Connect with us

BANTWAL

ವಿರೋಧ ಪಕ್ಷದ ಸದಸ್ಯರು ಇಲ್ಲದೆಯೇ ನಡೆದ ಬಂಟ್ವಾಳ ಪುರಸಭೆ ಕಾರ್ಯಕಲಾಪ..

Published

on

ಬಂಟ್ವಾಳ: ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಅವರು ಕಚೇರಿಗೆ ಬಂದರೆ ಕುಳಿತುಕೊಳ್ಳಲು ಖುರ್ಚಿ ಕೊಡಬಾರದು ಎಂದು ಪುರಸಭಾ ಮುಖ್ಯಾಧಿಕಾರಿ ಸ್ವಾಮಿ ಅವರು ಹೇಳಿದ ಪ್ರಕರಣಕ್ಕೆ ಆಡಳಿತ ಪಕ್ಷ ಮತ್ತು ಅಧ್ಯಕ್ಷರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಬಿಜೆಪಿ ಸದಸ್ಯರು ಪುರಸಭೆಯ ಸಾಮಾನ್ಯ ಸಭೆಗೆ ಹಾಜರಾಗದೆ ಹೊರಗಡೆ ನಿಂತುಕೊಂಡ ಘಟನೆ ಇಂದು ನಡೆಯಿತು.


ಇನ್ನೊಂದೆಡೆ ವಿರೋಧ ಪಕ್ಷದ ಸದಸ್ಯರು ಇಲ್ಲದೆಯೇ ಸಭೆ ಆರಂಭವಾಗಿತ್ತು. ಸದಸ್ಯ ಗಂಗಾಧರ ಪೂಜಾರಿ ಅವರು ಬಳಿಕ ವಿರೋಧ ಪಕ್ಷದ ಸದಸ್ಯರು ಯಾಕೆ ಇಲ್ಲ ? ಎಂದು ಪ್ರಶ್ನಿಸಿದರು.


ವಿರೋಧ ಪಕ್ಷದ ಸದಸ್ಯರು ಯಾಕೆ ಬಂದಿಲ್ಲ ಅವರ ಸಮಸ್ಯೆ ಏನು? ಎಂದು ಜನಾರ್ದನ ಚೆಂಡ್ತಿಮಾರ್ ಪ್ರಶ್ನಿಸಿದರು. ಸಭೆಯ ನೋಟೀಸ್ ನೀಡಿದ್ದೇವೆ ಸಭೆಗೆ ಹಾಜರಾಗದ ವಿಚಾರ ನಮಗೆ ಗೊತ್ತಿಲ್ಲ ಎಂದು ಪುರಸಭಾ ಅಧ್ಯಕ್ಷ ಸಭೆಗೆ ಸ್ಪಷ್ಟನೆ ನೀಡಿದರು.

ಬಳಿಕ ಸದಸ್ಯರ ಒತ್ತಾಯದ ಮೇರೆಗೆ ಅಧ್ಯಕ್ಷರು ಸದಸ್ಯರು ಹಾಗೂ ಮುಖ್ಯಾಧಿಕಾರಿ ಅವರು ಹೊರಗೆ ನಿಂತುಕೊಂಡಿದ್ದ ಬಿಜೆಪಿ ಸದಸ್ಯರ ಮನವೊಲಿಸಿ ಸಭೆಗೆ ಕರೆತತಲು ಶತಪ್ರಯತ್ನ ಮಾಡಿದರು.


ಸುಮಾರು ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಮನವೊಲಿಸಲು ಪ್ರಯತ್ನಿಸಿದ ಹಿರಿಯ ಕಾಂಗ್ರೇಸ್ ಸದಸ್ಯ ಜನಾರ್ದನ ಚೆಂಡ್ತಿಮಾರ್ ಸಭೆಗೆ ಕರೆತರಲು ಯಶಸ್ವಿಯಾದರು.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending