ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಂಡವರ ಕಲ್ಲು ಸಮೀಪದ ಕೂದೂರು ಎಂಬಲ್ಲಿ ಗೋವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಗೋಮಾಂಸ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಪಾಂಡವರಕಲ್ಲು ನಿವಾಸಿ ಇಸ್ಮಾಯಿಲ್ ಎಂಬಾತನನ್ನು ಬಂಧಿಸಲಾಗಿದ್ದು, ಆತನ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಬೈಕ್ ಹಾಗೂ ದನದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಇಸ್ಮಾಯಿಲ್ ತನ್ನ ಮನೆ ಹಿಂಬದಿಯಲ್ಲಿರುವ ಅಕ್ರಮ ಕಟ್ಟಡದಲ್ಲಿ ಪರವಾನಗಿ ರಹಿತವಾಗಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.