Home ಪ್ರಮುಖ ಸುದ್ದಿ ಆರೋಪಿ ಹಿಡಿಯಲು ಹೋಗಿ ಕಾಲು ಮುರಿದ ಪೊಲೀಸ್‌ ಸಿಬಂದಿಯನ್ನು ವಿಚಾರಿಸಿದ ಬಂಟ್ವಾಳ ಶಾಸಕರು

ಆರೋಪಿ ಹಿಡಿಯಲು ಹೋಗಿ ಕಾಲು ಮುರಿದ ಪೊಲೀಸ್‌ ಸಿಬಂದಿಯನ್ನು ವಿಚಾರಿಸಿದ ಬಂಟ್ವಾಳ ಶಾಸಕರು

ಆರೋಪಿ ಹಿಡಿಯಲು ಹೋಗಿ ಕಾಲು ಮುರಿದ ಪೊಲೀಸ್‌ ಸಿಬಂದಿಯನ್ನು ವಿಚಾರಿಸಿದ ಬಂಟ್ವಾಳ ಶಾಸಕರು

ಬಂಟ್ವಾಳ, ಜನವರಿ 18 : ಆರೋಪಿಯನ್ನು ಹಿಡಿಯಲು ಹೋಗಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ಸಿಬ್ಬಂದಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ವಾರೆಂಟ್ ಆರೋಪಿ‌ ಬಂಧನಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ಮಹೇಂದ್ರ ಎಂಬವರನ್ನು  ಆರೋಪಿಯು ದೂಡಿದ ಪರಿಣಾಮ  ಪಾದ ಮುರಿತಕ್ಕೊಳಗಾಗಿ ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಾಗಿದ್ದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹೇಂದ್ರ ಅವರನ್ನು ಬಂಟ್ವಾಳ ಶಾಸಕ ಅವರು ಆಸ್ಪತ್ರೆಗೆ ಬೇಟಿ ನೀಡಿ ಘಟನೆಯ ವಿವರ ಪಡೆದುದಲ್ಲದೆ, ಆರೋಗ್ಯ ವಿಚಾರಿಸಿದರು.

ಜೊತೆಗೆ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ವಿವರ ಪಡೆದರು. ಮಹೇಂದ್ರ ಅವರು ಶೀಘ್ರವಾಗಿ ಗುಣಮುಖವಾಗಿ ಕರ್ತವ್ಯ ಕ್ಕೆ ಹಾಜರಾಗುವಂತೆಯೂ ಹಾರೈಸಿದರು. 2015 ರಲ್ಲಿ ಕೊಲೆಯತ್ನ ಪ್ರಕರಣ ವೊಂದರ ಆರೋಪಿ ಪರಂಗಿಪೇಟೆ ಕುಂಪಣಮಜಲು ನಿವಾಸಿ ನವಾಜ್ ಎಂಬ ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ದೂಡಿದ ಹಿನ್ನೆಲೆಯಲ್ಲಿ ಪಾದ ಮುರಿದಿತ್ತು. ಅ ಬಳಿಕ ಅತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎನ್ನಲಾಗಿದೆ.

ವಿಡಿಯೋಗಾಗಿ..

 

 

 

 

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...