ಮಂಗಳೂರು/ಥೈಲ್ಯಾಂಡ್ : ಹೆರಿಗೆಯ ಸಮಯದಲ್ಲಿ ನರ್ಸ್‌ವೊಬ್ಬಳು ಮಹಿಳೆಯೋರ್ವಳ ಯೋ*ನಿಯಲ್ಲಿ ಶಸ್ತ್ರಚಿಕಿತ್ಸಾ ಸೂಜಿಯನ್ನು ಬಿಟ್ಟಿದ್ದು, ಸುಮಾರು ಎರಡು ದಶಕಗಳ ನಿರಂತರ ನೋವಿನಿಂದ ಬಳಲುತ್ತಿದ್ದ ಇದೀಗ ನೋವು ಹೆಚ್ಚಾದ ಕಾರಣ ಎಕ್ಸರೇ ತೆಗೆದಾಗ ಸೂಜಿ ಇರುವುದು ಪತ್ತೆಯಾಗಿರುವ ಘಟನೆ ಥೈಲ್ಯಾಂಡ್‌ನಲ್ಲಿ ನಡೆದಿದೆ.
ಕಳೆದ ವರ್ಷದವರೆಗೂ ಸೂಜಿ ಯೋ*ನಿಯೊಳಗೆ ಇರುವುದರ ಕುರಿತು ಮಹಿಳೆಗೆ ಯಾವುದೇ ಕಲ್ಪನೆಯೂ ಇರಲಿಲ್ಲ. ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಎಕ್ಸ್-ರೇ ಮಾಡಿದಾಗ ಆಕೆಯ ಖಾ*ಸಗಿ ಭಾಗದಲ್ಲಿ ಸೂಜಿ ಇರುವುದು ಕಂಡು ಬಂದಿದೆ. ಹೆರಿಗೆ ಸಮಯದಲ್ಲಿ 36 ವರ್ಷದ ಮಹಿಳೆ ಥಾಯ್ಲೆಡ್‌ನ ನಾರಾಥಿವಾಟ್ ಪ್ರಾಂತ್ಯದ ನಿವಾಸಿ ಪಾವೆನ್ ಫೌಂಡೇಶನ್ ಫಾರ್ ಚಿಲ್ಡ್ರನ್ ಆಂಡ್ ವುಮೆನ್ ಬಳಿ ಈ ಮಹಿಳೆ ಸಹಾಯವನ್ನು ಕೇಳಿದಾಗ ಈ ಮಾಹಿತಿ ಹೊರಬಿದ್ದಿದೆ.
’18 ವರ್ಷಗಳ ಹಿಂದೆ ಹೆರಿಗೆ ನೋವಿನ ಕಾರಣ ಅಪರೇಷನ್‌ಗೆ ಒಳಗಾಗಿದ್ದ ಮಹಿಳೆ, ಮಗು ಜನಿಸಿದ ಮೇಲೆ ಹೊಲಿಗೆ ಹಾಕುವ ವೇಳೆ ನರ್ಸ್ ಸೂಜಿಯನ್ನು ಯೋ*ನಿಯೆಲ್ಲಿಯೇ ಬಿಟ್ಟಿದ್ದಳು. ನಂತರ ವೈದ್ಯರು ತಮ್ಮ ಬೆರಳುಗಳ ಮೂಲಕ ಸೂಜಿಯನ್ನು ಹೊರತೆಗೆಯುವ ಪ್ರಯತ್ನ ಪಟ್ಟರೂ ಅದು ಹೊರಬಂದಿರಲಿಲ್ಲ. ಆಮೇಲೆ ಅತಿಯಾದ ರಕ್ತಸ್ರಾವ ಉಂಟಾಗಿ, ಸೂಜಿಯು ಯೋ*ನಿಯೊಳಗೆ ಉಳಿದಿದ್ದು, ವೈದ್ಯರು ತಮ್ಮ ಕೆಲಸ ಅಲ್ಲಿಗೇ ಮುಗಿಸಿದರು’ ಎಂದು ಮಹಿಳೆ ನೆನಪು ಮಾಡಿ ಹೇಳಿದ್ದಾರೆ.
ಅಂದಿನಿಂದ ಇಲ್ಲಿಯವರೆಗೆ ಮಹಿಳೆಗೆ ಆಗಾಗ ತೀವ್ರವಾದ ಕೆಳಹೊಟ್ಟೆ ನೋವು ಉಂಟಾಗುತ್ತಿತ್ತು. ಇದೀಗ ಸೂಜಿಯನ್ನು ಹೊರತೆಗೆಯಲು ಮಹಿಳೆಗೆ ಇನ್ನೊಂದು ಸರ್ಜರಿ ಮಾಡಬೇಕು. ಆದರೆ ದೇಹದಲ್ಲಿ ಸೂಜಿ ಅತ್ತಿತ್ತ ಹೋಗುತ್ತಿದ್ದ ಕಾರಣ ಸರ್ಜರಿ ವಿಳಂಬವಾಗಿದೆ ಎನ್ನಲಾಗಿದೆ.
ಮಹಿಳೆ ತಿಂಗಳಿಗೆ ನಾಲ್ಕು ಬಾರಿ ಆಸ್ಪತ್ರೆಗೆ ಹೋಗಬೇಕಾಗುತ್ತದೆ. ವೈದ್ಯಕೀಯ ವಿಮೆಯು ಆಕೆಯ ಹೆಚ್ಚಿನ ಚಿಕಿತ್ಸೆಯನ್ನು ಒಳಗೊಂಡಿರುತ್ತದೆಯಾದರೂ, ಸಾರಿಗೆ ವೆಚ್ಚಗಳು ಆರ್ಥಕವಾಗಿ ಆಕೆಯ ಮೇಲೆ ಹೊರೆಯಾಗಿದೆ. ಇನ್ನು ಸೂಜಿಯನ್ನು ಯಾವಾಗ ಹೊರತೆಗೆಯಲಾಗುತ್ತದೆ ಎನ್ನುವುದು ಇನ್ನು ಕೂಡಾ ನಿಶ್ಚಯವಾಗಿಲ್ಲ. ಈ ಕುರಿತು ಆಸ್ಪತ್ರೆ ಯಾವುದೇ ಪ್ರತಿಕ್ರಿಯೆಯೂ ನೀಡದ ಕಾರಣ, ಕಾನೂನು ಕ್ರಮ, ಪರಿಹಾರವೇನಾದರೂ ದೊರಕುತ್ತದೆಯೇ ಎಂಬುವುದೂ ತಿಳಿಯದೆ ಕುಟುಂಬ ಕಂಗಲಾಗಿದೆ.