ಬಂಟ್ವಾಳ: ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್‌ರವರನ್ನು ಕಂದಾಯ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿಯವರು ಆದೇಶ ಹೊರಡಿಸಿದ್ದಾರೆ.
ಬಂಟ್ವಾಳದಲ್ಲಿ ತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್‌ರವರನ್ನು ಮುಂದಿನ ಆದೇಶದವರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ನಿಯೋಜಿಸಿ ಆದೇಶಿಸಿದ್ದಾರೆ. ಸದ್ರಿ ಹುದ್ದೆಯಲ್ಲಿದ್ದ ಸಚಿನ್ ಕುಮಾರ್‌ರವರನ್ನು ಹಿಂ.ವ. ಇಲಾಖೆಯ ಜಿಲ್ಲಾ ಅಧಿಕಾರಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದ್ದು ಕರ್ತವ್ಯದ ಸ್ಥಳ ತೋರಿಸಿಲ್ಲ.