BANTWAL
ಬಂಟ್ವಾಳ: ರಸ್ತೆ ಅತಿಕ್ರಮಿಸಿ ಮಾಡಿದ ಶೆಡ್, ಅಂಗಡಿಗಳ ತೆರವಿಗೆ ಒಂದು ವಾರ ಗಡವು ನೀಡಿದ ಪುರಸಭಾ ಅಧಿಕಾರಿಗಳು
Published
2 years agoon
By
Adminಬಂಟ್ವಾಳ: ರಸ್ತೆ ಅತಿಕ್ರಮಣ ಮಾಡಿದ ಅಂಗಡಿ ಶೆಡ್, ಅನಧಿಕೃತ ಗೂಡಂಗಡಿಗಳನ್ನು ವಾರದೊಳಗೆ ತೆರವುಮಾಡಿ ಇಲ್ಲದಿದ್ದರೆ ಬುಲ್ಡೋಜರ್ ಮಾದರಿಯನ್ನು ಇಲ್ಲೂ ಅನುಸರಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪುರಸಭಾ ಅಧಿಕಾರಿಗಳು ಮೌಖಿಕವಾಗಿ ಅಂಗಡಿ ಮಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.
ಗುರುವಾರದಂದು ಪುರಸಭಾ ಇಲಾಖೆಯ ಅಧಿಕಾರಿಗಳು ಕೈಕುಂಜೆ ರಸ್ತೆಯಲ್ಲಿ ಇರುವ ಗೂಡಂಗಡಿ ಮಾಲಕರಿಗೆ ಹಾಗೂ ರಸ್ತೆಯನ್ನು ಅತಿಕ್ರಮಣ ಮಾಡಿ ವ್ಯಾಪಾರ ಮಾಡುತ್ತಿರುವ ಅಂಗಡಿ ಮಾಲಕರಿಗೆ ಈ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.
ವಾರದೊಳಗಾಗಿ ಎಲ್ಲಾ ಅತಿಕ್ರಮಣ ಮಾಡಿ ವ್ಯಾಪಾರ ವಹಿವಾಟು ನಡೆಸುವುದನ್ನು ನಿಲ್ಲಿಸಿ ಅಂಗಡಿ ಮುಂಭಾಗದಲ್ಲಿ ಹಾಕಿರುವ ಶೀಟ್ ಗಳನ್ನು ತೆರವು ಮಾಡಬೇಕು, ಹಾಗೂ ರಸ್ತೆ ಬದಿಯಲ್ಲಿ ಅನಧಿಕೃತ ವಾಗಿ ಕಾರ್ಯಚರಿಸುತ್ತಿರುವ ಗೂಡಂಗಡಿಗಳನ್ನು ತೆರವುಮಾಡಿ ಎಂದು ಮೌಖಿಕವಾಗಿ ತಿಳಿಸಿಹೋಗಿದ್ದು, ಇಲ್ಲದಿದ್ದರೆ ಬುಲ್ಡೋಜರ್ ಮೂಲಕ ತೆರವುಮಾಡುವ ಪ್ರಕ್ರಿಯೆ ನಡೆಯಲಿದೆ ಎಂಬ ಮಾತನ್ನು ಹೇಳಿ ಹೋಗಿದ್ದಾರೆ ಎಂದು ಅಂಗಡಿ ಮಾಲಕರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅಂಗಡಿ ಮಾಲಕರು ಹಾಗೂ ಪುರಸಭಾ ಇಲಾಖೆಯ ಅಧಿಕಾರಿಗಳ ಜೊತೆ ವಾಗ್ವಾದ ಕೂಡ ನಡೆದಿದೆ ಎನ್ನಲಾಗಿದ್ದು, ಕೈಕಂಬ, ಗೂಡಿನ ಬಳಿ, ಪಾಣೆಮಂಗಳೂರು, ಬಂಟ್ವಾಳ ,ಮೆಲ್ಕಾರ್ ಹಾಗೂ ಇತರ ಕಡೆಗಳಲ್ಲಿ ಅತಿಕ್ರಮಣ ಮಾಡಲಾಗಿರುವ ಅಂಗಡಿಗಳನ್ನು ಹಾಗೂ ಅಕ್ರಮ ಗೂಡಂಗಡಿಗಳನ್ನು ಮೊದಲು ತೆರವು ಮಾಡಿ, ಅ ಬಳಿಕ ನಾವು ತೆಗೆಯುತ್ತೇವೆ ಎಂದು ಜೋರಾಗಿ ಹೇಳಿದ್ದಾರೆ ಎಂದು ಹೇಳಲಾಗಿದೆ.
ಅ ಬಳಿಕ ಕೈಕಂಬಕ್ಕೆ ತೆರಳಿದ ಪುರಸಭಾ ಇಲಾಖೆಯ ಅಧಿಕಾರಿಗಳು ಅಲ್ಲಿ ರಸ್ತೆ ಅತಿಕ್ರಮಣ ಮಾಡಿ ವ್ಯಾಪಾರ ಮಾಡುವ ಅಂಗಡಿ ಮಾಲಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ತೆರವು ಮಾಡುವಂತೆ ಅದೇಶ ಮಾಡಿದ್ದಾರೆ. ವಾರದ ಹಿಂದೆ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ಬೀದಿ ವ್ಯಾಪಾರ ಹಾಗೂ ರಸ್ತೆ ಅತಿಕ್ರಮಣ ಮಾಡಿದ ಅಂಗಡಿಗಳನ್ನು ತೆರವು ಮಾಡಲು ಕ್ರಮಕೈಗೊಳ್ಳಿ ಎಂದು ಸದಸ್ಯರು ಒತ್ತಾಯ ಮಾಡಿದ್ದರು.
ಆದರೆ ಈ ವಿಚಾರ ಅನೇಕ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತ್ತು ವಿನ: ಕಾರ್ಯರೂಪಕ್ಕೆ ತರಲು ಸಾಧ್ಯವಾಗಿರಲಿಲ್ಲ. ಪುರಸಭಾ ಇಲಾಖೆಯಿಂದ ಸರಕಾರದ ಅದೇಶದಂತೆ ಬೀದಿಬದಿ ವ್ಯಾಪಾರಕ್ಕೆ ಸಾಲ ಹಾಗೂ ಇಲಾಖೆಯಿಂದ ಅಧಿಕೃತ ಕಾರ್ಡ್ ನೀಡಲಾಗಿದೆ. ಹಾಗಾಗಿ ಪುರಸಭೆ ಅಧಿಕೃತವಾಗಿ ವ್ಯಾಪಾರ ಮಾಡಲು ಅವಕಾಶ ನೀಡಿದ ಮೇಲೆ ಅವರನ್ನು ಅನಧಿಕೃತ ಅಂಗಡಿಗಳು ಎಂದು ತೆರವು ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದ್ದರು.
ಅವರಿಗೆ ಪುರಸಭೆಯಿಂದ ನೀಡಲಾಗಿರುವ ಕಾರ್ಡ್ ನ್ನು ಕ್ಯಾನ್ಸಲ್ ಮಾಡಿದರೆ ಅಂತಹ ಗೂಡಂಗಡಿಗಳನ್ನು ತೆರವು ಮಾಡಬಹುದು ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಅದಾದ ಬಳಿಕ ಆಧಿಕಾರಿಗಳು ಇಲಾಖೆಯ ಸಿಬ್ಬಂದಿಗಳನ್ನು ಕಳುಹಿಸಿ ಅಂಗಡಿ ಮಾಲಕರಿಗೆ ಮೌಖಿಕ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದಾರೆ ಎಂದು ಅಂಗಡಿ ಮಾಲಕರು ಆರೋಪ ಮಾಡಿದ್ದಾರೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ಹೃದಯ ಭಾಗದಲ್ಲಿ ಅಂದರೆ ಬಸ್ ನಿಲ್ದಾಣದ ಬಳಿ ಇರುವ ಪ್ಲೈ ಓವರ್ ನ ಅಡಿಭಾಗದ ಇಂಟರ್ ಲಾಕ್ ಅಳವಡಿಸಿದ ಜಾಗದಲ್ಲಿ ಅನಧಿಕೃತ ವಾರದ ಸಂತೆ ಅಧಿತ್ಯವಾರ ನಡೆದರೆ ಉಳಿದ ದಿನಗಳಲ್ಲಿ ಬೀದಿಬದಿಯ ಬೇರೆ ಬೇರೆ ವ್ಯಾಪಾರಗಳು ನಡೆಯುವುದು ಮುಂದುವರಿದಿದೆ.
ಬೀದಿ ಬದಿ ವ್ಯಾಪಾರದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
BANTWAL
ಬಂಟ್ವಾಳ : ತುಳುನಾಡಿನ ಅಳಿಯ ಕಟ್ಟಿನ ಸಂಪ್ರದಾಯದಂತೆ ವಧುವನ್ನು ವರಿಸಿದ ಪಂಜಾಬಿ ವರ
Published
11 hours agoon
03/12/2024By
NEWS DESK2ಬಂಟ್ವಾಳ: ತುಳುನಾಡಿನ ವಧುವನ್ನು ಪಂಜಾಬಿಯ ವರನಿಗೆ ಕನ್ಯಾದಾನ ಮಾಡಿದ ಅಪರೂಪದ ಪ್ರಸಂಗವೊಂದು ಇತ್ತೀಚೆಗೆ ನಡೆಯಿತು. ತುಳುನಾಡಿನಲ್ಲಿ ನಡೆಯುವ ಅಳಿಯ ಕಟ್ಟಿನ ಮದುವೆಯನ್ನು ಪಂಜಾಬ್ ರಾಜ್ಯದ ಕುಟುಂಬವೊಂದು ಅಪ್ಪಿಕೊಂಡು ಒಪ್ಪಿಕೊಂಡಿರುವುದು ನಿಜಕ್ಕೂ ತುಳುನಾಡಿಗೆ ಹೆಮ್ಮೆ. ಬಡಗಬೆಳ್ಳೂರು ಗ್ರಾಮದ ಪರಿಮೊಗರು ನಿವಾಸಿ ಪ್ರಕಾಶ್ ಶೆಟ್ಟಿ ಅವರ ಪ್ರಥಮ ಪುತ್ರಿ ಪುಣ್ಯ ಅವರ ವಿವಾಹವು ಪಂಜಾಬ್ ರಾಜ್ಯದ ಸಂಜೀವ ಶರ್ಮ ಎಂಬವರ ಮಗ ಉತ್ಕರ್ಷ ಅವರ ಜೊತೆ ನ.27 ರಂದು ಪಂಜಾಬ್ ಲುದಿನಾದ ಅಂಬ್ರೋಸಿಯಾ ಗ್ರ್ಯಾಂಡ್ ರೆಸಾರ್ಟ್ ನಲ್ಲಿ ಸಂಭ್ರಮದಿಂದ ನಡೆಯಿತು.
ಉನ್ನತ ವಿದ್ಯಾಭ್ಯಾಸ ಉದ್ದೇಶದಿಂದ ಅಮೇರಿಕಾದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವೇಳೆ ಪರಿಚಯವಾದ ಇವರಿಬ್ಬರ ಸ್ನೇಹ ಮುಂದೆ ಸಾಗಿ ಮದುವೆ ಎಂಬ ಮೂರಕ್ಷರದ ಗಂಟು ಕಟ್ಟುವರೆಗೂ ತಲುಪಿತು. ಅಮೇರಿಕಾದ ವರನಿಗೆ ಅಥವಾ ವಧುವಿಗೆ ತುಳುನಾಡಿನ ವರ ಅಥವಾ ವಧು ಎಂಬ ಸಂಬಂಧಗಳು ಅನೇಕ ನಡೆದಿವೆ. ಅದು ದೊಡ್ಡ ಸಂಗತಿಯಾಗದೆ ಇರಬಹುದು. ಆದರೆ ಹೊರರಾಜ್ಯವಾದ ಪಂಜಾಬ್ ನ ವರ ಬಂಟ್ವಾಳದ ಬಂಟ ಸಮುದಾಯದ ವಧುವನ್ನು ತುಳುನಾಡಿನ ಅಳಿಯ ಕಟ್ಟು ಪ್ರಕಾರದ ಮದುವೆ ಮೂಲಕ ವರಿಸಿದ್ದಾನೆ ಎಂಬುದು ಉಲ್ಲೇಖನೀಯ ಅಂಶವಾಗಿದೆ.
ಅತ್ಯಂತ ಪುರಾತನವಾದ ತುಳುನಾಡಿನ ಅಳಿಯ ಕಟ್ಟಿನ ಸಂಪ್ರದಾಯ ಬದ್ದವಾದ ಮದುವೆಗೆ ಸಾಕ್ಷಿಯಾಗಿ, ಭೂಮಿ ಸಾಕ್ಷಿಯಾದ ಮದುವೆಯನ್ನು ಪಿ.ಕಿಶೋರ್ ಭಂಡಾರಿ ಬಡಗಬೆಳ್ಳೂರು ಇವರ ಮಾರ್ಗದರ್ಶನದಲ್ಲಿ ಮಂಗಳೂರಿನ ರಾಕೇಶ್ ಸಾಲಿಯಾನ್ ಪಚ್ಚನಾಡಿ ಅವರು ನೆರವೇರಸಿಕೊಟ್ಟರು.
BANTWAL
ನಾಲ್ಕು ಪತ್ನಿಯರಿಗೆ ಕೈಕೊಟ್ಟು ಐದನೇ ಮದುವೆಗೆ ಸಜ್ಜಾಗುತ್ತಿದ್ದ ರಸಿಕ ಅರೆಸ್ಟ್ !!
Published
5 days agoon
29/11/2024ಬಂಟ್ವಾಳ: ನಾಲ್ಕು ಮದುವೆಯಾಗಿ, ಐದನೇ ಮದುವೆಗೆ ತಯಾರಾಗುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹ*ಲ್ಲೆ ನಡೆಸಿ ಮನೆಯಿಂದ ಹೊರದಹಾಕಿದ್ದ ರಾ*ಕ್ಷಸೀಯ ಕೃ*ತ್ಯವೊಂದು ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ಬುಧವಾರ (ನ.27) ರಾತ್ರಿ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಪತ್ನಿ ನೀಡಿರುವ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದನ್ನೇ ಕಸುಬಾಗಿಸಿಕೊಂಡ ನಟೋರಿಯಸ್ ಬಹುಪತ್ನಿ ವಲ್ಲಭನನ್ನು ಮಾಣಿ ರಫೀಕ್ ಯಾನೆ ಮಹಮ್ಮದ್ ರಫೀಕ್(42)ನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ. ಆರೋಪಿ ಮಾಣಿ ರಫೀಕ್ ಈಗಾಗಲೇ ನಾಲ್ಕು ಮದುವೆಯಾಗಿದ್ದು, ಒಂದೆರಡು ವರ್ಷ ಜೊತೆಯಾಗಿ ಜೀವನ ಮಾಡಿ ಮಕ್ಕಳನ್ನು ಕರುಣಿಸಿದ ಬಳಿಕ ವಿಚ್ಚೇದನ ನೀಡಿ ಪರಾರಿಯಾಗುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
ನಾಲ್ಕನೇ ಪತ್ನಿಯಿಂದ ದೂರು ದಾಖಲು :
‘ನಿನ್ನೆ ( ನ.26) ಸಂಜೆ ಐದು ಗಂಟೆ ಸುಮಾರಿಗೆ ರಫೀಕ್ ನ ಮನೆಗೆ ನಾನು ಹೋಗಿದ್ದೇನೆ. ಹೋದಂತ ಸಂದರ್ಭದಲ್ಲಿ ಆರೋಪಿಯಾದ ರಫೀಕ್ ಅ*ವಾಚ್ಯ ಶಬ್ದಗಳಿಂದ ಬೈದು, ಹ*ಲ್ಲೆ ನಡೆಸಿದ್ದಲ್ಲದೇ ಮಗುವನ್ನು ಕೊಂ*ದು ಹಾಕುತ್ತೇನೆಂದು ಬೆದರಿಕೆ ಹಾಕಿದ್ದಲ್ಲದೇ, ತಾಯಿಯ ಮಡಿಲಲ್ಲಿದ್ದ ಮಗುವನ್ನು ಎಳೆದು ಎಸೆಯಲು ಮುಂದಿಗಿದ್ದಾನೆ’ ಎಂದು ಸಂತ್ರಸ್ತ ಪತ್ನಿ ಆರೋಪಿಸಿದ್ದಾಳೆ. ಅಲ್ಲದೇ ತ್ರಿವಳಿ ತಲಾಖ್ ಎಂದು ಹೇಳಿ ಕುತ್ತಿಗೆಗೆ ಕೈಹಾಕಿ ಮನೆಯಿಂದ ಹೊರಗೆ ದಬ್ಬಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾಳೆ. ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನೂ ಕಿತ್ತುಕೊಂಡಿರುವ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ.
ಮಾಣಿ ರಫೀಕ್ ಯಾರು ? ಹಿನ್ನಲೆ ಏನು ?
ಮಾಣಿ ರಫೀಕ್ ಯಾನೆ ನಟೋರಿಯಸ್ ಕಿರಾತಕ. ಮಾಣಿಯಿಂದ ವಲಸೆ ಬಂದ ರಫೀಕ್ ವಿಟ್ಲ ಸಮೀಪದ ಮಂಗಲಪದವು ಎಂಬಲ್ಲಿ ಮನೆ ಕಟ್ಟಿಕೊಂಡಿದ್ದ. ಅಲ್ಲಿಯೂ ನೆರೆಹೊರೆಯವರ ಜೊತೆ ಗಲಾಟೆ, ಗದ್ದಲ ಎಬ್ಬಿಸಿ ಕೊನೆಗೆ ಮನೆ ಮಾರಾಟ ಮಾಡಿ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಲ್ಲೂ ಕೂಡಾ ಪರಿಸರದ ಶಾಂತಿಪ್ರಿಯ ನಿವಾಸಿಗಳ ಜೊತೆ ತಕರಾರು ಎಬ್ಬಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಜನ್ಮ ನೀಡಿದ ತಾಯಿಯ ಮೇಲೆಯೇ ಮನಬಂದಂತೆ ಹ*ಲ್ಲೆ ನಡೆಸಿ ಆಕೆಯ ಚಿನ್ನಾಭರಣ ಕಿತ್ತು ಕಾಲಿನಿಂದ ತುಳಿದು ಮನೆಯಿಂದ ಹೊರದಬ್ಬಿ ರಾ*ಕ್ಷಸೀಯ ಕೃ*ತ್ಯ ನಡೆಸಿದ್ದ. ಈತನ ಹ*ಲ್ಲೆ, ಕಿರುಕುಳದಿಂದ ಮನನೊಂದ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಲ್ಲದೇ ಠಾಣೆಯಲ್ಲೂ ಹೆತ್ತ ತಾಯಿಯ ಮೇಲೆ ಮನಬಂದಂತೆ ಅ*ವಾಚ್ಯ ಶಬ್ದಗಳಿಂದ ನಿಂದಿಸಿ ರಾ*ಕ್ಷಸೀ ಕೃ*ತ್ಯ ನಡೆಸಿರುವುದು ಪ್ರತಿಯೊಬ್ಬನಿಗೂ ತಿಳಿದ ವಿಚಾರವಾಗಿದೆ. ಅದಾದ ಬಳಿಕ ಅನಾರೋಗ್ಯದಿಂದ ಮೃ*ತಪಟ್ಟ ಮೊದಲ ಪತ್ನಿಯ ಹಿರಿಮಗಳ ಮೇಲೆ ಹ*ಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾನೆ. ಇದೀಗ ಆಕೆಯೂ ತನ್ನ ಅಜ್ಜಿ ಜೊತೆ ಮಂಗಲಪದವು ಬಳಿ ಬಾಡಿಗೆ ಮನೆಯಲ್ಲಿದ್ದಾರೆ।
ಇದೀಗ ನಾಲ್ಕನೇ ಪತ್ನಿಯ ಚಿನ್ನಾಭರಣವನ್ನೆಲ್ಲಾ ಕಿತ್ತುಕೊಂಡು ಬಳಿಕ ಆಕೆಯ ಮಗುವಿನ ಮೇಲೆ ಹ*ಲ್ಲೆ ನಡೆಸಿ ಹೊರದಬ್ಬಿದ್ದ ಕಿರಾತಕನ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಸೆಕ್ಷನ್ BNS/-85,86,352,351(1),115(2) ರಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಮೃ*ತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ.
ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ.ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃ*ತಪಟ್ಟ ಯುವತಿ ಎನ್ನಲಾಗಿದೆ.
ಮೃ*ತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
LATEST NEWS
ಚುನಾವಣಾ ಬಾಂಡ್ ಅಕ್ರಮ : ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ಗೆ ರಿಲೀಫ್
ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು !
ದೇಶದ ಅತಿ ಕಿರಿಯ, ಕರ್ನಾಟಕ ಮೂಲದ ಈ ಪೈಲಟ್ ಯಾರು ಗೊತ್ತಾ ??
ಡಿ.7 ರಂದು ಕುಡುಪು ಕ್ಷೇತ್ರದಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ
ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್ನ ಖ್ಯಾತ ನಟಿಯ ತಂಗಿ ಅರೆಸ್ಟ್
ಸ್ಟೇಟಸ್ನಲ್ಲಿ ಫೋಟೋ ಹಾಕಿದ ಮಾಜಿ ಪ್ರಿಯಕರ; ಆ*ತ್ಮಹತ್ಯೆಗೆ ಶರಣಾದ ವಿವಾಹಿತೆ!
Trending
- BANTWAL5 days ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- FILM4 days ago
ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ
- Ancient Mangaluru6 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
- LATEST NEWS6 days ago
ನಾನ್ ವೆಜ್ ತಿನ್ನಬೇಡ ಎಂದ ಪ್ರಿಯತಮ: ಆ*ತ್ಮಹತ್ಯೆಗೆ ಶರಣಾದ ಏರ್ ಇಂಡಿಯಾ ಪೈಲಟ್ !