Connect with us

    BANTWAL

    ಕಸ ಹಾಕಿಸಿದವನಿಂದಲೇ ರೂ. 5 ಸಾವಿರ ಕಕ್ಕಿಸಿದ ಬಂಟ್ವಾಳ ಅಮ್ಟಾಡಿ ಪಿಡಿಓ

    Published

    on

    ಬಂಟ್ವಾಳ: ಗ್ರಾಮ ಪಂಚಾಯತ್‌ವೊಂದರ ತ್ಯಾಜ್ಯವನ್ನು ಇನ್ನೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಂಪ್ ಮಾಡಿ ಪರಾರಿಯಾದ ಗುತ್ತಿಗೆದಾರನಿಂದಲೇ ತ್ಯಾಜ್ಯ ವಾಪಾಸು ತೆಗೆಸಿದ ಪಿಡಿಒ ದಂಡ ವಿಧಿಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ಕುರಿಯಾಳ ಪಡು ಎಂಬಲ್ಲಿ ನಡೆದಿದೆ.


    ನಿನ್ನೆ ರಾತ್ರಿ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ಕುರಿಯಾಳ ಪಡು ರಸ್ತೆ ಬದಿಯಲ್ಲಿ ರಾಶಿ ಗಟ್ಟಲೆ ಕಸವನ್ನು ವಾಹನದಲ್ಲಿ ಬಂದು ಎಸೆದು ಹೋದ ಬಗ್ಗೆ ಗ್ರಾ.ಪಂ.ಗೆ ಸ್ಥಳೀಯರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಮಾಹಿತಿ ‌ಕಲೆಹಾಕಲು ಗ್ರಾ.ಪಂ.ಪಿ.ಡಿ.ಒ.ರವಿ ಮುಂದಾದರು.

    ಈ ವೇಳೆ ಯಾವುದೇ ಸುಳಿವು ಸಿಗದೇ ಇದ್ದಾಗ ಗ್ರಾ.ಪಂ.ನ ಬಿಲ್ ಕಲೆಕ್ಟರ್ ಚೇತನ್ ಎಂಬವರು ತ್ಯಾಜ್ಯ ದಲ್ಲಿ ಯಾವುದಾದರೂ ಸುಳಿವು ಸಿಗಬಹುದು ಎಂದು ಹುಡುಕಾಟ ನಡೆಸಿದ್ದಾರೆ.

    ಹೀಗೆ ಹುಡುಕಾಡಿದಾಗ ಪರಂಗಿಪೇಟೆ ಬಾರ್ ಒಂದರ ಬಿಲ್ ಪತ್ತೆಯಾಗಿತ್ತು. ಅ ಬಿಲ್ ಆಧಾರದ ಮೇಲೆ ಮಾಹಿತಿ ಕಲೆ ಹಾಕಿದಾಗ ಅದು ಪುದು ಗ್ರಾ.ಪಂ.ನ ತ್ಯಾಜ್ಯ ಎಂದು ಖಾತ್ರಿ ಯಾಯಿತು.


    ಬಳಿಕ ಪುದು ಗ್ರಾಮಪಂಚಾಯತ್‌ ಅನ್ನು ಸಂಪರ್ಕ ಮಾಡಿ ವಿಚಾರ ತಿಳಿಸಿದಾಗ ಅವರು ಅಲ್ಲಿನ ತ್ಯಾಜ್ಯ ವಿಲೇವಾರಿಯನ್ನು ಸ್ಥಳೀಯ ವ್ಯಕ್ತಿಯೋರ್ವನಿಗೆ ಗುತ್ತಿಗೆ ನೀಡಲಾಗಿದ್ದು,

    ಆತ ಕಸವನ್ನು ವಾಹನದ ಮೂಲಕ ಇಲ್ಲಿ ಡಂಪ್ ಮಾಡಿ ಹೋಗಿರುವ ಬಗ್ಗೆ ವಿಚಾರ ತಿಳಿದ ಬಳಿಕ ಗುತ್ತಿಗೆದಾರರನ್ನು ಕರೆಯಿಸಿ ಅತನಿಂದಲೇ ಕಸವನ್ನು ತೆಗೆಸಿದ ಪಿಡಿಒ ರವಿ. ಬಿ ಹಾಗೂ ಕಾರ್ಯದರ್ಶಿ ಲಕ್ಷ್ಮಿ ನಾರಾಯ, ಆತನಿಗೆ 5000 ಸಾವಿರ ರೂ ದಂಡವನ್ನು ವಿಧಿಸಿದ್ದಾರೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending