Connect with us

    BANTWAL

    ಬಂಟ್ವಾಳ: ತಂಡದಿಂದ ಇಬ್ಬರು ಯುವಕರಿಗೆ ಮಾರಕಾಸ್ತ್ರಗಳಿಂದ ಹಲ್ಲೆ

    Published

    on

    ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

    ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪೂರ್ವ ದ್ಚೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್ ಯಾನೆ ಮಿಚ್ಚ, ಶರ್ಫುದ್ದೀನ್, ಅಶ್ರಫ್, ರಿಝ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸಿರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಹಲ್ಲೆ ಆರೋಪಿಗಳೆಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

    ಆರೋಪಿಗಳು ತಸ್ಲೀಮ್ ಗೆ ಫೋನ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಅಮ್ಮೆಮಾರ್ ಶಾಲೆ ಬಳಿ ಬರುವಂತೆ ಸವಾಲು ಹಾಕಿದ್ದರೆನ್ನಲಾಗಿದೆ. ಅದರಂತೆ ತಸ್ಲೀಮ್ ಅಲ್ಲಿಗೆ ಶಾಕಿರ್ ಜೊತೆ ತೆರಳಿದಾಗ ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    BANTWAL

    ಬಂಟ್ವಾಳ: ಕಾಮಗಾರಿ ಯಂತ್ರ ಡಿ*ಕ್ಕಿ;ಪಾದಚಾರಿಗೆ ಗಾ*ಯ

    Published

    on

    ಬಂಟ್ವಾಳ: ಬಿ.ಸಿ.ರೋಡು – ಅಡ್ಡಹೊಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಗುತ್ತಿಗೆ ಸಂಸ್ಥೆಯ ಯಂತ್ರವೊಂದು ಡಿ*ಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಅ. 21ರಂದು ಮೆಲ್ಕಾರಿನ ಬೋಳಂಗಡಿಯಲ್ಲಿ ನಡೆದಿದೆ.

    ಬೋಳಂಗಡಿ ನಿವಾಸಿ ಪದ್ಮನಾಭ ಶೆಣೈ ಗಾ*ಯಾಳು ಎಂದು ಗುರುತಿಸಲಾಗಿದೆ.

    ಕಾಲಿಗೆ ಗಂ*ಭೀರ ಸ್ವರೂಪದ ಗಾ*ಯವಾಗಿರುವ ಗಾ*ಯಾಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

     

    ಇದನ್ನೂ ಓದಿ: ಬಂಟ್ವಾಳ : ರೈಲ್ವೇ ಹಳಿ ಬದಿ ರುಂ*ಡ – ಮುಂ*ಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃ*ತದೇಹ ಪ*ತ್ತೆ

     

    ಚಾಲಕ ರಾಜಕುಮಾರ ಯಾದವ್‌ ಯಂತ್ರವನ್ನು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಪದ್ಮನಾಭರಿಗೆ ಡಿ*ಕ್ಕಿ ಹೊಡೆದಿದೆ.

    ಘಟನೆ ಕುರಿತು ಗಾಯಾಳಿನ ಸಂಬಂಧಿ ಗುರುಪ್ರಸಾದ್‌ ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BANTWAL

    ಬಂಟ್ವಾಳ: ಜಯರಾಮ ಆಚಾರ್ಯರ ಅಂತಿಮ ದರ್ಶನ

    Published

    on

    ಬಂಟ್ವಾಳ:  ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಯಕ್ಷಗಾನದ ಖ್ಯಾತ ಹಿರಿಯ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಅವರ ಪಾರ್ಥಿವ ಶರೀರ ಬಂಟ್ವಾಳದ ನಿವಾಸಕ್ಕೆ ತರಲಾಗಿದೆ.

    ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ನಡೆಯಲಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಹೃದಯಾಘಾತವಾಗಿತ್ತು.

    67 ವರ್ಷದ ಜಯರಾಮ ಆಚಾರ್ಯ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದರಾಗಿ ವಿವಿಧ ಮೇಳಗಳಲ್ಲೂ ಸೇವೆ ಸಲ್ಲಿಸಿದ್ದರು. ಅವರ ಪಾರ್ಥಿವ ಶರೀರ ಬಂಟ್ವಾಳ ನಿವಾಸಕ್ಕೆ ಆಗಮಿಸಿದ ವೇಳೆ ನೂರಾರು ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

    ಯಕ್ಷಗಾನ ಕಲಾವಿದರು, ಯಕ್ಷಗಾನ ಅಭಿಮಾನಿಗಳು ಹಾಗೂ ಊರ ಗಣ್ಯರು ಆಗಮಿಸಿ ಮೃತರಿಗೆ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದ್ದಾರೆ. ನಮ್ಮಕುಡ್ಲ ವಾಹಿನಿ ಯಕ್ಷ ತೆಲಿಕೆ ತಂಡದ ದಿನೇಶ್ ಕೊಡಪದವು ತಂಡ ಕೂಡಾ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡದುಕೊಂಡಿದ್ದಾರೆ. ಒಬ್ಬ ಮೇರು ಮಟ್ಟದ ಯಕ್ಷಗಾನದ ಕಲಾವಿದನನ್ನು ಕಳೆದುಕೊಂಡಿರುವುದಕ್ಕೆ ದಿನೇಶ್ ಕೊಡಪದವು ಅವರು ಸಂತಾಪ ಸೂಚಿಸಿದ್ದಾರೆ

    Continue Reading

    BANTWAL

    ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಇನ್ನಿಲ್ಲ; ಬಂಟ್ವಾಳ ಜಯರಾಮ ಆಚಾರ್ಯ ವಿಧಿವಶ

    Published

    on

    ಬಂಟ್ವಾಳ: ಬೆಂಗಳೂರಿಗೆ ಯಕ್ಷಗಾನ ಪ್ರದರ್ಶನಕ್ಕೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ (ಅ.21) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

     

    ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

     

     

    1957ರಲ್ಲಿ ಜನಿಸಿದ್ದ ಜಯರಾಮ ಆಚಾರ್ಯರ ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ತಾಳಮದ್ದಳೆಗಳನ್ನು ನೋಡುತ್ತಾ ಬೆಳೆದಿದ್ದ ಜಯರಾಮ ಆಚಾರ್ಯರು ತಂದೆಯವರ ಜತೆ ಯಕ್ಷಗಾನ ಪ್ರದರ್ಶನಗಳಿಗೆ ಹೋಗಿ‌ ಆಸಕ್ತಿ ಬೆಳೆಸಿಕೊಂಡಿದ್ದರು. ನಾಟ್ಯಾಭ್ಯಾಸ ಮಾಡುವ ಮೊದಲೇ ಒಂದಷ್ಟು ಮೇಳಗಳಲ್ಲಿ ಸೇವೆ ಸಲ್ಲಿಸಿರುವುದು ಅವರ ಹೆಗ್ಗಳಿಕೆಯಾಗಿದೆ.

    ಶ್ರೀ ಕ್ಷೇತ್ರ ಧರ್ಮಸ್ಥಳದ ಲಲಿತಾ ಕಲಾಕೇಂದ್ರದಲ್ಲಿ ಪಡ್ರೆ ಚಂದು ಅವರಿಂದ ಯಕ್ಷಗಾನ ನಾಟ್ಯವನ್ನು ಕಲಿತಿದ್ದು, ಆ ಸಂದರ್ಭದಲ್ಲಿ ಈಗಿನ ಹಲವು ಪ್ರಸಿದ್ಧ ಕಲಾವಿದರು ಅವರ ಸಹಪಾಠಿಗಳಾಗಿದ್ದರು.

    Continue Reading

    LATEST NEWS

    Trending