Connect with us

BANTWAL

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ಎಚ್ಚರಿಕೆಯ ಬ್ಯಾನರ್ ಅಳವಡಿಸಿದ ಪೊಲೀಸರು

Published

on

ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆ ಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆ ಯ ಬ್ಯಾನರ್ ಅನ್ನು ಪೋಲೀಸರು ದೇವಾಲಯ ದ ಪರಿಸರದಲ್ಲಿ ಅಳವಡಿಸಿದ್ದಾರೆ.


ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇಗುಲದ ಪಾವಿತ್ರ್ಯಕ್ಕೆ ಧಕ್ಕೆ ತರುವಂತಹ ಧೂಮಪಾನ, ಮಧ್ಯಪಾನ, ಅಥವಾ ಇನ್ನಾವುದೇ ಅನೈತಿಕ ಚಟುವಟಿಕೆಗಳನ್ನು ಮಾಡಬಾರದು.

ಇಂತಹ ಚಟುವಟಿಕೆಗಳು ಪರಿಸರದಲ್ಲಿ ಕಂಡು ಬಂದಲ್ಲಿ ತುರ್ತು ಸ್ಪಂದನಾ ಸೇವೆ ನಂ.(ERSS) : 112, ಪುಂಜಾಲಕಟ್ಟೆ ಪೊಲೀಸ್‌ ಠಾಣೆ 08256-279375, 8277986411 ಈ ದೂರವಾಣಿ ಸಂಖ್ಯೆ ಗೆ ಕರೆ ಮಾಡಿ ಎಂದು ಪ್ರಕಟನೆಯ ಬ್ಯಾನರ್ ನ್ನು ಪೊಲೀಸರು ಕಾರಿಂಜ ದೇವಾಲಯದ ಪರಿಸರದಲ್ಲಿ ಹಾಕಿದ್ದಾರೆ.


ಇತ್ತೀಚಿನ ದಿನಗಳಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡಿದ ಅನೇಕ ಘಟನೆಗಳು ಮರುಕಳಿಸಿದ ಹಿನ್ನೆಲೆಯಲ್ಲಿ ಪೋಲೀಸ್ ಇಲಾಖೆ ಎಚ್ಚೆತ್ತುಕೊಂಡು ಈ ಕ್ರಮದ ಮೂಲಕ ಎಚ್ಚರಿಕೆ ನೀಡಿದೆ.

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

LATEST NEWS

Trending