Connect with us

    BANTWAL

    “ಬ್ರಹ್ಮರಕೂಟ್ಲು ಟೋಲ್‌ಗೇಟಿಗೆ ಮುಕ್ತಿ ನೀಡಿ” ಇಂದು ಸಿಎಂ ಎದುರು ಪ್ರತಿಭಟನೆಗೆ SDPI ಸಜ್ಜು..!

    Published

    on

    ಬಂಟ್ವಾಳ: ಇಂದು ಪ್ರಾಕೃತಿಕ ವಿಕೋಪದ ಪರಿಶೀಲನೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದಿಂದ ಮಂಗಳೂರಿಗೆ ಸಂಚರಿಸುವ ಮಾರ್ಗದಲ್ಲಿ “ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಿಂದ ಮುಕ್ತಿ ನೀಡಿ” ಎಂದು ಒತ್ತಾಯಿಸಿ ಎಸ್.ಡಿ.ಪಿ.ಐ.ಯಿಂದ ಟೋಲ್ ಗೇಟ್ ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.


    ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಂಪೂರ್ಣವಾಗಿ ಅವೈಜ್ಞಾನಿಕತೆಯಿಂದ ಕೂಡಿದ್ದು ಅದೊಂದು ಹಣ ಸುಲಿಗೆಯ ಕೇಂದ್ರದಂತಿದೆ. ಮಳೆಗಾಲ ಆರಂಭವಾದ ಬಳಿಕ ಟೋಲ್ ಗೇಟ್‌ನ ರಸ್ತೆಯಲ್ಲಿ ಡಾಂಬರು ಕಿತ್ತು ಹೋಗಿದ್ದು ಬೃಹತ್ ಹೊಂಡಗಳು ಬಿದ್ದಿವೆ.

    ಆದರೂ ಈವರೆಗೆ ಅದನ್ನು ದುರಸ್ತಿ ಮಾಡಿಲ್ಲ. ಒಂದು ಗೇಟ್‌ನಿಂದ ಮಾತ್ರ ವಾಹನಗಳು ಸಂಚರಿಸುತ್ತಿದೆ. ಹೊಂಡಗಳಿಂದಾಗಿ ವಾಹನಗಳ ಸಂಚಾರಕ್ಕೂ ಅಡಚಣೆಯಾಗಿದೆ. ಇಲ್ಲಿ ವಾಹನಗಳು ತಾಸುಗಟ್ಟಲೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಇದೆ. ದಿನನಿತ್ಯ ತುರ್ತು ವಾಹನಗಳು ಇಲ್ಲಿ ಸಿಲುಕಿಕೊಂಡು ಪರದಾಡುತ್ತವೆ.

    ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸುವ ವಾಹನ ಸವಾರರ ಮೇಲೆ ಟೋಲ್ ಸಿಬ್ಬಂದಿಗಳು ಸೇರಿ ಹಲ್ಲೆ ನಡೆಸುವ, ಗೂಂಡಾಗಿರಿ ಮಾಡುವ ಪ್ರಕರಣಗಳು ನಡೆಯುತ್ತಿವೆ. ಇಲ್ಲಿ ಟೋಲ್ ವಸೂಲಿಗೆ ಅಯೋಗ್ಯವಾದ ಪ್ರದೇಶವಾಗಿದೆ. ಆದರೆ ಇದರ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮೌನವಾಗಿದ್ದಾರೆ.

    ಈ ಮಾರ್ಗವಾಗಿ ಸಂಚರಿಸುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಇದನ್ನೆಲ್ಲಾ ಕಂಡರೂ ಕಾಣದಂತೆ ಇದ್ದಾರೆ. ಈ ಬಗ್ಗೆ ಅವರು ಯಾವುದೇ ಕ್ರಮವಾಗಲಿ, ಪರಿಹಾರವಾಗಿ ಮಾಡುತ್ತಿಲ್ಲ. ಈ ಟೋಲ್ ಗೇಟ್ ನಿಂದ ಜಿಲ್ಲೆಯ ಜನರು ನಿರಂತರ ಸಮಸ್ಯೆ ಎದುರಿಸುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಜಿಲ್ಲೆಯ ಜನರಿಗೆ ಮುಕ್ತಿ ನೀಡುವಂತೆ ಇಂದು ಬಂಟ್ವಾಳಕ್ಕೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಲು ಪಕ್ಷದಿಂದ ತೀರ್ಮಾನಿಸಲಾಗಿದೆ.


    ಸಂಜೆಯ ವೇಳೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಂಟ್ವಾಳದಿಂದ ಮಂಗಳೂರಿಗೆ ತೆರಳುವ ವೇಳೆ ಟೋಲ್ ಗೇಟ್ ನಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಒತ್ತಾಯಿಸಲಾಗುವುದು.

    ಪ್ರತಿಭಟನೆ ವೇಳೆ ಮುಖ್ಯಮಂತ್ರಿಗೆ ಇಲ್ಲಿನ ಅವ್ಯವಸ್ಥೆಯ ಬಗೆಗಿನ ಫೋ0ಸ್ಟರ್ ಗಳನ್ನು ಪ್ರದರ್ಶಿಸಲು ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರ ತೀರ್ಮಾನಿಸಲಾಗಿದೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending