಗಿದೆ. ಇಷ್ಟೇ ಅಲ್ಲದೆ ಪ್ಲಾಸ್ಟಿಕ್ ಬಳಕೆ ಮಾಡಬೇಡಿ ಎಂಬ ಮಾಹಿತಿಗಾಗಿ ಮದುವೆಗೆ ಆಗಮಿಸುವ ಸರ್ವರಿಗೂ ಬಟ್ಟೆಯ ಕೈ ಚೀಲವೊಂದನ್ನು ನೀಡಲಾಗುತ್ತದೆ.

    ಇದರಲ್ಲಿ ರಾಷ್ಟ್ರ ದೇವೋಭವ, ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ. ಶ್ರೀರಸ್ತು ಶುಭ ಮಸ್ತು ಎಂಬ ಬರಹವನ್ನು ಪ್ರಿಂಟ್ ಮಾಡಿದ್ದಾರೆ.


    ‌‌ಈ ರೀತಿಯ ವೈವಿಧ್ಯಮಯ ಹಾಗೂ ಪರಿಸರ ಸಂರಕ್ಷಣಾ ಮಾಹಿತಿಯನ್ನು ಒದಗಿಸುವ ಆಮಂತ್ರಣ ಪತ್ರಿಕೆ ಈಗ ಬಹಳಷ್ಟು ಸುದ್ದಿಯಾಗಿದೆ. ಯಾವುದೇ ಪ್ರಚಾರದ ಹುಚ್ಚಿನಲ್ಲಿ ಈ ಪ್ರಯೋಗ ಮಾಡಿಲ್ಲ. ಪರಿಸರದ ಸಂರಕ್ಷಣೆ ಈ ನಾಡಿನ ಪ್ರತಿಯೊಬ್ಬರ ಕರ್ತವ್ಯ ವಾಗಬೇಕು , ಅದಕ್ಕೆ ಪ್ರೇರಣೆ ಯಾಗಬೇಕು , ಮನಪರಿವರ್ತನೆಯಾಗಬೇಕು ಎಂಬ ನಿಟ್ಟಿನಲ್ಲಿ ಸಣ್ಣ ಪ್ರಯತ್ನ ಮಾಡಿದ್ದೇನೆ ಎನ್ನುತ್ತಾರೆ ರಾಜಮಣಿ ರಾಮಕುಂಜ.

     

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending