Wednesday, October 5, 2022

ಹಿಂದೂ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ : ಮಹಮ್ಮದ್ ಅಲಿ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು..! 

ಗುರುಪುರ ನಿವಾಸಿ ರಿಕ್ಷಾ ಚಾಲಕ ಮಹಮ್ಮದ್ ಆಲಿ ಬಂಧಿತ ಆರೋಪಿಯಾಗಿದ್ದಾನೆ. ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಬ್ಯುಸಿನೆಸ್ ಮ್ಯಾನ್ ಎಂದು ಪೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಬಳಿಕ ಲೈಂಗಿಕ ಕಿರುಕುಳ ಕೊಡುತ್ತಿದ್ದ.

ಬಂಟ್ವಾಳ: ನಕಲಿ ಖಾತೆ ತೆರೆದು ಮಹಿಳೆಯರಿಗೆ ಲೈಗಿಂಕ ಕಿರುಕುಳ ಕೊಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ನೇತ್ರತ್ವದ ತಂಡ ಬಂಧಿಸಿದೆ.

ಬಜಪೆ ಗುರುಪುರ ನಿವಾಸಿ ರಿಕ್ಷಾ ಚಾಲಕ ಮಹಮ್ಮದ್ ಆಲಿ ಬಂಧಿತ ಆರೋಪಿಯಾಗಿದ್ದಾನೆ. ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಬ್ಯುಸಿನೆಸ್ ಮ್ಯಾನ್ ಎಂದು ಪೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಬಳಿಕ ಲೈಂಗಿಕ ಕಿರುಕುಳ ಕೊಡುತ್ತಿದ್ದ.

ಈ ಬಗ್ಗೆ ನಗರ ಪೋಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೋಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಹಮ್ಮದ್ ಆಲಿ ಹಿಂದೂಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಿಂದೂ ಮಹಿಳೆಯರನ್ನು ಬಲೆಗೆ ಹಾಕುತ್ತಿದ್ದ ಎಂಬ ಆರೋಪಗಳು ಇವೆ.

ಇಂತಹ ಅನೇಕ ಮಹಿಳೆಯರಿಗೆ ಈತ ಕಿರುಕುಳ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯ ಗಳು ಕೇಳಿ ಬರುತ್ತಿದೆ.
ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದು ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.

 

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...